ನ್ಯೂಸ್ ಕಡಬ

ಲಷ್ಕರ್-ಎ-ತೊಯ್ಬಾ ಉಗ್ರರ ಆರು ಮಂದಿ ಸಹಚರರ ಬಂಧನ

(ನ್ಯೂಸ್ ಕಡಬ)newskadaba.com ಶ್ರೀನಗರ, ಆ.11. ಆರು ಲಷ್ಕರ್-ಎ-ತೊಯ್ಬಾ ಉಗ್ರರ ಸಹಚರರನ್ನು ಬಂಧಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾದ ಉರಿ ಪ್ರದೇಶದಲ್ಲಿ ಭಯೋತ್ಪಾದನಾ ಘಟಕವನ್ನು ಪತ್ತೆಹಚ್ಚಲಾಗಿದ್ದು ,ಎಲ್ಇಟಿ ಉಗ್ರರ ಮೂವರು ಸಹಚರರನ್ನು ಬಂಧಿಸಲಾಗಿದೆ. ಇನ್ನು ಸುಳಿವಿನ ಮೇರೆಗೆ ಭದ್ರತಾ ಪಡೆಗಳು ಜಂಟಿ ಗಸ್ತು ತಿರುಗುತ್ತಿದ್ದ ವೇಳೆ ಓರ್ವ ಶಂಕಿತ ನನ್ನು ಬಂಧಿಸಿದರು. ಬಳಿಕ ಎರಡು ಗ್ರೆನೇಡ್‌ಗಳು, ಒಂದು ಚೈನೀಸ್ ಪಿಸ್ತೂಲ್, ಒಂದು ಪಿಸ್ತೂಲ್ […]

ಲಷ್ಕರ್-ಎ-ತೊಯ್ಬಾ ಉಗ್ರರ ಆರು ಮಂದಿ ಸಹಚರರ ಬಂಧನ Read More »

ರಾಷ್ಟ್ರೀಯ ನ್ಯೂಸ್

KSRTC ಬಸ್- ಬೈಕ್ ನಡುವೆ ಢಿಕ್ಕಿ – ಸವಾರ ಗಂಭೀರ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.11. KSRTC ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ನಡೆದಿದೆ. ಫ್ರಾನ್ಸಿಸ್ ಲೋಬೋ ಅವರು ಬಂಟ್ವಾಳ ಪೇಟೆಯ ಕಡೆಯಿಂದ ಮೂಡಬಿದಿರೆಯ ಕಡೆ ಹೋಗುವ ವೇಳೆ ನಾಲ್ಕು ಮಾರ್ಗ ಕೂಡುವ ಬೈಪಾಸ್ ಜಂಕ್ಷನ್ ನಲ್ಲಿ ಅಪಘಾತ ನಡೆದಿದ್ದು, ಬೈಕ್ ಸವಾರ ಬಂಟ್ವಾಳದಿಂದ ಹೈವೆಯ ಮೂಲಕ ಮೂಡಬಿದಿರೆ ರಸ್ತೆಗೆ ಏಕಾಏಕಿ ನುಗ್ಗಿಸಿದ ಪರಿಣಾಮವಾಗಿ ಬಸ್ ಚಾಲಕನಿಗೆ

KSRTC ಬಸ್- ಬೈಕ್ ನಡುವೆ ಢಿಕ್ಕಿ – ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಏರ್ ಇಂಡಿಯಾದ ಹೊಸ ಲೋಗೋ ಅನಾವರಣ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.11. ಟಾಟಾ ಗ್ರೂಪ್ ಮಾಲೀಕತ್ವದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ನೂತನ ಲೋಗೋ ವನ್ನು ಅನಾವರಣ ಮಾಡಿದ್ದು, ಏರ್ ಇಂಡಿಯಾ ಹೊಸ ಲೋಗೋಗೆ ‘ದಿ ವಿಸ್ತಾ’ ಎಂದು ನಾಮಕರಣ ಮಾಡಲಾಗಿದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿದ್ದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಟಾಟಾ ಸನ್ಸ್ ಸ್ವಾಧೀನಪಡಿಸಿಕೊಂಡ ಒಂದೂವರೆ ವರ್ಷ ಆದ ಬಳಿಕ ಸಂಸ್ಥೆಗೆ ಹೊಸ ಬ್ರ್ಯಾಂಡ್ ಅನ್ನು ಪರಿಚಯಿಸಿದ್ದು, ಇನ್ನು ವಿಮಾನಯಾನ ಸಂಸ್ಥೆಯು ತನ್ನ ಹೊಸ ಬಾಲ ವಿನ್ಯಾಸ ಮತ್ತು ಥೀಮ್

ಏರ್ ಇಂಡಿಯಾದ ಹೊಸ ಲೋಗೋ ಅನಾವರಣ Read More »

ರಾಷ್ಟ್ರೀಯ ನ್ಯೂಸ್

3.16 ಲಕ್ಷ ರೂ. ಮೌಲ್ಯದ ಗಾಂಜಾ ರೈಲು ನಿಲ್ದಾಣದ ಬಳಿ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.11. ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದ ಅನಾಮಧೇಯ ಬ್ಯಾಗ್‌ ನಲ್ಲಿ ದೊರೆತ ಗಾಂಜಾವನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಿಲ್ದಾಣದ ಎರಡನೇ ಫ್ಲ್ಯಾಟ್‌ ಫಾರಂನಲ್ಲಿ ಕಾರವಾರ-ಯಶವಂತಪುರ (ನಂ.16516) ಎಕ್ಸ್ ಪ್ರೆಸ್‌ ರೈಲಿನಲ್ಲಿ 3,16,650 ರೂ. ಮೌಲ್ಯದ 6.333 ಕೆ.ಜಿ. ತೂಕದ ಒಣ ಗಾಂಜಾ ಪತ್ತೆಯಾಗಿತ್ತು. ರೈಲಿನ ನಿಯಮಿತ ತಪಾಸಣೆ ವೇಳೆ ಪತ್ತೆಯಾದ ಅನಾಮಧೇಯ ಬ್ಯಾಗ್‌ ನಲ್ಲಿ ಗಾಂಜಾ ಕಂಡು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ. ಮಂಗಳೂರು ಪೂರ್ವ ಅಬಕಾರಿ ವಿಭಾಗದ‌ಲ್ಲಿ

3.16 ಲಕ್ಷ ರೂ. ಮೌಲ್ಯದ ಗಾಂಜಾ ರೈಲು ನಿಲ್ದಾಣದ ಬಳಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆಗೈದ ತಂಡ…!

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಆ.11. ಬಿಜೆಪಿ ಮುಖಂಡ ಅನುಜ್ ಚೌಧರಿ(34) ಅವರನ್ನು ಉತ್ತರ ಪ್ರದೇಶದ ಸಂಭಾಲ್‌ನ ಮೊರಾದಾಬಾದ್‌ನಲ್ಲಿರುವ ಅವರ ನಿವಾಸದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಚೌಧರಿ ಅವರು ತಮ್ಮ ಅಪಾರ್ಟ್‌ ಮೆಂಟ್‌ನ ಹೊರಗೆ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್‌ ನಲ್ಲಿ ಬಂದ ಮೂವರು ಅನೇಕ ಬಾರಿ ಗುಂಡು ಹಾರಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದ್ದು, ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಯತ್ನಿಸುತ್ತಿದ್ದಾರೆ. ಆರೋಪಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ

ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆಗೈದ ತಂಡ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಮಿಕರಿಗಿದ್ದ ಉಚಿತ ಬಸ್‌ಪಾಸ್‌ ಯೋಜನೆ ಸ್ಥಗಿತ…! – ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.11. ಕಾರ್ಮಿಕ ವರ್ಗದ ಓಡಾಟಕ್ಕೆ ಇದ್ದ ರಿಯಾಯಿತಿ ಬಸ್‌ ಪಾಸ್‌ ಯೋಜನೆ ಸದ್ದಿಲ್ಲದೇ ಸ್ಥಗಿತಗೊಳಿಸಲಾಗುತ್ತಿದ್ದು, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ತಂದ ಯೋಜನೆಯ ಮೂಲಕ ಉಚಿತ ಬಸ್ ಪಾಸು ಪಡೆದ ನೋಂದಾಯಿತ ಕಟ್ಟಡ ಮತ್ತು ಇತರೆ ನಿಮಾಣ ಕಾರ್ಮಿಕರು ಪಾಸಿನೊಂದಿಗೆ KSRTC ಯಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿತ್ತು. ಈ ಪಾಸ್‌ ಅವಧಿ 3 ತಿಂಗಳು ಚಾಲ್ತಿಯಲ್ಲಿದ್ದು, ನಂತರ ಪಾಸ್‌ ನವೀಕರಣ ಮಾಡಿಸಿಕೊಳ್ಳಬೇಕಾಗಿತ್ತು ಎನ್ನಲಾಗಿದೆ. ಕಾರ್ಮಿಕರ‌‌ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಚುನಾವಣಾ ಗಿಮಿಕ್ ಮಾಡಿರುವುದು ಎಂಬ

ಕಾರ್ಮಿಕರಿಗಿದ್ದ ಉಚಿತ ಬಸ್‌ಪಾಸ್‌ ಯೋಜನೆ ಸ್ಥಗಿತ…! – ರಾಜ್ಯ ಸರ್ಕಾರ Read More »

ಕರ್ನಾಟಕ

ಮಹಿಳೆಯ ಮೇಲೆ ಉಬರ್ ಚಾಲಕನಿಂದ ಹಲ್ಲೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ನಗರದಲ್ಲಿ ಖಾಸಗಿ ಟ್ಯಾಕ್ಸಿ ಬುಕ್ಕಿಂಗ್ ಆಪ್ ಗಳ ಹಾವಳಿ ಹೆಚ್ಚಾದ ಬೆನ್ನಲ್ಲೇ, ಅಘಾತಕಾರಿ ಘಟನೆಗಳು ನಡೆಯುತ್ತಿವೆ. ಉಬರ್ ಕ್ಯಾಬ್ ಹತ್ತಿದಂತ ಮಹಿಳೆಯ ಮೇಲೆ ಚಾಲಕ ಹಲ್ಲೆ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಮಹಿಳೆಯೊಬ್ಬರು ಆಸ್ಪತ್ರೆಗೆ ತೆರಳಲು ಕ್ಯಾಬ್ ಬುಕ್ ಮಾಡಿದ್ದರು. ಮಹಿಳೆ ಬುಕ್ ಮಾಡಿದ್ದೇ ಬೇರೆ ಕ್ಯಾಬ್, ಸ್ಥಳಕ್ಕೆ ಬಂದಿದ್ದೇ ಬೇರೆಯಾಗಿತ್ತು. ಇದನ್ನು ಆರಂಭದಲ್ಲಿ ಗಮನಿಸದಂತ ಮಹಿಳೆ ಹಾಗೂ ಅವರ ಪುತ್ರ ಹತ್ತಿ ಕುಳಿತ ಮೇಲೆ ಗಮನಿಸಿ ಇಳಿಯೋದಕ್ಕೆ ಪ್ರಯತ್ನಿಸಿದ್ದಾರೆ.

ಮಹಿಳೆಯ ಮೇಲೆ ಉಬರ್ ಚಾಲಕನಿಂದ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಕೇರಳಂ’ ಎಂದು ಮರುನಾಮಕರಣಕ್ಕೆ ಕೇಂದ್ರಕ್ಕೆ ಕೇರಳ ಸರ್ಕಾರ ಆಗ್ರಹ..!

(ನ್ಯೂಸ್ ಕಡಬ)newskadaba.com ಕೇರಳ, ಆ.10. ಕೇರಳದಲ್ಲಿನ ಆಡಳಿತಾರೂಢ ಎಡರಂಗ ಸರ್ಕಾರವು ಕೇರಳವನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ ಎಂದು ಪಿಟಿಐ ತಿಳಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಧಾನ ಸಭೆಯಲ್ಲಿ ನಿರ್ಣಯವೊಂದನ್ನು ಮಂಡಿಸಲು ಮುಂದಾಗಿದ್ದು, ಈ ನಿರ್ಣಯವು ಆ. 09ರ ಸದನ ಕಲಾಪಗಳ ವೇಳಾಪಟ್ಟಿಯಲ್ಲಿ ನಮೂದಾಗಿದೆ. ಈ ಮಾಹಿತಿಯು ಕೇರಳ ರಾಜ್ಯ ವಿಧಾನಸಭೆಯ ಅಂತರ್ಜಾಲ ತಾಣದಲ್ಲಿ ಅಪ್ಲೋಡ್ ಆಗಿದೆ. ಕೇರಳ ರಾಜ್ಯದ ಹೆಸರು ‘ಕೇರಳಂ’ ಎಂದು ಸಂವಿಧಾನ ಮತ್ತು ಎಲ್ಲ ಅಧಿಕೃತ

‘ಕೇರಳಂ’ ಎಂದು ಮರುನಾಮಕರಣಕ್ಕೆ ಕೇಂದ್ರಕ್ಕೆ ಕೇರಳ ಸರ್ಕಾರ ಆಗ್ರಹ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ..! – ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

(ನ್ಯೂಸ್ ಕಡಬ)newskadaba.com ಇರಾಕ್‌, ಆ.10. ಭಾರತದಲ್ಲಿ ತಯಾರಿಸಲಾದ ಕಾಮನ್ ಕೋಲ್ಡ್ ಕೆಮ್ಮಿನ ಸಿರಪ್‌ನಲ್ಲಿ ವಿಷಕಾರಿ ಅಂಶ ಪತ್ತೆಯಾಗಿದ್ದು, ಬಳಕೆಗೆ ಯೋಗ್ಯವಲ್ಲ ಎಂದು ಕಂಡುಬಂದ ಬಳಿಕ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಕೋಲ್ಡ್ ಔಟ್ ಎಂಬ ಹೆಸರಿನ ಸಿರಪ್ ಅನ್ನು ಭಾರತದ ಫೋರ್ಟ್ಸ್ ಲ್ಯಾಬೋರೇಟರೀಸ್ ತಯಾರಿಸಿದ್ದು, ಗ್ಲೋಬಲ್ ಹೆಲ್ತ್ ಏಜೆನ್ಸಿಯು ಸಿರಪ್‌ ಗಳನ್ನು ಪರೀಕ್ಷೆಗೆ ಒಳಪಡಿಸಿ ಅದರಲ್ಲಿ ವಿಷಕಾರಿ ಅಂಶಗಳನ್ನು ಪತ್ತೆ ಹಚ್ಚಿತ್ತು. ಇದರಲ್ಲಿ ಡೈಥಿಲೀನ್ ಮತ್ತು ಎಥಿಲೀನ್ ಗ್ಲೈಕೋಲ್‌ ಗಿಂತ ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದನ್ನು ಕಂಡುಹಿಡಿದಿರುವುದಾಗಿ

ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ..! – ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್

ಕೊಳೆತ ಮೊಟ್ಟೆ ಪೂರೈಕೆ..! – ಗರ್ಭಿಣಿ ಮಹಿಳೆ, ಮಕ್ಕಳು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ ಮಾಡಲಾಗಿದ್ದು, ಅಂಗನವಾಡಿಯಿಂದ ಮೊಟ್ಟೆ ಪಡೆದು ತಿಂದವರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಮಂಗಳೂರಿನ ಕೆಲವೆಡೆ ಗುತ್ತಿಗೆದಾರರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಮಾಡಿದ್ದು, ಗರ್ಭಿಣಿ ಮಹಿಳೆ ಮತ್ತು ಮಕ್ಕಳು ಮೊಟ್ಟೆ ತಿಂದು ಅಸ್ವಸ್ಥರಾಗಿದ್ದಾರೆ. ಇನ್ನು ಕಳೆದ ತಿಂಗಳು ಮಂಗಳೂರಿನ ಹಲವೆಡೆ ಕೊಳೆತ ಮೊಟ್ಟೆ ಪೂರೈಕೆಯಾಗಿತ್ತು. ಈ ಬಾರಿಯೂ ಕೆಲವು ಕಡೆ ಕೊಳೆತ ಮೊಟ್ಟೆ ಪೂರೈಕೆ ಆಗಿರುವ ಬಗ್ಗೆ ತಿಳಿದು ಬಂದಿದೆ.  

ಕೊಳೆತ ಮೊಟ್ಟೆ ಪೂರೈಕೆ..! – ಗರ್ಭಿಣಿ ಮಹಿಳೆ, ಮಕ್ಕಳು ಅಸ್ವಸ್ಥ Read More »

ಕರಾವಳಿ, ಕರ್ನಾಟಕ
Scroll to Top