ನ್ಯೂಸ್ ಕಡಬ

ಮಲ್ಲೇಶ್ವರಂ ನಿವಾಸದಲ್ಲಿ ಸ್ಪಂದನಾ ರಾಘವೇಂದ್ರ ಅಂತಿಮ ದರ್ಶನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಕಳೆದರಡು ದಿನದ ಹಿಂದೆ ಥಾಯ್ಲೆಂಡ್‌ ನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಸ್ಯಾಂಡಲ್ ವುಡ್ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ ತಡರಾತ್ರಿ ರಾತ್ರಿ ಬೆಂಗಳೂರಿಗೆ ತರಲಾಗಿದೆ ಎನ್ನಲಾಗಿದೆ. ಸ್ಪಂದನಾ ತವರು ಮನೆಯಾದ ಬಿ.ಕೆ ಶಿವರಾಮ್ ಅವರ ನಿವಾಸದಲ್ಲಿ ಸ್ಪಂದನಾ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸ್ಪಂದನಾ ಅವರ ಅಂತಿಮ ದರ್ಶನ ಪಡೆಯಲು ಕುಟುಂಬದ ಆಪ್ತರು, ಚಿತ್ರರಂಗ, ರಾಜಕೀಯ ವಲಯದ ಗಣ್ಯರು ಹಾಗೂ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಮಧ್ಯಾಹ್ನದ ಬಳಿಕ […]

ಮಲ್ಲೇಶ್ವರಂ ನಿವಾಸದಲ್ಲಿ ಸ್ಪಂದನಾ ರಾಘವೇಂದ್ರ ಅಂತಿಮ ದರ್ಶನ Read More »

ಕರ್ನಾಟಕ

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ – ಅತ್ಯಾಚಾರ ಶಂಕೆ..!

(ನ್ಯೂಸ್ ಕಡಬ)newskadaba.com ಅಸ್ಸಾಂ, ಆ. 07. ಯುವತಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಅತ್ಯಾಚಾರದಿಂದ ಮನನೊಂದು ಯುವತಿಯರು ಸಾವಿಗೆ ಶರಣಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. 19 ವರ್ಷ ಹಾಗೂ 17 ವರ್ಷದ ಯುವತಿಯರ ಮೃತದೇಹಗಳು ಏಕಕಾಲಕ್ಕೆ ಪತ್ತೆಯಾಗಿದ್ದು, ಪ್ರತ್ಯೇಕ ಸ್ಥಳದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಂತಿದ್ದ ಶವಗಳನ್ನು ಸ್ಥಳೀಯರು ಗಮನಿಸಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಯುವತಿಯರು ಅತ್ಯಾಚಾರಕ್ಕೊಳಗಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ ಆಗಮಿಸಿರುವ

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ – ಅತ್ಯಾಚಾರ ಶಂಕೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡೆಂಗ್ಯು ತಡೆಯಲು ಸಾರ್ವಜನಿಕರಿಗೆ ಮಾಹಿತಿ ಅಗತ್ಯ..! –  ಡಾ.ಆನಂದ್ ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಡೆಂಗ್ಯು ತಡೆಗಟ್ಟಲು ಅದರ ಬಗ್ಗೆ ವ್ಯಾಪಕ ವಾದ ಮಾಹಿತಿ ನೀಡುವ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ. ತಿಳಿಸಿದರು ಎಂದು ವರದಿ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ರು ಕುಟುಂಬದ ಕಲ್ಯಾಣ ಇಲಾಖೆ ವತಿಯಿಂದ ಪತ್ರಿಕಾ ಭವನದ ಮುಂಭಾಗದಲ್ಲಿ ಡೆಂಗ್ಯು ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆ ಯಾದ್ಯಂತ ಸಂಚರಿಸಲು ನಿರ್ಮಿಸಲಾದ ಡೆಂಗ್ಯು ಜಾಗೃತಿ ರಥಕ್ಕೆ ಚಾಲನೆ ನೀಡಿ

ಡೆಂಗ್ಯು ತಡೆಯಲು ಸಾರ್ವಜನಿಕರಿಗೆ ಮಾಹಿತಿ ಅಗತ್ಯ..! –  ಡಾ.ಆನಂದ್ ಕೆ Read More »

ಕರಾವಳಿ

ಕ್ಷುಲ್ಲಕ ಕಾರಣಕ್ಕೆ ನವವಿವಾಹಿತೆ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಲಕ್ನೋ, ಆ.07. ಅತ್ತೆ-ಮಾವ ತವರು ಮನೆಗೆ ಹೋಗಲು ಬಿಡಲಿಲ್ಲವೆಂದು ಬೇಸರಗೊಂಡು ನವ ವಿವಾಹಿತೆಯೊಬ್ಬಳು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ . ಮೃತ ನಿಶಾ ಅವರ ಪತಿ ನೌಕಾಪಡೆಯ ಉದ್ಯೋಗಿಯಾಗಿದ್ದರು. ಅವರು ಕರ್ತವ್ಯಕ್ಕೆ ಸೇರಲು ಹೋದ ನಂತರ ನಿಶಾ ತವರು ಮನೆಗೆ ಹೋಗಲು ಬಯಸಿದ್ದಳು. ಆದರೆ ಅತ್ತೆ ಮಾವ ನಿರಾಕಸಿದರು ಎಂದು ವರದಿ ತಿಳಿಸಿದೆ.

ಕ್ಷುಲ್ಲಕ ಕಾರಣಕ್ಕೆ ನವವಿವಾಹಿತೆ ಆತ್ಮಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವಕನೋರ್ವನ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ – ಯುವತಿಗೆ ದಂಡ ವಿಧಿಸಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಅಲಹಾಬಾದ್‌, ಆ. 07. ಯುವಕನೋರ್ವನ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿ ನಂತರ ಆತನನ್ನೇ ಮದ್ವೆಯಾದ ಯುವತಿಗೆ ಅಲಾಹಾಬಾದ್ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿದ ಘಟನೆ ವರದಿಯಾಗಿದೆ. ಮಹಿಳೆಯೊಬ್ಬರು ದಾಖಲಿಸಿದ ಎಫ್‌ಐಆರ್ ಸುಳ್ಳು ಹಾಗೂ ಅದರಲ್ಲಿರುವ ಆರೋಪಿ ಹಾಗೂ ಸಂತ್ರಸ್ತೆ ಇಬ್ಬರೂ ಪರಸ್ಪರ ಮದ್ವೆಯಾಗಿ ಸಂತೋಷದ ಜೀವನವನ್ನು ನಡೆಸುತ್ತಿದ್ದಾರೆ ಎಂಬುದನ್ನು ಗಮನಿಸಿದ ಕೋರ್ಟ್, ಆರೋಪಿತ ವ್ಯಕ್ತಿ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದೆ. ಅಲ್ಲದೇ ಈ ವೇಳೆ ನ್ಯಾಯಾಧೀಶರು, ಸುಳ್ಳು

ಯುವಕನೋರ್ವನ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ – ಯುವತಿಗೆ ದಂಡ ವಿಧಿಸಿದ ಹೈಕೋರ್ಟ್..! Read More »

ರಾಷ್ಟ್ರೀಯ ನ್ಯೂಸ್

ಸೌಜನ್ಯ ಪ್ರಕರಣದ ರಹಸ್ಯಗಳನ್ನ ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು – ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಧರ್ಮಸ್ಥಳದ ಸೌಜನ್ಯ ಹತ್ಯೆ ಬಗ್ಗೆ ಮಾತನಾಡಿದ ಮಾಜಿ ಕಾಂಗ್ರೆಸ್ ಶಾಸಕ ವಸಂತ ಬಂಗೇರ ‘ಸಿಬಿಐ ತನಿಖೆಯ ದಾರಿ ತಪ್ಪಿಸಲಾಗಿತ್ತು. ಪ್ರಕರಣದ ರಹಸ್ಯವನ್ನ ಬಿಚ್ಚಿಟ್ಟರೆ ನನ್ನನ್ನೂ ಸಾಯಿಸಬಹುದು’ ಎಂಬ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಖಾಕಿಯಾಗಲೀ, ಕಾವಿಯಾಗಲೀ ಅವರನ್ನೂ ತನಿಖೆ ಮಾಡುವ ಶಕ್ತಿ ನಮ್ಮಲ್ಲಿ ಇದೆ. ಸಮಯ ಬಂದಾಗ ಮಾತನಾಡುತ್ತೇನೆ. ಆಗ ನನ್ನನ್ನೂ ಸಾಯಿಸಿಬಿಡಬಹುದು. ಆದರೆ ಸಾಯುವ ಮೊದಲು ನ್ಯಾಯ ಕೊಡಿಸಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ.  

ಸೌಜನ್ಯ ಪ್ರಕರಣದ ರಹಸ್ಯಗಳನ್ನ ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು – ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ Read More »

ಕರಾವಳಿ

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ – ರೋಗಿಗಳ ಸ್ಥಳಾಂತರ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.07. ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಾರ್ಡ್‌ನಿಂದ ರೋಗಿಗಳನ್ನು ಶಿಫ್ಟ್ ಮಾಡಲಾಗಿದೆ ಎಂದು ವರದಿ ತಿಳಿದುಬಂದಿದೆ. ಮಧ್ಯಾಹ್ನ 11.45ಕ್ಕೆ ಈ ಘಟನೆ ಸಂಭವಿಸಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಆರು ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿವೆ. ಎಂಡೋಸ್ಕೋಪಿ ನಡೆಸುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಸ್ಥಳ ಕಟ್ಟಡದ ಎರಡನೇ ಮಹಡಿಯಲ್ಲಿ ಎಮರ್ಜೆನ್ಸಿ ವಾರ್ಡ್ ಸಮೀಪದಲ್ಲೇ ಇತ್ತು. ಹೀಗಾಗಿ ಭಾರಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಕೂಡಲೇ ಅಲ್ಲಿದ್ದ ರೋಗಿಗಳನ್ನು ಬೇರೆಡೆ ಸ್ಥಳಾಂತರಿಸಲಾಯಿತು.

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ – ರೋಗಿಗಳ ಸ್ಥಳಾಂತರ Read More »

ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.07. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ. ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ . ಈ ಬಗ್ಗೆ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್‌ ಗಾಗಿ ಕಾದು ನಿಂತಿದ್ದವರಿಗೆ ಕಾರು ಢಿಕ್ಕಿ –  ಇಬ್ಬರು‌ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಹಾವೇರಿ, ಆ.07. ವೇಗವಾಗಿ ಚಲಿಸುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ನೀರಲಗಿ ಗ್ರಾಮದ ವಿರೂಪಾಕ್ಷಪ್ಪ ಕಾಳಿ (60) ಮತ್ತು ಚಿದಾನಂದ ಶೇರವಾಡ (55) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹೊನ್ನಾಪುರ ಗ್ರಾಮದ ಬಸನಗೌಡ ಶಿವನಗೌಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿಗ್ಗಾವಿ ಪಟ್ಟಣಕ್ಕೆ ತೆರಳಲು ನೀರಲಗಿ ಬಳಿ ಹೆದ್ದಾರಿ ಬದಿ ನಿಂತಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಚಿದಾನಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು  ಸರಿಯಾದ

ಬಸ್‌ ಗಾಗಿ ಕಾದು ನಿಂತಿದ್ದವರಿಗೆ ಕಾರು ಢಿಕ್ಕಿ –  ಇಬ್ಬರು‌ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಇಂಡಿಯಾ’ಮೈತ್ರಿಕೂಟದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ನೇಮಕ ಫಿಕ್ಸ್

(ನ್ಯೂಸ್ ಕಡಬ)newskadaba.com ಪಾಟ್ನಾ, ಆ.07. 26 ಪಕ್ಷಗಳ ಪ್ರತಿಪಕ್ಷ ‘ಇಂಡಿಯಾ’ ಮೈತ್ರಿಕೂಟದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಸಂಚಾಲಕರಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಮೈತ್ರಿಕೂಟದ ಮುಂದಿನ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಯಲಿದೆ. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಮೈತ್ರಿಕೂಟದ 11 ಸದಸ್ಯರ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರಲಿದ್ದು, ನಿತೀಶ್ ಕುಮಾರ್ ಅವರನ್ನು ಸಂಚಾಲಕರಾಗಿ ಆಯ್ಕೆ

‘ಇಂಡಿಯಾ’ಮೈತ್ರಿಕೂಟದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ನೇಮಕ ಫಿಕ್ಸ್ Read More »

ರಾಷ್ಟ್ರೀಯ ನ್ಯೂಸ್
Scroll to Top