ನ್ಯೂಸ್ ಕಡಬ

ಕಾಪು : ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಟೆಂಪೊ.!

(ನ್ಯೂಸ್ ಕಡಬ) newskadaba.com ಉಡುಪಿ, ಅ. 08: ಮರದ ತುಂಡು ಗಳನ್ನು ಸಾಗಿಸುತ್ತಿದ್ದ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಕಾಪು ಬಳಿ ಸಂಭವಿಸಿದೆ.   ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮರ ತುಂಬಿಸಿಕೊಂಡು ಹೋಗುತ್ತಿದ್ದ ಪಿಕಪ್ ಟೆಂಪೋವೊಂದು ಮಗುಚಿ ಬಿದ್ದಿದ್ದು, ಟೆಂಪೋದಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಾಪು ಠಾಣಾಧಿಕಾರಿ ರಾಜಶೇಖರ ಬಿ ಸಾಗನೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಕಾಪು : ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಟೆಂಪೊ.! Read More »

ಕರಾವಳಿ, ಕರ್ನಾಟಕ

ಮೀನುಗಾರಿಕೆ ದೋಣಿ ಮುಳುಗಡೆ ➤ 7 ಮೀನುಗಾರರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಾರವಾರ, ಅ. 08: ಮರಳುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗಿದ ಘಟನೆ ನಡೆದಿದ್ದು, ಅಚ್ಚರಿ ರೀತಿಯಲ್ಲಿ 7 ಮೀನುಗಾರರನ್ನು ರಕ್ಷಿಸಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಘಟನೆ ನಡೆದಿದೆ.   ತಾಲೂಕಿನ ಮಾನೀರ್ ಗ್ರಾಮದ ಸಮೀಪ ಅಘನಾಶಿನಿ ನದಿಯಲ್ಲಿ ಈ ಅವಘಡ ಸಂಭವಿಸಿದ್ದು, ದೋಣಿಯಲ್ಲಿದ್ದ 7 ಮಂದಿ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತರರ ಮೀನುಗಾರರೇ ಅವರನ್ನು ರಕ್ಷಿಸುವ ಮೂಲಕ ಜೀವ ಉಳಿಸಿದ್ದಾರೆ. ಸದ್ಯ ಯಾವುದೇ ದುರ್ಘಟನೆ ನಡೆಯದಂತೆ ಪಾರಾಗಿದ್ದಾರೆ. ಮರಳುಗಾರಿಕೆಗೆ ತೆರಳಿದ್ದ  ವೇಳೆ ದೋಣಿಯ ಮೇಲೆ

ಮೀನುಗಾರಿಕೆ ದೋಣಿ ಮುಳುಗಡೆ ➤ 7 ಮೀನುಗಾರರು ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ

ಆಂಧ್ರ ಸಿಎಂ ಪರಿಹಾರ ನಿಧಿ ಮೇಲೆ ಖದೀಮರ ಕಣ್ಣು ➤ ತುಳು ಚಿತ್ರರಂಗದ ನಿರ್ದೇಶಕ ಸೇರಿ ಆರು ಮಂದಿ ಅರೇಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 08: ಆಂಧ್ರದಲ್ಲಿ ಬಡವರ ನಿಧಿಯ ಹಣ ಲಪಟಾಯಿಸಲು ಯತ್ನ ನಡೆದಿದೆ. ಈ ಪ್ರಕರಣ ಸಂಬಂಧ ತುಳು ಸಿನಿಮಾ ನಿರ್ದೇಶಕ ಉದಯ್ ಕುಮಾರ್ ಕಾಂತಾವರ ಸೇರಿದಂತೆ ಆರು ಮಂದಿಯನ್ನು ಮೂಡಬಿದ್ರೆಯಲ್ಲಿ ಆಂಧ್ರ ಪೊಲೀಸರು ಬಂಧಿಸಿದ್ದಾರೆ.ಆಂಧ್ರಪ್ರದೇಶದಲ್ಲೂ ಸಿಎಂ ಪರಿಹಾರ ನಿಧಿ ಇದೆ. ಆದ್ರೆ ಸಂಕಷ್ಟದಲ್ಲಿರುವವರಿಗೆ ಸೇರಬೇಕಾದ ಹಣಕ್ಕೂ ಖದೀಮರು ಕನ್ನ ಹಾಕಲು ಯತ್ನಿಸಿದ್ದಾರೆ. ಸಿಎಂ ಪರಿಹಾರ ನಿಧಿಯಿಂದ ನೀಡಿದ್ದ ಚೆಕ್‌ಗಳನ್ನು ತಿರುಚಿ 117 ಕೋಟಿ ರೂಪಾಯಿ ಹಣವನ್ನು ಆಂಧ್ರ ಸಿಎಂ ಪರಿಹಾರ ನಿಧಿಯಿಂದ

ಆಂಧ್ರ ಸಿಎಂ ಪರಿಹಾರ ನಿಧಿ ಮೇಲೆ ಖದೀಮರ ಕಣ್ಣು ➤ ತುಳು ಚಿತ್ರರಂಗದ ನಿರ್ದೇಶಕ ಸೇರಿ ಆರು ಮಂದಿ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

RBI ನೂತನ ಡೆಪ್ಯುಟಿ ಗವರ್ನರ್‌ ಆಗಿ ಎಂ ರಾಜೇಶ್ವರ್‌ ರಾವ್‌ ಆಯ್ಕೆ

(ನ್ಯೂಸ್ ಕಡಬ) newskadaba.com ದೆಹಲಿ , ಅ. 08:  ಕೇಂದ್ರ ಸರ್ಕಾರವು ಬುಧವಾರ ತಡರಾತ್ರಿ ಎಂ.ರಾಜೇಶ್ವರ ರಾವ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್‌ನ ಹೊಸ ಉಪ ಗವರ್ನರ್ ಆಗಿ ನೇಮಕ ಮಾಡಿದೆ. ಪ್ರಸ್ತುತ ಅವರು ಬ್ಯಾಂಕಿಂಗ್ ನಿಯಂತ್ರಕದಲ್ಲಿ (regulator) ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.   ಕ್ಯಾಬಿನೆಟ್ ಕಾರ್ಯದರ್ಶಿ, ಆರ್‌ಬಿಐ ಗವರ್ನರ್ ಮತ್ತು ಹಣಕಾಸು ಸೇವೆಗಳ ಕಾರ್ಯದರ್ಶಿಯನ್ನು ಒಳಗೊಂಡ ಹಣಕಾಸು ವಲಯ ನಿಯಂತ್ರಣ ನೇಮಕಾತಿ ಶೋಧನಾ ಸಮಿತಿ ಆಗಸ್ಟ್ 21 ರಂದು ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿತ್ತು. ಆರ್‌ಬಿಐನಲ್ಲಿ, ವೃತ್ತಿಜೀವನ ಆರಂಭಿಸಿರುವ

RBI ನೂತನ ಡೆಪ್ಯುಟಿ ಗವರ್ನರ್‌ ಆಗಿ ಎಂ ರಾಜೇಶ್ವರ್‌ ರಾವ್‌ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು ➤ ಅಪಾಯವಿಲ್ಲದೆ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಅ. 08: ಕಳೆದ ದಿನ ಸಂಜೆ ಯಡ್ತಾಡಿಯಿಂದ ಬಂಡಿಮಠಕ್ಕೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.     ಮಾರುತಿ ಸುಜುಕಿ ಸೀಯಾಜ್ ಕಾರು ಕೂಡ್ಲಿ ರಾಮಕೃಷ್ಣ ಅಡಿಗರ ಮನೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಸುಮಾರು ಆರು ಟಡಿ ಆಳದ ಕೆರೆಗೆ ಬಿದ್ದಿದೆ. ಅವಘಡ ಸಂಭವಿಸಿದ ಹೊತ್ತಲ್ಲೆ ಸ್ಥಳೀಯರು ಘಟನ ಸ್ಥಳಕ್ಕೆ ಆಗಮಿಸಿ ಕಾರಿನಲ್ಲಿದ್ದ ಮೂವರ ನ್ನು ರಕ್ಷಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು ➤ ಅಪಾಯವಿಲ್ಲದೆ ಪಾರಾದ ಪ್ರಯಾಣಿಕರು Read More »

ಕರಾವಳಿ, ಕರ್ನಾಟಕ

ದೇಶದಲ್ಲಿ ರಸಗೊಬ್ಬರದ ಕೊರತೆಯಿಲ್ಲ ➤ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 08: ಕರ್ನಾಟಕ ಸೇರಿ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಅಥವಾ ಕೀಟನಾಶಕಗಳ ಕೊರತೆ ಉಂಟಾಗಿಲ್ಲ. ಕರ್ನಾಟಕದಲ್ಲಿ ಸದ್ಯ 7.3 ಲಕ್ಷ ಟನ್ ರಸಗೊಬ್ಬರವಿದೆ. ಏಪ್ರಿಲ್‌ನಲ್ಲಿ ರಾಜ್ಯದ ಬೇಡಿಕೆ 2.57 ಲಕ್ಷ ಟನ್ ಇದ್ದು, ಅದಕ್ಕಿಂತ ಹೆಚ್ಚಿನ ರಸಗೊಬ್ಬರ ಇದೆ. ರೈತರು ಯಾವುದೇ ಆತಂಕವಿಲ್ಲದೆ ಮುಂಗಾರು ಬಿತ್ತನೆಗೆ ತಯಾರಿ ಮಾಡಿಕೊಳ್ಳಬಹುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಲಾಕ್‌ಡೌನ್‌ನಿಂದ ಆರಂಭದಲ್ಲಿ ಒಂದೆರಡು ದಿನ ಸರಕು ಸಾಗಣೆಗೆ ತೊಂದರೆಯಾಗಿತ್ತು. ಆದರೆ, ರಸಗೊಬ್ಬರ, ಕೀಟನಾಶಕ

ದೇಶದಲ್ಲಿ ರಸಗೊಬ್ಬರದ ಕೊರತೆಯಿಲ್ಲ ➤ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ಪಷ್ಟನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೆಜಿಎಫ್ 2 ಚಿತ್ರೀಕರಣಕ್ಕೆ ರಾಕಿಂಗ್ ಸ್ಟಾರ್ ಯಶ್ ಮಂಗಳೂರಿಗೆ ಗ್ರಾಂಡ್‌ ಎಂಟ್ರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.08: ಕಳೆದ ದಿನ ರಾಕಿಂಗ್ ಸ್ಟಾರ್ ಯಶ್ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಮಂಗಳೂರು ತಲುಪಿದ್ದು, ಇಂದಿನಿಂದ ರಾಕಿಂಗ್ ಸ್ಟಾರ್ ಯಶ್  ಕೆಜಿಎಫ್ 2 ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ಆರಂಭವಾಗುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಕೂಡಾ ಈ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಶೂಟಿಂಗ್ ಮಂಗಳೂರಿನಲ್ಲಿ ನಡೆಯುತ್ತಿದ್ದು,  ಕೊನೆಯ ಹಂತದ ಚಿತ್ರೀಕರಣ ಮಂಗಳೂರು, ಬೆಂಗಳೂರು, ಹೈದರಾಬಾದ್ ಮುಂತಾದ ಲೊಕೇಷನ್ ಗಳಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.  

ಕೆಜಿಎಫ್ 2 ಚಿತ್ರೀಕರಣಕ್ಕೆ ರಾಕಿಂಗ್ ಸ್ಟಾರ್ ಯಶ್ ಮಂಗಳೂರಿಗೆ ಗ್ರಾಂಡ್‌ ಎಂಟ್ರಿ Read More »

ಕರಾವಳಿ

ಇನ್ಮುಂದೆ ಅಮೆಜಾನ್ ಇಂಡಿಯಾ ಮೂಲಕ ರೈಲ್ವೆ ಟಿಕೆಟ್ ಬುಕ್ ಮಾಡಬಹುದು

(ನ್ಯೂಸ್ ಕಡಬ) newskadaba.com ಅಮೆಜಾನ್ ಇಂಡಿಯಾ, ಅ.08: ಪ್ರಯಾಣಿಕರಿಗೆ ಇದೀಗ ಖುಷಿ ಸುದ್ದಿಯೊಂದನ್ನು ತಂದುಕೊಟ್ಟಿದೆ. ಅಮೆಜಾನ್ ಇಂಡಿಯಾ ಮೂಲಕ ಪ್ರಯಾಣಿಕರು ರೈಲು ಟಿಕೆಟ್ ಬುಕ್ ಮಾಡಿಕೊಳ್ಳಬಹುದಾಗಿದೆ. ಇದಕ್ಕಾಗಿ ಅಮೆಜಾನ್ ಮತ್ತು ಐಆರ್‌ಸಿಟಿಸಿ ಸಹ ಒಪ್ಪಂದ ಮಾಡಿಕೊಂಡಿದೆ.   ಅಮೆಜಾನ್‌ನ ರೈಲು ಟಿಕೆಟ್ ಬುಕಿಂಗ್ ವೈಶಿಷ್ಟ್ಯವು ಆಂಡ್ರಾಯ್ಡ್ ಮತ್ತು ಐಒಎಸ್ ಅಪ್ಲಿಕೇಶನ್ ಬಳಕೆದಾರರಿಗೆ ಲಭ್ಯವಿದೆ. ಇದ್ರಲ್ಲಿ ಒಮ್ಮೆ 6 ಜನರಿಗೆ ಟಿಕೆಟ್ ತೆಗೆದುಕೊಳ್ಳಬಹುದು ಮತ್ತು ತತ್ಕಾಲ್ ನಲ್ಲಿ ಒಮ್ಮೆ 4 ಜನರಿಗೆ ಟಿಕೆಟ್ ಕಾಯ್ದಿರಿಸಬಹುದು. ಪ್ರಯಾಣಿಕರು 120 ದಿನಗಳ

ಇನ್ಮುಂದೆ ಅಮೆಜಾನ್ ಇಂಡಿಯಾ ಮೂಲಕ ರೈಲ್ವೆ ಟಿಕೆಟ್ ಬುಕ್ ಮಾಡಬಹುದು Read More »

ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿಗಳೇ ಯುನಿವರ್ಸಿಟಿ ಆಯ್ಕೆ ಮಾಡುವ ಮುನ್ನ ಯೋಚಿಸಿ ➤ 24 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ

(ನ್ಯೂಸ್ ಕಡಬ) newskadaba.com  ದೆಹಲಿ , ಅ. 08: ದೇಶದಲ್ಲಿ ಒಟ್ಟು 24 ವಿಶ್ವವಿದ್ಯಾಲಯಗಳು ನಕಲಿ ಎಂದು ಯುಜಿಸಿ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿರುವ ಹೆಚ್ಚಿನ ʼವಿಶ್ವವಿದ್ಯಾಲಯʼಗಳು ಉತ್ತರ ಪ್ರದೇಶ ಮತ್ತು ದೆಹಲಿ ಮೂಲದವು. “ಯುಜಿಸಿ ಕಾಯ್ದೆಗೆ ವಿರುದ್ದವಾಗಿ ಕಾರ್ಯಚರಿಸುತ್ತಿದ್ದ ಒಟ್ಟು 24 ವಿಶ್ವವಿದ್ಯಾಲಯಗಳನ್ನು ಸದ್ಯಕ್ಕೆ ಗುರುತಿಸಲಾಗಿದೆ. ಇವುಗಳನ್ನು ನಕಲಿ ಎಂದು ಪರಿಗಣಿಸಿ, ಇವುಗಳ ಯಾವುದೇ ಪದವಿ ಪ್ರಮಾಣಪತ್ರವನ್ನು ನೀಡುವ ಅಧಿಕಾರವಿರುವುದಿಲ್ಲ,” ಎಂದು ಯುಜಿಸಿ ಸೆಕ್ರೆಟರಿ ರಜನೀಶ್‌ ಜೈನ್‌ ಹೇಳಿದ್ದಾರೆ.ವಾರಣಾಸೇಯ ಸಂಸ್ಕೃತ ವಿಶ್ವವಿದ್ಯಾಲಯ, ವಾರಣಾಸಿ,

ವಿದ್ಯಾರ್ಥಿಗಳೇ ಯುನಿವರ್ಸಿಟಿ ಆಯ್ಕೆ ಮಾಡುವ ಮುನ್ನ ಯೋಚಿಸಿ ➤ 24 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಆಸ್ತಿಗಳಿಕೆ ಪ್ರಕರಣ ➤ ಜೈಲಲ್ಲಿರುವ ಶಶಿಕಲಾಗೆ ಐಟಿ ಬಿಗ್ ಶಾಕ್.!!

(ನ್ಯೂಸ್ ಕಡಬ) newskadaba.com ಚೆನ್ನೈ, ಅ. 08 : ಅಕ್ರಮ ಆಸ್ತಿಗಳಿಕೆ ಕೇಸ್‍ನಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಲ್ಲಿರುವ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‍ಗೆ ಆದಾಯ ತೆರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ.ಶಶಿಕಲಾಗೆ ಸಂಬಂಧಿಸಿದ 2000 ಕೋಟಿ ಮೌಲ್ಯದ ಆಸ್ತಿಯನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.   ಇಳವರಸಿ, ಸುಧಾಕರನ್‍ಗೆ ಸೇರಿದ ಆಸ್ತಿಗಳನ್ನು ಸೀಜ್ ಮಾಡಲಾಗಿದೆ. ಸಿರುತ್ತಾವೂರ್, ಕೊಡನಾಡಿನಲ್ಲಿರುವ 300 ಕೋಟಿ ಮೌಲ್ಯದ ಆಸ್ತಿಯೂ ಇದ್ರಲ್ಲಿ ಸೇರಿದೆ. ಈ ಸಂಬಂಧ ಪ್ರಕಟಣೆ ಬಿಡುಗಡೆ ಮಾಡಿರುವ

ಅಕ್ರಮ ಆಸ್ತಿಗಳಿಕೆ ಪ್ರಕರಣ ➤ ಜೈಲಲ್ಲಿರುವ ಶಶಿಕಲಾಗೆ ಐಟಿ ಬಿಗ್ ಶಾಕ್.!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top