ನ್ಯೂಸ್ ಕಡಬ

ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ

(ನ್ಯೂಸ್ ಕಡಬ)newskadaba.com ಉಡುಪಿ,ಆ.06. ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ದೂರದರ್ಶನದ ವರದಿಗಾರ ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸೌತ್‌ ಕೆನರಾ ಫೋಟೋಗ್ರಾಫ‌ರ್ಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರೂ ಆಗಿದ್ದ ಅವರು ಹಲವಾರು ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು.ಕಲ್ಮಾಡಿ ಮನೆಯಲ್ಲಿ ಇವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ನಡೆಯಲಿದ್ದು, ಇಂದೇ ಅಂತ್ಯಕ್ರಿಯೆ ನಡೆಯಲಿದೆ.

ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ Read More »

ಕರಾವಳಿ

ವಯನಾಡು ಭೂಕುಸಿತ        ಸಂತ್ರಸ್ತರಿಗೆ 25 ಲಕ್ಷ ರೂ. ದೇಣಿಗೆ ನೀಡಿದ ಅಲ್ಲು ಅರ್ಜುನ್

(ನ್ಯೂಸ್ ಕಡಬ)newskadaba.com ತಿರುವನಂತಪುರಂ,ಆ.06. ಭೂಕುಸಿತದಿಂದ ವಯನಾಡು ಅಕ್ಷರಶಃ ನಲುಗಿ ಹೋಗಿದ್ದು, ನೂರಾರು ಮಂದಿ ಸಾವನ್ನಪ್ಪಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ತೆಲುಗಿನ ಸ್ಟಾರ್ ನಟ ಅಲ್ಲು ಅರ್ಜುನ್ ಸಂತ್ರಸ್ತರಿಗೆ ನೆರವಾಗಲು ಮುಂದಾಗಿದ್ದಾರೆ. ವಯನಾಡು ಭೂಕುಸಿತ ದುರಂತದಿಂದಾಗಿ ಸಮಕಷ್ಟದಲ್ಲಿರುವವರಿಗೆ ರಶ್ಮಿಕಾ ಮಂದಣ್ಣ, ಮೋಹನ್ ಲಾಲ್ ಅವರು ಸಹಾಯ ಮಾಡಿದ್ದಾರೆ. ಇದೀಗ ಅಲ್ಲು ಅರ್ಜುನ್ 25 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಈ ಕುರಿತು ಸ್ವತಃ ನಟ ಅಲ್ಲು ಅರ್ಜುನ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ವಯನಾಡು ಭೂಕುಸಿತ        ಸಂತ್ರಸ್ತರಿಗೆ 25 ಲಕ್ಷ ರೂ. ದೇಣಿಗೆ ನೀಡಿದ ಅಲ್ಲು ಅರ್ಜುನ್ Read More »

ಕರ್ನಾಟಕ

ಮಂಗಳೂರು – ಬೆಂಗಳೂರು ನಡುವಿನ ರೈಲು ಸಂಚಾರ ಆ.8ರವರೆಗೆ ರದ್ದು

(ನ್ಯೂಸ್ ಕಡಬ)newskadaba.com ಮಂಗಳೂರು,ಆ.06. ಸಕಲೇಶಪುರದ ಎಡಕುಮೇರಿ ಮತ್ತು ಕಡಗರಳ್ಳಿ ನಡುವಿನ ದೋಣಿಗಲ್‌ ನಲ್ಲಿ ಭೂಕುಸಿತದಿಂದ ಸ್ಥಗಿತಗೊಂಡಿರುವ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಆಗಸ್ಟ್ 8ರ ನಂತರವೇ ಪುನರಾರಂಭಗೊಳ್ಳಲಿದೆ ಎಂದು ಮೈಸೂರು ರೈಲ್ವೆ ವಿಭಾಗ ಮಾಹಿತಿ ನೀಡಿದೆ. ಭಾರೀ ಭೂಕುಸಿತದಿಂದ ಹಳಿಯ ಮೇಲೆ ಮಣ್ಣು ಬಿದ್ದಿತ್ತು. ಪರಿಣಾಮ 12 ರೈಲುಗಳ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಕೆಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿತ್ತು. ಘಟನಾ ಸ್ಥಳದ ಪಕ್ಕದಲ್ಲಿ ರಿಟೈನರ್ ವಾಲ್ ನಿರ್ಮಾಣ ಕಾರ್ಯವು ತ್ವರಿತ ಗತಿಯಲ್ಲಿ ಸಾಗುತ್ತಿದೆ. ಟ್ರ್ಯಾರಕ್

ಮಂಗಳೂರು – ಬೆಂಗಳೂರು ನಡುವಿನ ರೈಲು ಸಂಚಾರ ಆ.8ರವರೆಗೆ ರದ್ದು Read More »

ಕರಾವಳಿ

ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ/ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ: ಕೆಮ್ಮಾರ ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ,ಆ.06. ಮಠ (ಪುಳಿತ್ತಡಿ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಬಾಲಕ/ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟದಲ್ಲಿ ಕೆಮ್ಮಾರ ಸರಕಾರಿ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಉಪ್ಪಿನಂಗಡಿ ವಲಯ ಮಟ್ಟದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಪಂದ್ಯಾಕೂಟದಲ್ಲಿ ಪಾಲ್ಗೊಂಡಿದ್ದರು. ಪಂದ್ಯಾಕೂಟದುದ್ದಕ್ಕೂ ಉತ್ತಮ ಪ್ರದರ್ಶನ ತೋರಿದ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿನ ವಿದ್ಯಾರ್ಥಿನಿಯರಾದ ಜಮೀಲತ್ ನೌಶೀನ, ಜೈನಬ ವಫಿಯ್ಯ, ಜೈನಬ ವಸೀಯ್ಯ ರವರಿಗೆ ಅರ್ಹವಾಗಿಯೇ

ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ/ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ: ಕೆಮ್ಮಾರ ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ Read More »

ಕರಾವಳಿ

ಬೆಳ್ತಂಗಡಿ: ಕುಟುಂಬ ಸಮೇತರಾಗಿ ಶ್ರೀ ಸದಾಶಿವ ದೇವಸ್ಥಾನಕ್ಕೆ ರಾಕಿಂಗ್‌ ಸ್ಟಾರ್‌ ಯಶ್‌ ಭೇಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.06. ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ದವಾದ ಸುರ್ಯ ಶ್ರೀ ಸದಾಶಿವ ದೇವಸ್ಥಾನಕ್ಕೆ ರಾಕಿಂಗ್‌ ಸ್ಟಾರ್‌ ಯಶ್‌ ಅವರು ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ರಾಧಿಕಾ ಪಂಡಿತ್ ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ತಮ್ಮ ಹರಕೆ ತೀರಿಸಲು ದಂಪತಿ ಬಂದಿದ್ದರು ಎನ್ನಲಾಗಿದೆ.ಇದೇ ವೇಳೆ ಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಯಶ್ ದಂಪತಿಗೆ ಸಾಥ್ ನೀಡಿದ್ದಾರೆ. ಸುರ್ಯ ದೇವಸ್ಥಾನದಿಂದ

ಬೆಳ್ತಂಗಡಿ: ಕುಟುಂಬ ಸಮೇತರಾಗಿ ಶ್ರೀ ಸದಾಶಿವ ದೇವಸ್ಥಾನಕ್ಕೆ ರಾಕಿಂಗ್‌ ಸ್ಟಾರ್‌ ಯಶ್‌ ಭೇಟಿ Read More »

ಕರಾವಳಿ

ಶಾಲಾ ಬಸ್ ಹರಿದು ಬಾಲಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಆ.06. ಶಾಲಾ ಬಸ್ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದ ದಾರುಣ ಘಟನೆ ನಡೆದಿದೆ ಎನ್ನಲಾಗಿದೆ. ಮನೆಯಿಂದ ಅಂಗನವಾಡಿಗೆ ಹೋಗುತ್ತಿದ್ದ ವೇಳೆ ಶಾಲಾ ಬಸ್ ಹರಿದು ಗ್ರಾಮದ 5 ವರ್ಷದ ಬಾಲಕ ಬಸವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಅಪಘಾತದ ಬಳಿಕ ಶಾಲಾ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.    

ಶಾಲಾ ಬಸ್ ಹರಿದು ಬಾಲಕನೋರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿಗೆ 2 ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ              ಪಟ್ಟಿಯಲ್ಲಿವೆ 7 ಸ್ಥಳಗಳು                     

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.06. ರಾಜ್ಯ ರಾಜಧಾನಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 7 ಸ್ಥಳಗಳನ್ನು ಗುರುತಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಕ್ಷಿಪ್ರಗತಿಯಲ್ಲಿ ಪ್ರಸ್ತಾವನೆ ಸಲ್ಲಿಸಲು ನಿರ್ಣಾಯಕ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪ್ರಸ್ತಾವನೆ ಸಂಬಂಧ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಐಡೆಕ್ ಮತ್ತು ಬೋಸ್ಟನ್ ಕನ್ಸಲ್ಟೆನ್ಸಿ ಗ್ರೂಪ್ ಸಂಸ್ಥೆಗಳು ಸಿದ್ಧಪಡಿಸಿರುವ ಪ್ರಾತ್ಯಕ್ಷಿಕೆಯನ್ನು ಅವರು ವೀಕ್ಷಿಸಿದರು.

ಬೆಂಗಳೂರಿಗೆ 2 ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ              ಪಟ್ಟಿಯಲ್ಲಿವೆ 7 ಸ್ಥಳಗಳು                      Read More »

ಕರ್ನಾಟಕ

ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ನುಗ್ಗಿದ ಅಪರಚಿತ ವ್ಯಕ್ತಿ

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.06. ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ಅಪರಚಿತ ವ್ಯಕ್ತಿಯೋರ್ವ ನುಗ್ಗಿದ ಘಟನೆ ವರದಿಯಾಗಿದೆ. ಕಾವಲುಗಾರ ನನ್ನು ಕಂಡು ಈತ ಪರಾರಿಯಾಗಿದ್ದಾನೆ. ನ್ಯಾಯಾಲಯ ಕಟ್ಟಡದೊಳಗೆ ನುಗ್ಗಿದ ಈತ ಜಿಲ್ಲಾ ನ್ಯಾಯಾಧೀಶ ರವರ ಕಚೇರಿ ತನಕ ತೆರಳಿದ್ದು , ಈತನ ಬಳಿ ಕಬ್ಬಿಣದ ರಾಡ್ ಕಂಡು ಬಂದಿದೆ. ಈತ ಕಳವಿಗಾಗಿ ಬಂದಿದ್ದನೇ ಅಥವಾ ಕಡತಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಒಳನುಗ್ಗಿದ್ದನೇ ಎಂಬ ಬಗ್ಗೆ ಸ್ಪಷ್ಟ ಗೊಂಡಿಲ್ಲ. ವಿದ್ಯಾನಗರ ಠಾಣಾ ಪೊಲೀಸರು ಸ್ಥಳಕ್ಕಾಮಿಸಿ ತನಿಖೆ ಆರಂಭಿಸಿದ್ದಾರೆ.  

ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ನುಗ್ಗಿದ ಅಪರಚಿತ ವ್ಯಕ್ತಿ Read More »

ಕರಾವಳಿ, ಕ್ರೈಮ್ ನ್ಯೂಸ್

18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.06. ಸುಮಾರು 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಿರಿಯಡ್ಕ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳಾದ ಮಂಜುನಾಥ ಮರಬದ ಹಾಗೂ ಕಸ್ತೂರಿ ಕುಕನೂರು ರವರ ಮಾರ್ಗದರ್ಶನದಂತೆ ಠಾಣೆಯ ಸಿಬ್ಬಂದಿಗಳಾದ ಗುರುರಾಜ್ ದಯಾನಂದ ಪ್ರಭು ಹಾಗೂ ಕೃಷ್ಣ ಪೂಜಾರಿಯವರು ಆರೋಪಿಯನ್ನು ಬಂಧಿಸಿದ್ದಾರೆ. ಕಾಫಿ ಒಂದರಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.  

18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಆನ್ ಲೈನ್ ಗೇಮ್ ಅವಾಂತರ ನಾಪತ್ತೆಯಾಗಿದ್ದ ಯುವತಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06. ಮೊಬೈಲ್‌ ನಲ್ಲಿ ಪಬ್‌ಜಿ ಆನ್‌ ಲೈನ್ ಆಟವಾಡುವ ಹವ್ಯಾಸವಿದ್ದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಯುವತಿಯು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾಗಿದ್ದ ಯುವತಿಯನ್ನು ಕೆಲಿಸ್ತಾ ಫೆರಾವೊ (18)ಎಂದು ಗುರುತಿಸಲಾಗಿದ್ದು, ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ ಗೆ ಸೇರ್ಪಡೆಗೊಂಡಿದ್ದರು. ಈಕೆ ಮನೆಯಿಂದ ಹೊರಕ್ಕೆ ಹೋಗಿದ್ದಳು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಈ ವೇಳೆ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವುದು ಕಂಡುಬಂದಿದೆ. ಬಳಿಕ

ಮಂಗಳೂರು: ಆನ್ ಲೈನ್ ಗೇಮ್ ಅವಾಂತರ ನಾಪತ್ತೆಯಾಗಿದ್ದ ಯುವತಿ ಪತ್ತೆ Read More »

ಕರಾವಳಿ
Scroll to Top