ನ್ಯೂಸ್ ಕಡಬ

ರಾಜ್ಯದಲ್ಲಿ ಮುಂದಿನ ತಿಂಗಳು ಪಿಯು,ಡಿಗ್ರಿ ಕಾಲೇಜು ಓಪನ್.!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 16: ರಾಜ್ಯದಲ್ಲಿ ನವೆಂಬರ್ ತಿಂಗಳಲ್ಲಿ ಪಿಯು, ಡಿಗ್ರಿ ಕಾಲೇಜು ಪುನಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.   ಈ ಕುರಿತು ಸುಳಿವು ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವತ್ಥನಾರಾಯಣ್, ನಮ್ಮ ಸರ್ಕಾರ ನೀಟ್, ಸಿಇಟಿ ಮತ್ತು ಇತರ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ ಮತ್ತು ಆ ಎಲ್ಲಾ ವಿಶ್ವಾಸದಿಂದ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಕಾಲೇಜುಗಳನ್ನು ಸಹ ತೆರೆಯುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ.

ರಾಜ್ಯದಲ್ಲಿ ಮುಂದಿನ ತಿಂಗಳು ಪಿಯು,ಡಿಗ್ರಿ ಕಾಲೇಜು ಓಪನ್.! Read More »

ಕರಾವಳಿ

ಪುತ್ತೂರು, ಕಡಬದಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.15: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 15 ಮಂದಿಯಲ್ಲಿ ಕೊರೋನಾ ದೃಢಗೊಂಡಿದೆ.     ಕಡಬ ತಾಲೂಕಿನ ಆತೂರಿನ 3 ವರ್ಷದ ಹೆಣ್ಣು ಮಗು, ಬಿಳಿನೆಲೆಯ 70 ವರ್ಷದ ಮಹಿಳೆ, 75 ವರ್ಷದ ವ್ಯಕ್ತಿ, ಕುಂತೂರಿನ 19 ವರ್ಷದ ಯುವತಿಯಲ್ಲಿ ಕೊರೋನಾ ಪತ್ತೆಯಾಗಿದೆ.  

ಪುತ್ತೂರು, ಕಡಬದಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಸ್ಯಾಂಡಲ್‍ವುಡ್ ಡ್ರಗ್ ಕೇಸ್ ಪ್ರಕರಣ ➤ ಬಾಲಿವುಡ್ ನಟ ವಿವೇಕ್ ಒಬೆರಾಯ್‍ಗೆ ಸಿಸಿಬಿ ಶಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 15: ಸ್ಯಾಂಡಲ್‍ವುಡ್ ಡ್ರಗ್ ಕೇಸ್ ವಿಚಾರವಾಗಿ ಇಂದು ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.   ಡ್ರಗ್ ಮಾಫಿಯಾ ಕೇಸಿನಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವಾ ನಾಪತ್ತೆಯಾಗಿದ್ದು, ಆತನನನ್ನು ವಿಚಾರಣೆಗೆ ಒಳಪಡಿಸಲು ಸಿಸಿಬಿ ಪೊಲೀಸರು ಹುಡುಕುತ್ತಿದ್ದಾರೆ. ಆರೋಪಿ ಆದಿತ್ಯ ಆಳ್ವಾ, ನಟ ವಿವೇಕ್ ಒಬೆರಾಯ್ ಅವರ ಸಂಬಂಧಿಯಾಗಿದ್ದು ಅವರ ಮನೆಯಲ್ಲಿ ಇರಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆ ಇಂದು ಒಬೆರಾಯ್ ಮನೆ ಮೇಲೆ

ಸ್ಯಾಂಡಲ್‍ವುಡ್ ಡ್ರಗ್ ಕೇಸ್ ಪ್ರಕರಣ ➤ ಬಾಲಿವುಡ್ ನಟ ವಿವೇಕ್ ಒಬೆರಾಯ್‍ಗೆ ಸಿಸಿಬಿ ಶಾಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೈಲಿನ ಪಂಜರದಲ್ಲಿ ರಾ’ಗಿಣಿ’ ಯ ಗೋಳಾಟ ➤ ಆಗುತ್ತಿಲ್ಲ ಆಸ್ಪತ್ರೆಗೆ ಸೇರಿಸಿ ಎಂದ ರಾ’ಗಿಣಿ’

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 15: ಡ್ರಗ್ಸ್ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟಿ ರಾಗಿಣಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆಯಂತೆ. ಹೀಗಾಗಿ ರಾತ್ರಿ ಪೂರ್ತಿ ಗೋಳಾಡಿದ್ದು, ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆಪರಪ್ಪನ ಅಗ್ರಹಾರದಲ್ಲಿರುವ ರಾಗಿಣಿ, ರಾತ್ರಿಯಿಂದ ಹೆಚ್ಚು ಬೆನ್ನು ನೋವು ಎಂದು ಜೈಲಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಅಲ್ಲದೆ ತುರ್ತಾಗಿ ನನ್ನನ್ನು ಆಸ್ಪತ್ರೆಗೆ ಸೇರಿಸಿ, ಆಗುತ್ತಿಲ್ಲ ಎಂದು ಗೋಳಾಡಿದ್ದಾರೆ. ನಂತರ ಜೈಲಿನ ಆಸ್ಪತ್ರೆಗೆ ಸೇರಿಸಲಾಗಿದ್ದು, ರಾತ್ರಿ ಪೂರ್ತಿ ಚಿಕಿತ್ಸೆ ಪಡೆದಿದ್ದಾರೆ. ಈ ಮೂಲಕ ಅಧಿಕಾರಿಗಳ ನಿದ್ದೆಗೆಡಿಸಿದ್ದಾರೆ. ರಾಗಿಣಿ ಗೋಳಾಟ

ಜೈಲಿನ ಪಂಜರದಲ್ಲಿ ರಾ’ಗಿಣಿ’ ಯ ಗೋಳಾಟ ➤ ಆಗುತ್ತಿಲ್ಲ ಆಸ್ಪತ್ರೆಗೆ ಸೇರಿಸಿ ಎಂದ ರಾ’ಗಿಣಿ’ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪುತ್ತೂರು ದಸರಕ್ಕೆ ಕೊರೋನಾ ಕಾರ್ಮೋಡ ➤ ಈ ಬಾರಿ ಪುತ್ತೂರು ದಸರ ರದ್ದು

(ನ್ಯೂಸ್ ಕಡಬ) newskadaba.com ಪುತ್ತೂರು, ಅ.15: ಸಾಂಸ್ಕೃತಿಕ ಉತ್ಸವ ಪುತ್ತೂರು ದಸರಾ ನಾಡಹಬ್ಬವನ್ನು ಈ ವರ್ಷ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮವಾಗಿ ರದ್ದುಗೊಳಿಸಲಾಗಿದೆ ಎಂದು ದಸರಾ ನಾಡಹಬ್ಬ ಸಮಿತಿ ಅಧ್ಯಕ್ಷ ಪಾಟೆಡ್ಕ ಕೃಷ್ಣ ಭಟ್‌ ರವರು ತಿಳಿಸಿದ್ದಾರೆ.     ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಳೆದ ವರ್ಷ 67 ನೇ ದಸರಾ ನಾಡ ಹಬ್ಬ 8 ದಿನ ವಿಜೃಂಭಣೆಯಿಂದ ನಡೆದಿದೆ. ಈ ವರ್ಷ ಜಗತ್ತಿನಾದ್ಯಂತ ಕೊರೋನಾ ಛಾಯೆ ಇರುವ ಹಿನ್ನಲೆಯಲ್ಲಿ ಮುಂಜಾಗರೂಕತೆ

ಪುತ್ತೂರು ದಸರಕ್ಕೆ ಕೊರೋನಾ ಕಾರ್ಮೋಡ ➤ ಈ ಬಾರಿ ಪುತ್ತೂರು ದಸರ ರದ್ದು Read More »

ಕರಾವಳಿ

ಮಣಿಪಾಲ ಪೊಲೀಸರಿಂದ ಡ್ರಗ್ ಪೆಡ್ಲರ್ ಬಂಧನ ➤ ರೂ. 4.63 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಅ. 15: ಮಣಿಪಾಲ ಪೊಲೀಸರು ಬುಧವಾರ ಒರ್ವ ವ್ಯಕ್ತಿಯನ್ನು ಬಂಧಿಸಿ ರೂ 4.63 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 54 ನಿಷೇದಿತ ಮಾತ್ರೆಗಳು, 30 ಗ್ರಾಂ ಬ್ರೌನ್ಶುಗರ್ ವಶಪಡಿಸಿಕೊಂಡಿದ್ದಾರೆ. ಬಂಧಿತ ವ್ಯಕ್ತಿಯನ್ನು ಬ್ರಹ್ಮಾವರ ಫಜಲ್ ಎಂದು ಗುರುತಿಸಲಾಗಿದೆ.ನಿಷೇದಿತ ಮಾದಕ ವಸ್ತುಗಳನ್ನು ಬ್ರಹ್ಮಾವರದಿಂದ ಮಣಿಪಾಲಕ್ಕೆ ಮಾರಾಟ ಮಾಡಲು ಬಂದಿರುವುದಾಗಿ ನೀಡಿದ ಖಚಿತ ಮಾಹಿತಿಯಂತೆ ದಾಳಿ ನಡೆಸಿ ಪೊಲೀಸರು ಆರೋಪಿಯಿಂದ 2 ಮೊಬೈಲ್ಪೋನ್ಗಳು, 54 ನಿಷೇದಿತ  ಮಾತ್ರೆಗಳು, 30 ಗ್ರಾಂ ಬ್ರೌನ್ಶುಗರ್, ಆಂದಾಜು

ಮಣಿಪಾಲ ಪೊಲೀಸರಿಂದ ಡ್ರಗ್ ಪೆಡ್ಲರ್ ಬಂಧನ ➤ ರೂ. 4.63 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಷೇಧಿತ ನೋಟುಗಳ ಚಲಾವಣೆ ದಂಧೆ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.15: ನಿಷೇಧಿತ ನೋಟುಗಳ ಚಲಾವಣೆ ದಂಧೆಯಲ್ಲಿ ತೊಡಗಿದ್ದ ಆರೋಪದಡಿ ಇಬ್ಬರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಅರೋಪಿಗಳನ್ನು ಶಿವಕುಮಾರ್ (44), ವಿಜಯ ಕುಮಾರ್ (40)  ಗುರುತಿಸಲಾಗಿದೆ.     ಜಾಲಹಳ್ಳಿ ಕ್ರಾಸ್ ಬಳಿ ಕಾರಿನಲ್ಲಿ ಬಂದು, ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಹಳೆಯ ನೋಟುಗಳನ್ನು ವಿದೇಶಕ್ಕೆ ಸಾಗಿಸಲು ಆರೋಪಿಗಳು ಯತ್ನಿಸುತ್ತಿದ್ದರು. ವಿದೇಶದಲ್ಲಿ ಭಾರತದ ಕರೆನ್ಸಿ ಚಲಾವಣೆಯ ಜಾಲ ಇರುವುದು ವಿಚಾರಣೆ ವೇಳೆ ಪತ್ತೆಯಾಗಿದೆ. ಬಂಧಿತರಿಂದ ಹಣ ಹಾಗೂ

ನಿಷೇಧಿತ ನೋಟುಗಳ ಚಲಾವಣೆ ದಂಧೆ ➤ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂಡುಬಿದಿರೆ: ಗೋಮಯದಿಂದ ಹಣತೆ ರೂಪಿಸಿದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಅ.15: ಪರಿಸರ ಸ್ನೇಹಿ ದೀಪಾವಳಿ ಆಚರಣೆಗಾಗಿ ರಾಷ್ಟ್ರೀಯ ಕಾಮಧೇನು ಆಯೋಗ ಗೋಮಯದಿಂದ (ಸಗಣಿ) ಹಣತೆ ತಯಾರಿಸುವ ಅಭಿಯಾನ ಕೈಗೆತ್ತಿಕೊಳ್ಳುವ ಮೊದಲೇ ಏಳನೇ ತರಗತಿ ವಿದ್ಯಾರ್ಥಿಯೋರ್ವ ಹಣತೆ ತಯಾರಿಸಿಯೇಬಿಟ್ಟಿದ್ದಾನೆ. ಈತ ಮೂಡುಬಿದಿರೆ ಜವಳಿ ಉದ್ಯಮಿ ಎಸ್.ಎನ್.ಬೋರ್ಕರ್-ಸ್ವಾತಿ ದಂಪತಿ ಪುತ್ರ.     ರೋಟರಿ ಸೆಂಟ್ರಲ್ ಸ್ಕೂಲ್‌ನ ಏಳನೇ ತರಗತಿಯ  ಸ್ಕೌಟ್ಸ್ ವಿದ್ಯಾರ್ಥಿಯಾಗಿದ್ದು, ಶಶಾಂಕ್ ಬೋರ್ಕರ್ ಸಗಣಿ ಜತೆ ಮೈದಾ ಬೆರೆಸಿ ಹಣತೆ ನಿರ್ಮಿಸಿದ್ದಾನೆ. ಒಂದೆರಡು ದಿನ ಚೆನ್ನಾಗಿ ಬಿಸಿಲಲ್ಲಿ ಒಣಗಿಸಿದ್ದರಿಂದ ಬಿದ್ದರೂ ಒಡೆಯುವುದಿಲ್ಲ.

ಮೂಡುಬಿದಿರೆ: ಗೋಮಯದಿಂದ ಹಣತೆ ರೂಪಿಸಿದ ವಿದ್ಯಾರ್ಥಿ Read More »

ಕರಾವಳಿ

ಮಂಗಳೂರು: ಖ್ಯಾತ ರಂಗ ಭೂಮಿ ನಿರ್ದೇಶಕ ಮಾಧವ ಜಪ್ಪು ಪಟ್ನ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.15: ತುಳು ರಂಗ ಭೂಮಿಯ ಹಿರಿಯ ಚಲನಚಿತ್ರ ನಟ, ನಿರ್ದೇಶಕ, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಮೊಕ್ತೇಸರ ಮಾಧವ ಜಪ್ಪು ಪಟ್ನ ಇಂದುನಿಧನರಾದರು.     ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಮೊಕ್ತೇಸರಾಗಿದ್ದ ಅವರು, ನವನಿಧಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರು ಕೂಡಾ ಆಗಿದ್ದರು. ಮಾಧವ ಜಪ್ಪು ಪಟ್ಲ ಅವರು ರಾಜ್ಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.  

ಮಂಗಳೂರು: ಖ್ಯಾತ ರಂಗ ಭೂಮಿ ನಿರ್ದೇಶಕ ಮಾಧವ ಜಪ್ಪು ಪಟ್ನ ನಿಧನ Read More »

ಕರಾವಳಿ

ಕುಚಿಪುಡಿಯ ಖ್ಯಾತ ನೃತ್ಯಗಾರ್ತಿ ಶೋಭಾ ನಾಯ್ಡು ವಿಧಿವಶ

(ನ್ಯೂಸ್ ಕಡಬ) newskadaba.com ಹೈದರಾಬಾದ್ ಅ. 15: ಕುಚಿಪುಡಿಯ ಖ್ಯಾತ ನೃತ್ಯಗಾರ್ತಿ ಶೋಭಾ ನಾಯ್ಡು ಹೈದರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಶೋಭಾ ನಾಯ್ಡು ಅಗಲಿಕೆಗೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಶೋಭಾ ಅವರಿಗೆ 1991 ರಲ್ಲಿ ಅವರಿಗೆ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 2001 ರಲ್ಲಿ ಭಾರತ ಸರ್ಕಾರದ ಪದ್ಮಶ್ರೀ ಗೌರವ ಮದ್ರಾಸ್‌ನ ಶ್ರೀ ಕೃಷ್ಣ ಗಣ

ಕುಚಿಪುಡಿಯ ಖ್ಯಾತ ನೃತ್ಯಗಾರ್ತಿ ಶೋಭಾ ನಾಯ್ಡು ವಿಧಿವಶ Read More »

ರಾಷ್ಟ್ರೀಯ ನ್ಯೂಸ್
Scroll to Top