ನ್ಯೂಸ್ ಕಡಬ

ತಣ್ಣೀರು ಬಾವಿ ಬೀಚ್ ಕ್ಲೀನಿಂಗ್ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಭಾರತ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಇವರ ನಿರ್ದೇಶನದಂತೆ ರಾಷ್ಟ್ರೀಯ ಕರಾವಳಿ ಮಿಷನ್ ಅಡಿಯಲ್ಲಿ ಸೆಪ್ಟೆಂಬರ್ 21ರಂದು ”ತಣ್ಣೀರುಬಾವಿ ಬೀಚ್” ನಲ್ಲಿ  ಆಯೋಜಿಸಲಾದ ಬೀಚ್ ಕ್ಲೀನಿಂಗ್ ಚಟುವಟಿಕೆ, ಅಭಿಯಾನವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಣ್ಣೀರು ಬಾವಿ ಬೀಚ್ ಕ್ಲೀನಿಂಗ್ ಮುಂದೂಡಿಕೆ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 17. ಇಲ್ಲಿನ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ವಿಶ್ವ ಹಿಂದಿ ದಿವಸ್ ಕಾರ್ಯಕ್ರಮವನ್ನು ಮಂಗಳವಾರದಂದು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸರಸ್ವತೀ ವಿದ್ಯಾಲಯ ಪ್ರಾಥಮಿಕ ಶಾಲೆಯ ಹಿಂದಿ ಶಿಕ್ಷಕಿ ಶ್ರೀಮತಿ ಪ್ರೇಮಲತಾ ಎ ಆಗಮಿಸಿ ಹಿಂದಿ ಒಂದು ಭಾಷೆ ಅಲ್ಲ. ಸಂಸ್ಕೃತಿ, ವಿಚಾರ, ಅಭಿವ್ಯಕ್ತಿ ಹಿಂದಿಯನ್ನು ವ್ಯವಹಾರಿಕ ಕ್ಷೇತ್ರದಲ್ಲಿ ಬಳಸಲಾಗುತ್ತದೆ ಎಂದು ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ ಸರಸ್ವತೀ ಸಮೂಹ ಸಂಸ್ಥೆಯ ಸಂಚಾಲಕರಾದ ಶ್ರೀ ವೆಂಕಟರಮಣರಾವ್ ಮಂಕುಡೆ, ಭಾಷೆಯು

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ Read More »

ಕರಾವಳಿ

2ನೇ ಏರ್ಪೋರ್ಟ್ ನಿರ್ಮಾಣಕ್ಕೆ ಜಾಗ ನಿಗದಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ಏರ್‌ಪೋರ್ಟ್‌ ನಿರ್ಮಾಣಕ್ಕೆ ಜಾಗ ಅಂತಿಮವಾಗಿದ್ದು, ನೆಲಮಂಗಲ- ಕುಣಿಗಲ್‌ ನಡುವೆ ಏರ್‌ಪೋರ್ಟ್‌ ನಿರ್ಮಾಣಕ್ಕೆ ಸ್ಥಳ ಆಯ್ಕೆ ಮಾಡಲಾಗಿದೆ. ನೆಲಮಂಗಲದಿಂದ ಸುಮಾರು 5 ಕಿಲೋ ಮೀಟರ್‌ ದೂರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗ ಅಂತಿಮ ಮಾಡಲಾಗಿದೆ. ಇದಕ್ಕೆ ಸುಮಾರು 4-5 ಸಾವಿರ ಎಕರೆ ಭೂಮಿ ಬೇಕಾಗಿದ್ದು, 6-7 ಸ್ಥಳಗಳನ್ನು ಗುರುತಿಸಲಾಗಿತ್ತು.. ಇದರಲ್ಲಿ ನೆಲಮಂಗಲ ಆಯ್ಕೆ ಮಾಡಲಾಗಿದೆ. KIALಗೆ 2ನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರವಾಗಿ ನಡೆದ 11ನೇ

2ನೇ ಏರ್ಪೋರ್ಟ್ ನಿರ್ಮಾಣಕ್ಕೆ ಜಾಗ ನಿಗದಿ..! Read More »

ಕರ್ನಾಟಕ

ಸುಬ್ರಹ್ಮಣ್ಯ ಠಾಣೆಗೆ ಐಜಿಪಿ ಅಮಿತ್ ಸಿಂಗ್ ಭೇಟಿ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 13. ಪಶ್ಚಿಮವಲಯಕ್ಕೆ ಸಂಬಂಧ ಪಟ್ಟ 4 ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡ ಹಾಗೂ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಕ್ಷಣ ನಮ್ಮ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಸ್ಪಂದಿಸುತ್ತಾ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕರ್ತವ್ಯ ನಿಷ್ಠೆಯನ್ನು ಮೆರೆದಿದ್ದಾರೆ. ಯಾವುದೇ ಘಟನೆಗಳು ಸಂಭವಿಸಿದಲ್ಲಿ ಕೆಲವೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅತೀ ವೇಗವಾಗಿ ಸುದ್ದಿಗಳು ತಿಳಿಯುತ್ತವೆ. ಈ ನಿಟ್ಟಿನಲ್ಲಿ ಪತ್ರಕರ್ತರು ಸಮಾಜ ಸೇವೆಯುಳ್ಳವರಾಗಿರುತ್ತಾರೆ ಎಂದು ಪೊಲೀಸ್

ಸುಬ್ರಹ್ಮಣ್ಯ ಠಾಣೆಗೆ ಐಜಿಪಿ ಅಮಿತ್ ಸಿಂಗ್ ಭೇಟಿ..! Read More »

ಕರಾವಳಿ

ಉತ್ತಮ ಶಿಕ್ಷಕ ಪ್ರಶಸ್ತಿ- ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ಮಂಗಳೂರಿನ ಪಂಜಿಮೊಗರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ವಾಣಿ ಅವರಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಘಟಕ ಅಭಿನಂದಿಸಿದೆ.

ಉತ್ತಮ ಶಿಕ್ಷಕ ಪ್ರಶಸ್ತಿ- ಅಭಿನಂದನೆ Read More »

ಕರಾವಳಿ

ಸೆಪ್ಟೆಂಬರ್ 24ರಂದು ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿಯಮಿತ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 24ರಂದು ಮಂಗಳವಾರ ಮಧ್ಯಾಹ್ನ 3ಗಂಟೆಗೆ ಸಂಘದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ ಎಂದು ಸಂಘದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 24ರಂದು ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ಮಹಾಸಭೆ Read More »

ಕರಾವಳಿ

70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ – ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಇನ್ನುಮುಂದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. ಈ ಕುರಿತು ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಾದ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ

70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ – ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಯನಾಡು- ಭೂಕುಸಿತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ ಯುವತಿಗೆ ಬಿಗ್ ಶಾಕ್ – ಮದುವೆಯಾಗಲಿರುವ ಯುವಕ ಅಪಘಾತದಲ್ಲಿ ಮೃತ್ಯು…!

(ನ್ಯೂಸ್ ಕಡಬ) newskadaba.com ಕೇರಳ, ಸೆ. 12. ಇತ್ತೀಚೆಗೆ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಡೀ ಕುಟುಂಬವನ್ನು ಕಳೆದುಕೊಂಡು ನೊಂದಿದ್ದ ಯುವತಿಯು ಇದೀಗ ಮದುವೆಯಾಗಬೇಕಿದ್ದ ವರನನ್ನೂ ಕಳೆದುಕೊಂಡು ಬರಸಿಡಿಲು ಬಡಿದಂತಾಗಿದೆ. ಕಳೆದ ಜುಲೈ ತಿಂಗಳಲ್ಲಿ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದ ಯುವತಿ ಇದೀಗ ಆಕೆ ಮದುವೆಯಾಗಬೇಕಿದ್ದ ವರ ಜೆನ್ಸನ್ ಕೂಡಾ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ವರದಿಯ ಪ್ರಕಾರ, ಜೆನ್ಸನ್​ ಪ್ರಯಾಣಿಸುತ್ತಿದ್ದ ಕಾರು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಶೃತಿ,

ವಯನಾಡು- ಭೂಕುಸಿತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ ಯುವತಿಗೆ ಬಿಗ್ ಶಾಕ್ – ಮದುವೆಯಾಗಲಿರುವ ಯುವಕ ಅಪಘಾತದಲ್ಲಿ ಮೃತ್ಯು…! Read More »

ಕರಾವಳಿ

ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 11. ಗದ್ದೆ, ತೊಟಗಳಿಗೆ ನುಗ್ಗಿರುವ ಎರಡು ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿಯುಂಟು ಮಾಡಿರುವ ಘಟನೆ ತಾಲೂಕಿನ ಪುದುವೆಟ್ಟು ಗ್ರಾಮದ ನಡ್ವೈಲ್ ಬೈಲಿನಲ್ಲಿ ನಡೆದಿದೆ. ಸ್ಥಳೀಯರಾದ ಭಿರ್ನಾಲಿ ಚಂದಪ್ಪ ಗೌಡ, ಲಿಂಗಪ್ಪ ಸಾಲಿಯಾನ್ ಕೂಡೈ, ಆನಂದ ಗೌಡ ಹೊಸಮನೆ, ನಾರಾಯಣ ಗೌಡ ಗುತ್ತು, ಪಟ್ಲ ದೇಜಪ್ಪ ಗೌಡ ಮೊದಲಾದವರ ತೋಟ ಹಾಗೂ ಗದ್ದೆಗಳಿಗೆ ನುಗ್ಗಿರುವ ಆನೆಗಳು 8 ತೆಂಗಿನ ಮರಗಳು, 10 ಅಡಿಕೆ ಮರ ಹಾಗೂ 10

ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ಲೋ ಬಿಪಿ- ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 11. ಲೋ ಬಿಪಿ ಉಂಟಾಗಿ ಕುಸಿದುಬಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತರುಣಕುಮಾರ್ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಕುಸಿದುಬಿದ್ದ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿಯವರು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ದಾರಿಮಧ್ಯೆ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಲೋ ಬಿಪಿ- ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top