ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳು ರದ್ದಾಗುತ್ತೆ ಲೈಸೆನ್ಸ್.!!
(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 19: ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ಲೈಸೆನ್ಸ್ ರದ್ದು ಮಾಡಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇನ್ನುಮುಂದೆ ಬೈಕ್ ಸವಾರ ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳ ಕಾಲ ವಾಹನ ಪರವಾನಿಗಿ ಅಮಾನತುಗೊಳಿಸಬೇಕು ಎಂದು ಸಾರಿಗೆ ಇಲಾಖೆ ಆಯುಕ್ತರ ಕಚೇರಿ ಆದೇಶ ಹೊರಡಿಸಿದೆ. ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.
ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳು ರದ್ದಾಗುತ್ತೆ ಲೈಸೆನ್ಸ್.!! Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್








