ನ್ಯೂಸ್ ಕಡಬ

ಖರ್ಚಿಗೆ ಹಣ ಕೊಡಲಿಲ್ಲವೆಂದು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಆ.04. ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್(17)ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಪ್ರಥಮ ಪಿಯುಸಿಯನ್ನು ಮುಗಿಸಿದ್ದ ಸುಶಾಂತ್ ಗೆ ಡಿಪ್ಲೊಮಾಗೆ ಸೇರಿಸಲಾಗಿತ್ತು. 500ರೂ. ಕೊಟ್ಟು ಕಾಲೇಜಿಗೆ ಕಳುಹಿಸಿದ್ದು, ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ನೀಡಿರಲಿಲ್ಲ. ಇದರಿಂದ ಕೋಪದಲ್ಲಿ ಮನೆಯಲ್ಲಿದ್ದ ಸುಶಾಂತ್ ಕೋಣೆಯೊಳಗೆ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ […]

ಖರ್ಚಿಗೆ ಹಣ ಕೊಡಲಿಲ್ಲವೆಂದು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಶ್ಮೀರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ಯೋಧ ಪತ್ತೆ

(ನ್ಯೂಸ್ ಕಡಬ)newskadaba.com ಶ್ರೀನಗರ, ಆ.04. ಜಮ್ಮು ಮತ್ತು ಕಾಶ್ಮೀರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ಸೇನಾ ಯೋಧನನ್ನು ಪೊಲೀಸರು ಇದೀಗ ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ನಾಪತ್ತೆಯಾಗಿದ್ದ ಜಾವೆದ್ ಅಹ್ಮದ್ ವಾನಿ (25) ಎಂಬ ಸೇನಾ ಯೋಧನನ್ನು ಕುಲ್ಗಾಮ್ ವಶಪಡಿಸಿಕೊಳ್ಳಲಾಗಿದ್ದು, ವೈದ್ಯಕೀಯ ತಪಾಸಣೆಯ ನಂತರ ಜಂಟಿ ವಿಚಾರಣೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಯೋಧನ ನಾಪತ್ತೆ ಪ್ರಕರಣದ ಬಗ್ಗೆ ಪೊಲೀಸರು ಈ ಹಿಂದೆ ಯಾವುದೇ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ. ಆದರೂ ಅವರನ್ನು ಭಯೋತ್ಪಾದಕರು ಅಪಹರಿಸಿರಬಹುದು ಎಂಬ

ಕಾಶ್ಮೀರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ಯೋಧ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಇಚ್ಲಂಪಾಡಿ: ಕಾಡಾನೆ ದಾಳಿ ಪ್ರದೇಶಕ್ಕೆ ಕಾಂಗ್ರೆಸ್ ಮುಖಂಡರ ಭೇಟಿ; ಪರಿಶೀಲನೆ

(ನ್ಯೂಸ್ ಕಡಬ)newskadaba.com  ನೆಲ್ಯಾಡಿ, ಆ.03. ಕೆಲ ದಿನದ ಹಿಂದೆ ಆನೆ ದಾಳಿಯಿಂದ ಹಾನಿಗೊಂಡ ಇಚ್ಲಂಪಾಡಿಯ ಗುಂಡಿಕಂಡ, ಬಿಜೇರು, ನಡುಮನೆ ಕ್ರಾಸ್ ಪ್ರದೇಶಕ್ಕೆ ಕೆಪಿಸಿಸಿ ಸಂಯೋಜಕ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿದ್ದ ಜಿ. ಕೃಷ್ಣಪ್ಪರವರ ನೇತೃತ್ವದಲ್ಲಿ ಕಾಂಗ್ರೇಸ್ ಮುಖಂಡರ ನಿಯೋಗವೊಂದು ಪರಿಶೀಲನೆ ನಡೆಸಿದೆ ಎನ್ನಲಾಗಿದೆ. ಕಾಡಾನೆ ದಾಳಿಯಿಂದ ಆಗಿರುವ ನಷ್ಟದ ಕುರಿತಂತೆ  ವಲಯಾರಣ್ಯಧಿಕಾರಿಯವರಿಂದ ಮಾಹಿತಿ ಪಡೆದುಕೊಂಡ ಜಿ.ಕೃಷ್ಣಪ್ಪ, ಪರಿಹಾರ ಒದಗಿಸಿ ಕೊಡುವ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.  

ಇಚ್ಲಂಪಾಡಿ: ಕಾಡಾನೆ ದಾಳಿ ಪ್ರದೇಶಕ್ಕೆ ಕಾಂಗ್ರೆಸ್ ಮುಖಂಡರ ಭೇಟಿ; ಪರಿಶೀಲನೆ Read More »

ಕರಾವಳಿ

ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಮಾದಕ ವಸ್ತು ಸಾಗಾಟ ! – ಓರ್ವ ಅರೆಸ್ಟ್; ಸೊತ್ತು ವಶಕ್ಕೆ

(ನ್ಯೂಸ್ ಕಡಬ)newskadaba.com ಬಜಪೆ, ಆ.03. ಮಂಗಳೂರು ನಗರದಾದ್ಯಂತ ಮಾದಕ ವ್ಯಸನ ಮುಕ್ತ ಮಂಗಳೂರು ಮಾಡುವ ನಿಟ್ಟಿನಲ್ಲಿ ಮೇಲಾಧಿಕಾರಿಗಳು ನೀಡಿದ ಸೂಚನೆಯಂತೆ ಬಜಪೆ ಠಾಣಾ ಪೊಲೀಸರು ಮುರ ನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ಸ್ವಿಫ್ಟ್ ಕಾರನ್ನು ನಿಲ್ಲಿಸಲು ಸೂಚನೆ ನೀಡಿದಾಗ ಕಾರು ಚಾಲಕ ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. ತತ್ ಕ್ಷಣ ಪೊಲೀಸರು ಕಾರಿನ ಬಳಿ ತೆರಳಿ ಅಬ್ದುಲ್ ಅಝೀಜ್(34) ನ್ನು ವಶಕ್ಕೆ

ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಮಾದಕ ವಸ್ತು ಸಾಗಾಟ ! – ಓರ್ವ ಅರೆಸ್ಟ್; ಸೊತ್ತು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಸಿಯೂಟದಲ್ಲಿ ಕೊಳೆತ ತರಕಾರಿ ! – ಮುಖ್ಯಶಿಕ್ಷಕಿಗೆ ನೋಟಿಸ್

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.03. ಶಾಲೆಯ ಬಿಸಿಯೂಟಕ್ಕೆ ಕೊಳೆತ ತರಕಾರಿ ಬಳಸಿದ ಹಿನ್ನೆಲೆಯಲ್ಲಿ ಸರಕಾರಿ ಪ್ರಾಥಮಿಕ ಮಾದರಿ ಶಾಲೆ ಮುಖ್ಯಶಿಕ್ಷಕಿಯೋರ್ವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಾರಣ ಕೇಳಿ ನೋಟಿಸ್‌ ನೀಡಿದ್ದಾರೆ ಎನ್ನಲಾಗಿದೆ. ಶಾಲೆಯಲ್ಲಿ ಕೊಳೆತ ತರಕಾರಿ ಬಳಸಿ ಬಿಸಿಯೂಟ ಬಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್‌ ಹಾಗೂ ಅಕ್ಷರ ದಾಸೋಹ ತಂಡ ಶಾಲೆಗೆ ಭೇಟಿ ನೀಡಿ ಚರ್ಚಿಸಿದರು ಎನ್ನಲಾಗಿದೆ.

ಬಿಸಿಯೂಟದಲ್ಲಿ ಕೊಳೆತ ತರಕಾರಿ ! – ಮುಖ್ಯಶಿಕ್ಷಕಿಗೆ ನೋಟಿಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೀಲ್ಸ್ ಗಾಗಿ ರಸ್ತೆಯಲ್ಲಿ ಯುವಕನ ಹುಚ್ಚಾಟ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಣಿಪಾಲ, ಆ.03. ಅಪಾಯಕಾರಿ ಸಾಹಸಗಳನ್ನು ಮಾಡಿ ರಸ್ತೆಯಲ್ಲಿ ಸಂಚರಿಸುವವರಿಗೆ ಅಪಾಯ ತಂದೊಡ್ಡುತ್ತಿದ್ದ 19 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಬ್ಬರು ಯುವಕರು ಸ್ಕೂಟರ್‌ಗಳನ್ನು ಅಪಾಯಕಾರಿಯಾಗಿ ಅತಿವೇಗದಲ್ಲಿ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದ್ವಿಚಕ್ರ ವಾಹನಗಳು

ರೀಲ್ಸ್ ಗಾಗಿ ರಸ್ತೆಯಲ್ಲಿ ಯುವಕನ ಹುಚ್ಚಾಟ – ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪಂಪ್ ಹಾಕಲು ಹೋದ ಶಾಲಾ ಸಹಾಯಕಿಗೆ ಹಾವು ಕಡಿತ – ಸ್ಥಿತಿ ಗಂಭೀರ

(ನ್ಯೂಸ್ ಕಡಬ)newskadaba.com ಕಾರವಾರ, ಆ.03. ಕರ್ನಾಟಕ ಪಬ್ಲಿಕ್ ಶಾಲೆಯ ಸಹಾಯಕಿ ಆನಂದಿ ಎಂಬ ಮಹಿಳೆಗೆ ಹಾವು ಕಡಿದ ಘಟನೆ ಕಾರವಾರದಲ್ಲಿ ವರದಿ ತಿಳಿಸಿದೆ. ಶಾಲಾ ಸಮಯದಲ್ಲಿ ನೀರಿನ ಪಂಪ್ ಸ್ಟಾರ್ಟ್ ಮಾಡಲು ತೆರಳುವ ವೇಳೆ ಆನಂದಿ ಅವರಿಗೆ ಹಾವು ಕಚ್ಚಿದೆ ಎನ್ನಲಾಗಿದೆ. ತೀವ್ರ ಅಸ್ವಸ್ಥರಾದ ಅವರನ್ನು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಿದರು ಎಂದು ತಿಳಿದುಬಂದಿದೆ. ಇವರ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎನ್ನಲಾಗಿದೆ.

ಪಂಪ್ ಹಾಕಲು ಹೋದ ಶಾಲಾ ಸಹಾಯಕಿಗೆ ಹಾವು ಕಡಿತ – ಸ್ಥಿತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ತಾಲೂಕು ಆಡಳಿತ ವತಿಯಿಂದ  ಸ್ವಾತಂತ್ರೊತ್ಸವ ಆಚರಣೆ ಹಿನ್ನೆಲೆ – ತಹಸೀಲ್ದಾರ್ ಕಛೇರಿಯಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ)newskadaba.com ಕಡಬ, ಆ.03. ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ನೇತೃತ್ವದಲ್ಲಿ ೭೬ ನೇ ಸ್ವಾತಂತ್ರೋತ್ಸವವನ್ನು   ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಚರಿಸುವ ನಿಟ್ಟಿನಲ್ಲಿ ತಹಸೀಲ್ದಾರ್ ರಮೇಶ್ ಬಾಬು  ಅಧ್ಯಕ್ಷತೆಯಲ್ಲಿ ಕಡಬದ ಮಿನಿ ವಿಧಾನಸೌಧ  ಸಭಾಂಗಣದಲ್ಲಿ ಮಂಗಳವಾರ  ಪೂರ್ವಭಾವಿ ಸಭೆ  ನಡೆಯಿತು. ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಸ ಅಧ್ಯಕ್ಷತೆವಹಿಸಲಿದ್ದು   ಈಗ ತಾ.ಪಂ, ಪಟ್ಟಣ ಪಂಚಾಯಿತಿ, ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತ ಮಂಡಳಿ ಅಸ್ಥಿತ್ವ ಇಲ್ಲದ ಕಾರಣ ಕಡಬ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಸೀತಾ

ಕಡಬ ತಾಲೂಕು ಆಡಳಿತ ವತಿಯಿಂದ  ಸ್ವಾತಂತ್ರೊತ್ಸವ ಆಚರಣೆ ಹಿನ್ನೆಲೆ – ತಹಸೀಲ್ದಾರ್ ಕಛೇರಿಯಲ್ಲಿ ಪೂರ್ವಭಾವಿ ಸಭೆ Read More »

ಕರಾವಳಿ

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ರೈಲ್ವೇ ನಿಲ್ದಾಣ.! – ಆ.06 ರಂದು ಪ್ರಧಾನಿಯಿಂದ ಶಿಲಾನ್ಯಾಸ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಡಿ ಮಂಗಳೂರು ಜಂಕ್ಷನ್ ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆ.06 ರಂದು ಶಿಲಾನ್ಯಾಸ ನೆರವೇರಲಿದೆ ಎಂದು ವರದಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸುವರು ಎಂದು ತಿಳಿದುಬಂದಿದೆ.

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ರೈಲ್ವೇ ನಿಲ್ದಾಣ.! – ಆ.06 ರಂದು ಪ್ರಧಾನಿಯಿಂದ ಶಿಲಾನ್ಯಾಸ Read More »

ಕರಾವಳಿ

ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿದ್ದ ಮಹಿಳೆ ಮತ್ತು ಮಗು ನಾಪತ್ತೆ.! – ದೂರು ದಾಖಲು

(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಆ.03. ಬೆಂಗಳೂರು ಗ್ರಾಮಾಂತರದ ನಿವಾಸಿ ರಾಜಶೇಖರ್ ಎಂಬವರ ಪತ್ನಿ ಹರ್ಷಿತ(28) ಹಾಗೂ ಪುತ್ರ ಭಗತ್(3) ಕುಕ್ಕೆ ಸುಬ್ರಮಣ್ಯ ದೇವಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಾಜಶೇಖರ್, ಪತ್ನಿ, ಮಗ, ಹಾಗೂ ಸ್ನೇಹಿತರೊಂದಿಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಬಂದಿದ್ದು, ಅಧೀ ಸುಬ್ರಮಣ್ಯಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದರು ಎನ್ನಲಾಗಿದೆ.                                           

ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿದ್ದ ಮಹಿಳೆ ಮತ್ತು ಮಗು ನಾಪತ್ತೆ.! – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top