ನ್ಯೂಸ್ ಕಡಬ

ಮರಳುಗಾರಿಕೆಗೆ ಯಂತ್ರ ಬಳಸುವಂತಿಲ್ಲ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಸಿಆರ್‌ಝಡ್ ಪ್ರದೇಶದಲ್ಲಿ ಮರಳು ತೆರವು ಹಾಗೂ ಲೋಡಿಂಗ್ ಕಾರ್ಯಗಳನ್ನು ಯಂತ್ರಗಳ ಮೂಲಕ ನಡೆಸಿದರೆ ಅಂತಹವರ ಪರವಾನಿಗೆ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ ನೀಡಿದ್ದಾರೆ. ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಅನಧಿಕೃತ ಉಪ ಖನಿಜ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮರಳು ತೆಗೆಯಲು ಯಾವುದೇ […]

ಮರಳುಗಾರಿಕೆಗೆ ಯಂತ್ರ ಬಳಸುವಂತಿಲ್ಲ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ Read More »

ಕರಾವಳಿ

ಮಂಗಳೂರು: ರೌಡಿಶೀಟರ್ ಹತ್ಯೆ ಪ್ರಕರಣ ➤ ಎಂಡು ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮಂಗಳೂರಿನಲ್ಲಿ ನಡೆದ ರೌಡಿಶೀಟರ್ ಇಂದ್ರಜಿತ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ್ದು, ಬರ್ಕೆ ಪೊಲೀಸರು ವಿಚಾರಣೆ ನಡೆಸಿ 8 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.     ಸ್ನೇಹಿತನೊಬ್ಬನ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಅಲ್ಲಿಂದ ಮರಳಿ ಬರುವ ಸಂದರ್ಭದಲ್ಲಿ ಕಾದು ಕುಳಿತಿದ್ದ ಹಂತಕರು ಈ ಕೃತ್ಯ ಎಸಗಿದ್ದರು.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬರ್ಕೆ ಪೊಲಿಸರುಈಗಾಗಲೇ 17ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿ, ಈ ಪೈಕಿ ಸದ್ಯ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು: ರೌಡಿಶೀಟರ್ ಹತ್ಯೆ ಪ್ರಕರಣ ➤ ಎಂಡು ಮಂದಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಎಸ್ ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 28: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸದಾಶಿವ ನಗರದ ಮನೆ ಯಲ್ಲಿ ನಡೆದಿದೆ .   ಕಳೆದ ದಿನ  ಸಂಜೆ 7.30 ರ ವೇಳೆಗೆ 10 ಕ್ಕೂ ಹೆಚ್ಚು ನಿದ್ರೆ ಮಾತೆಗಳನ್ನು ಸೇವಿಸಿ ಅಸ್ವಸ್ಥರಾಗಿದ್ದ , ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಸಂತೋಷ್ ರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಮಾನಸಿಕ

ಬಿಎಸ್ ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ Read More »

ಕರ್ನಾಟಕ

ಮಂಗಳೂರು: ಗಾಂಜಾ ಸಾಗಟ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮಂಗಳೂರಿನ ಪಡೀಲ್ ಜಂಕ್ಷನ್ ನಿಂದ ಬಿಕರ್ನಕಟ್ಟೆಗೆ ಸಂಚರಿಸುವ ರಸ್ತೆಯಲ್ಲಿ ಪಡುಮರೋಳಿಯ ದೇವಸ್ಥಾನದ ದ್ವಾರ ಬಳಿ ಮಹಾರಾಷ್ಟ್ರ ನೋಂದಣಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು. ಗಾಂಜಾ ಸಾಗಾಟ ಜಾಲ ಬೇಧಿಸಿರುವ ಮಂಗಳೂರು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.     ಆರೋಪಿಗಳನ್ನು ಕಾಸರಗೋಡು ನಿವಾಸಿಗಳಾದ ಇಬ್ರಾಹಿಂ ಮಡನ್ನೂರು, ಅಬ್ದುಲ್ ನಿಜಾದ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಹಾಗೂ ಕೇರಳಕ್ಕೆ ತೆರಳುತ್ತಿತ್ತು. ಗಾಂಜಾ ಸಾಗಾಟದ ವಾಹನವನ್ನು ತಡೆದು ನಿಲ್ಲಿಸಿ ಬರೋಬ್ಬರಿ 24 ಕೆ.ಜಿ ಗಾಂಜಾ

ಮಂಗಳೂರು: ಗಾಂಜಾ ಸಾಗಟ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್,ಜೀಪ್ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 28: ಕಳೆದ ದಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ-ಪರ್ಲಡ್ಕ ಬೈಪಾಸ್ ರಸ್ತೆಯ ಶಿವನಗರ ಎಂಬಲ್ಲಿ ಬೈಕ್ ಮತ್ತು ಬೊಲೆರೊ ಜೀಪು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪರ್ಲಡ್ಕದ ಹಾಸೀಮ್(19) ಎಂದು ಗುರುತಿಸಲಾಗಿದೆ.     ಹಾಸೀಮ್ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಬೈಪಾಸ್ ರಸ್ತೆಗೆ ಎಂಟ್ರಿ ಕೊಡುತ್ತಿದ್ದ ಬೊಲೆರೊ ಜೀಪು ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ತೀವ್ರ ಗಾಯಗೊಂಡಿದ್ದು,

ಪುತ್ತೂರು: ಬೈಕ್,ಜೀಪ್ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತಾಧಿಕಾರಿಯಾಗಿ ಡಾ.ಯತೀಶ್ ಉಳ್ಳಾಲ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 28: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿದ್ದ ಅಪರ ಜಿಲ್ಲಾಧಿಕಾರಿ ರೂಪಾ ಅವರನ್ನು ಬದಲಾಯಿಸಲಾಗಿದ್ದು, ಪುತ್ತೂರು ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರನ್ನು ನೇಮಕ ಮಾಡಲಾಗಿದೆ.     ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸರ್ಕಾರದ ಆದೇಶದ ಪ್ರಕಾರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ರ ವಿಧಿ 29 ರ ಅನ್ವಯ ದೇವಾಲಯದ ದೈನಂದಿನ ಆಡಳಿತ ನಿರ್ವಹಣೆ ಹಾಗೂ ಆರ್ಥಿಕ ವ್ಯವಹಾರ ನಿರ್ವಹಿಸುವ ದೃಷ್ಟಿಯಿಂದ ಅಪರ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತಾಧಿಕಾರಿಯಾಗಿ ಡಾ.ಯತೀಶ್ ಉಳ್ಳಾಲ್ Read More »

ಕರಾವಳಿ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ನಗರದ ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ ಉಗ್ರ ಸಂಘಟನೆ ಪರವಾದ ಗೋಡೆ ಬರಹಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ‌.     ಈಗಾಗಲೇ ಘಟನೆ ಸಂಬಂಧ ಶಾಸಕರು, ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದ್ದಾಗಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯ ಪರವಾಗಿ ಕಂಡು ಬಂದಿರುವ ಗೋಡೆ ಬರಹವು ಆತಂಕಕಾರಿ. ಇಂತಹ ರಾಷ್ಟ್ರ ವಿರೋಧಿ ಕೃತ್ಯ ಸಹಿಸಲಾಗದು. ಈ ವಿಚಾರವಾಗಿ ಈಗಾಗಲೇ ಪೊಲೀಸ್ ಅಧಿಕಾರಿಗಳ ಜೊತೆ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ Read More »

ಕರಾವಳಿ

ಮಲ್ಪೆ, ಉಡುಪಿ, ಮಣಿಪಾಲ್ ಗೆ 130 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿ

(ನ್ಯೂಸ್ ಕಡಬ) newskadaba.com ಉಡುಪಿ ನ. 27: ಮಧ್ಯಪ್ರದೇಶದ ಭೋಪಾಲ ಮಾದರಿಯಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದ(ಪಿಪಿಪಿ ಮಾಡೆಲ್‌) ಸ್ಮಾರ್ಟ್‌ ಸಿಟಿ ಯೋಜನೆ ಮಣಿಪಾಲ, ಉಡುಪಿ, ಮಲ್ಪೆಯಲ್ಲಿ ಜಾರಿ ಪ್ರಸ್ತಾಪವನ್ನು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್‌. ನಾಯಕ್‌ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ನಗರಸಭೆ ಸಾಮಾನ್ಯ ಸಭೆಯ ಮುಂದಿಡಲಾಯಿತು. ನಗರಸಭೆಗೆ ಯಾವುದೇ ಖರ್ಚಿಲ್ಲದೆ ಸೇವಾ ಶುಲ್ಕ, ಜಾಹೀರಾತು ಆದಾಯ ತರುವ ಯೋಜನೆಗೆ 130 ಕೋಟಿ ರೂ. ವೆಚ್ಚವಾಗಲಿದ್ದು, ಡಿಪಿಆರ್‌ ಸಿದ್ಧವಾಗಿದೆ. ನಗರಸಭೆ ನಿರ್ಣಯವನ್ನು ಸರಕಾರಕ್ಕೆ ಕಳುಹಿಸಿ ಅಂಗೀಕಾರ ಬಳಿಕ ಗ್ಲೋಬಲ್‌ ಟೆಂಡರ್‌

ಮಲ್ಪೆ, ಉಡುಪಿ, ಮಣಿಪಾಲ್ ಗೆ 130 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿ Read More »

ಕರಾವಳಿ

ಕಡಬ: ಕಬಡ್ಡಿಯನ್ನು ಪುನರಾಂಭಿಸುವಂತೆ ಕಡಬ ತಹಶೀಲ್ದಾರ್ ಗೆ ಅಮೆಚ್ಚೂರು ಕಬಡ್ಡಿ ಅಸೋಸಿಯೇಷನ್ ನಿಂದ ಮನವಿ

(ನ್ಯೂಸ್ ಕಡಬ) newskadaba.com ಕಡಬ ನ. 27: ಗ್ರಾಮೀಣ ಕ್ರೀಡೆ ಕಬಡ್ಡಿ ಪಂದ್ಯಾಟವು ಕೊರೋನಾ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದು, ಮತ್ತೆ ಪುನರಾರಂಭಿಸಲು ತಾಲೂಕು ದಂಡಾಧಿಕಾರಿಗಳಿಗೆ ಕಡಬ ತಾಲೂಕು ಅಮೆಚ್ಚೂರು ಕಬಡ್ಡಿ ಅಸೋಸಿಯೇಷನ್ ನಿಂದ ಮನವಿ ಸಲ್ಲಿಸಲಾಯಿತು.     ಅಧ್ಯಕ್ಷ ಪಿ.ಯಂ. ಮೊಯಿದೀನ್ ಮೂಲೆ, ಪ್ರಧಾನ ಕಾರ್ಯದರ್ಶಿ ಅಶ್ರಫ್ ಶೇಡಿಗುಂಡಿ, ಉಪಸ್ಥಿತರಿದ್ದರು. ಕೊರೋನಾ ಕಾನೂನು ನಿಯಮಗಳನ್ನು ಪಾಲಿಸಿ ಕಬಡ್ಡಿ ಕ್ರೀಡಾಕೂಟ ಸಂಘಟಿಸುವ ಸಂಘಟನೆಗಳಿಗೆ ಅನುಮತಿ ನೀಡಲು ಅವಕಾಶ ಕಲ್ಪಿಸುವಂತೆ ಕೇಳಿಕೊಳ್ಳಲಾಯಿತಿ. ಉಪ ತಹಸಿಲ್ದಾರರಾದ ಮನೋಹರ್ ಮೂಲಕ ಮನವಿ ಸಲ್ಲಿಸಲಾಯಿತು.  

ಕಡಬ: ಕಬಡ್ಡಿಯನ್ನು ಪುನರಾಂಭಿಸುವಂತೆ ಕಡಬ ತಹಶೀಲ್ದಾರ್ ಗೆ ಅಮೆಚ್ಚೂರು ಕಬಡ್ಡಿ ಅಸೋಸಿಯೇಷನ್ ನಿಂದ ಮನವಿ Read More »

ಕರಾವಳಿ

ಅಮರಮುಡ್ನೂರು: ಘನ ಮತ್ತು ದ್ರವ್ಯ ತ್ಯಾಜ್ಯ ವಿಲೇವಾರಿ ನಿರ್ವಹಣಾ ಘಟಕ ನಿರ್ಮಾಣ ಕಾಮಗಾರಿ ಕೊನೆಯ ಹಂತ

(ನ್ಯೂಸ್ ಕಡಬ) newskadaba.com ಅಮರಮುಡ್ನೂರು ನ. 27: ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿಯಲ್ಲಿ ರೂ.20 ಲಕ್ಷ ಅನುದಾನದಲ್ಲಿ ಪಂಚಾಯತ್ ನ ಪದವು ಎಂಬಲ್ಲಿ ಘನ ಮತ್ತು ದ್ರವ್ಯ ತ್ಯಾಜ್ಯ ವಿಲೇವಾರಿ ನಿರ್ವಹಣಾ ಘಟಕ ನಿರ್ಮಾಣ ಕೊನೆಯ ಹಂತದ ಕಾಮಗಾರಿಯ ಕೆಲಸ ನಡೆಯುತ್ತಿದೆ.     ಮುಂದಿನ ತಿಂಗಳಿನಿಂದ ತ್ಯಾಜ್ಯ ಸಂಗ್ರಹದ ಕಾರ್ಯರಂಭವಾಗಲಿದ್ದು, ಕಸ ವಿಲೇವಾರಿಗೆ ಸ್ವಚ್ಚತಾ ವಾಹಿನಿ ಮಿನಿ ಟೆಂಪೊ ವಾಹನ(ಟಾಟಾ ಎಸ್) ಕೂಡ ಈಗಾಗಲೇ ಬಂದಿರುತ್ತದೆ.    

ಅಮರಮುಡ್ನೂರು: ಘನ ಮತ್ತು ದ್ರವ್ಯ ತ್ಯಾಜ್ಯ ವಿಲೇವಾರಿ ನಿರ್ವಹಣಾ ಘಟಕ ನಿರ್ಮಾಣ ಕಾಮಗಾರಿ ಕೊನೆಯ ಹಂತ Read More »

ಕರಾವಳಿ
Scroll to Top