ನ್ಯೂಸ್ ಕಡಬ

ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಕುಲಪತಿ ಕೆ.ಬೈರಪ್ಪ ವಿಧಿವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪ ಕುಲಪತಿ ಪ್ರೊ.ಕೆ.ಬೈರಪ್ಪ(69) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ವಿಶ್ವ ವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿ ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು ಎನ್ನಲಾಗಿದೆ. ಇನ್ನು ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ವಿಧಿವಶರಾಗಿದ್ದಾರೆ ಎನ್ನಲಾಗಿದೆ.

ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಕುಲಪತಿ ಕೆ.ಬೈರಪ್ಪ ವಿಧಿವಶ Read More »

ಕರಾವಳಿ

ಫೇಸ್‌ ಬುಕ್‌ ಗೆಳೆಯನನ್ನು ಮದುವೆಯಾಗಲು ಶ್ರೀಲಂಕಾದಿಂದ ಆಂಧ್ರಕ್ಕೆ ಬಂದ ಯುವತಿ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಜು. 31. ಶ್ರೀಲಂಕಾ ಮೂಲದ 25 ವರ್ಷದ ಯುವತಿಯೊಬ್ಬಳು ಫೇಸ್‌ ಬುಕ್‌ ಗೆಳೆಯನನ್ನು ಮದುವೆಯಾಗಲು ಆಂಧ್ರ ಪ್ರದೇಶಕ್ಕೆ ಬಂದಿರುವ ಕುರಿತು ವರದಿಯಾಗಿದೆ. ಲಕ್ಷ್ಮಣ್‌(28) ಎನ್ನುವ ಯುವಕನಿಗೆ 2017 ರಲ್ಲಿ ಫೇಸ್‌ ಬುಕ್‌ ಮೂಲಕ ಪರಿಚಯವಾಗಿ ಸ್ನೇಹಿತರಾದ ಇವರು, ಆ ಬಳಿಕ ಆತ್ಮೀಯರಾಗಿದ್ದು, ಇವರ ಆತ್ಮೀಯತೆ ಪ್ರೀತಿಗೆ ತಿರುಗಿತು ಎನ್ನಲಾಗಿದೆ. ಪರಸ್ಪರ ಪ್ರೀತಿಸುತ್ತಿದ್ದ ಇವರು ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ. ಇನ್ನು ಯುವತಿಯು ಶ್ರೀಲಂಕಾದಿಂದ ಆಂಧ್ರಕ್ಕೆ ಪ್ರವಾಸಿ ವೀಸಾದೊಂದಿಗೆ ಬಂದಿದ್ದು, ಇಬ್ಬರ ನಡುವಿನ ಪ್ರೀತಿಯ

ಫೇಸ್‌ ಬುಕ್‌ ಗೆಳೆಯನನ್ನು ಮದುವೆಯಾಗಲು ಶ್ರೀಲಂಕಾದಿಂದ ಆಂಧ್ರಕ್ಕೆ ಬಂದ ಯುವತಿ Read More »

ರಾಷ್ಟ್ರೀಯ ನ್ಯೂಸ್

ನೀವು ಯಾವಾಗ ಚುನಾವಣೆಗೆ ನಿಲ್ಲುತ್ತೀರಿ ? – ಚಕ್ರವರ್ತಿ ಸೂಲಿಬೆಲೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31.  ‘ನೀವು ಕರ್ನಾಟಕದ ಯುವಬಜನತೆಯೊಂದಿಗೆ ಸಾಕಷ್ಟು ತಮಾಷೆ, ಚೆಲ್ಲಾಟಗಳನ್ನು ಆಡಿದ್ದಾಗಿದೆ. ಒಂದಿಷ್ಟು ಪ್ರಾಮಾಣಿಕತೆಯಿಂದ ವರ್ತಿಸಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಚಕ್ರವರ್ತಿ ಸೂಲಿಬೆಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಲಿಬೆಲೆ ಟ್ವೀಟ್‍ಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಅವರು, ‘ಕೇಸರಿ ಶಾಲು ಧರಿಸಿ ಪ್ರತಿಭಟನೆ ಮಾಡುವ ನೀವು ಎಂದಿಗೂ ಮುಂಚೂಣಿಯಲ್ಲಿಲ್ಲ, ಯುವ ಅಮಾಯಕರಿಗೆ ಮಾತ್ರ ಮುನ್ನಡೆಸಲು ಅವಕಾಶ ನೀಡುತ್ತಿಲ್ಲವೇ ? ನೀವು ಯೂಟ್ಯೂಬರ್ ಮತ್ತು ಪ್ರೇರಕರಾಗಿ ನಿಮ್ಮನ್ನು ಏಕೆ ಸೀಮಿತಗೊಳಿಸುತ್ತಿದ್ದೀರಿ ? ನೀವು ಯಾವಾಗ

ನೀವು ಯಾವಾಗ ಚುನಾವಣೆಗೆ ನಿಲ್ಲುತ್ತೀರಿ ? – ಚಕ್ರವರ್ತಿ ಸೂಲಿಬೆಲೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು Read More »

ಕರ್ನಾಟಕ

ಅರಶಿಣ ಗುಂಡಿ ಜಲಪಾತಕ್ಕೆ ಬಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.30. ವಾರದ ಹಿಂದೆ ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆಗೆ ಹೋಗಿ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಭದ್ರಾವತಿ ಮೂಲದ ಯುವಕ ಶರತ್ ಜು. 23ರಂದು ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತ ನೋಡಲು ಸ್ನೇಹಿತನೊಂದಿಗೆ ಹೋಗಿದ್ದು, ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದ ಅವರು ಜಾರಿ ನೀರಿಗೆ ಬಿದ್ದಿದ್ದರು. ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸುತ್ತಿದ್ದವು . ಆದರೆ

ಅರಶಿಣ ಗುಂಡಿ ಜಲಪಾತಕ್ಕೆ ಬಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ Read More »

ಕರ್ನಾಟಕ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.30. ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ಶಾಫಿ ಎಂದು ಗುರುತಿಸಲಾಗಿದೆ. 12 ವರ್ಷದ ಬಾಲಕಿಯನ್ನು ಆರೋಪಿಯು ಹಲವು ಬಾರಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಿ ಮಹಿಳಾ ಠಾಣೆಗೆ ದೂರು ನೀಡಲಾಗಿತ್ತು. ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎನ್ನಲಾಗಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ

(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಆಟೋ ಚಾಲಕ ಗಾಯಗೊಂಡಿದ್ದು, ಹನೀಪ್ ಎಂದು ಗುರುತಿಸಲಾಗಿದೆ. ಕಾರು ಮಂಗಳೂರು ಕಡೆಯಿಂದ ಪುತ್ತೂರಿಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಅಪಘಾತವಾದ ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಬುರ್ಖಾ ಏಕೆ ಧರಿಸಿಲ್ಲ ಎಂದು ವಿದ್ಯಾರ್ಥಿನಿಗೆ ಗದರಿದ ಆರೋಪ..! – ಬಸ್ ಚಾಲಕ ಅಮಾನತು

(ನ್ಯೂಸ್ ಕಡಬ)newskadaba.com ಕಲಬುರಗಿ, ಜು.29. ಮುಸ್ಲಿಂ ವಿದ್ಯಾರ್ಥಿನಿಗೆ ಏಕೆ ಬುರ್ಖಾ ಧರಿಸಲಿಲ್ಲ ಎಂದು ಗದರಿಸಿ ಬಸ್ ಪ್ರಯಾಣಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿತ ಬಸವ ಕಲ್ಯಾಣ ಡಿಪೋ ದ ಬಸ್ ಚಾಲಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬೀದರ್ ವಿಭಾಗೀಯ ನಿಯಂತ್ರಣಾಧಿಕಾರಿ ಸಿ.ಎಸ್.ಫುಲೇಕರ್ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಶಾಲೆ ಬಿಟ್ಟು ಮನೆಗೆ ತೆರಳಲು ಬಸ್ ಹತ್ತಲು ಮುಂದಾಗಿದ್ದ ಮುಸ್ಲಿಂ ವಿದ್ಯಾರ್ಥಿನಿ ಹಿಜಾಬ್ ಧರಿಸಿದ್ದಳು. ಇದಕ್ಕೆ ಪ್ರಶ್ನಿಸಿದ ಮಹಿಬೂಬ್ ಪಟೇಲ್, ‘ಬುರ್ಖಾ ಏಕೆ ಹಾಕಿಕೊಂಡಿಲ್ಲ’ ಎಂದು

ಬುರ್ಖಾ ಏಕೆ ಧರಿಸಿಲ್ಲ ಎಂದು ವಿದ್ಯಾರ್ಥಿನಿಗೆ ಗದರಿದ ಆರೋಪ..! – ಬಸ್ ಚಾಲಕ ಅಮಾನತು Read More »

ಕರ್ನಾಟಕ

ಪುತ್ತಿಲ ಪರಿವಾರದ ವಿರುದ್ಧ ಕೇಸ್ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.29. ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಫಲಿತಾಂಶ ಪ್ರಕಟಗೊಂಡ ನಂತರ ನಗರದ ಮುಖ್ಯರಸ್ತೆಯಲ್ಲಿ ಅನುಮತಿಯಿಲ್ಲದೆ ವಿಜಯೋತ್ಸವ ನಡೆಸಿದ ಪುತ್ತಿಲ ಪರಿವಾರದ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಸಾರ್ವಜನಿಕ ಶಾಂತಿಭಂಗ ಪ್ರಕರಣ ದಾಖಲಾಗಿದೆ. ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರದಿಂದ ಸ್ಪರ್ಧಿಸಿದ್ದ ಸುಬ್ರಹ್ಮಣ್ಯ ಬಲ್ಯಾಯ ಗೆಲುವು ಸಾಧಿಸಿದ್ದರು. ಫಲಿತಾಂಶ ಪ್ರಕಟಗೊಂಡ ಬಳಿಕ ತಾಲೂಕು ಆಡಳಿತ ಸೌಧದ ಬಳಿಯಿಂದ ಪುತ್ತಿಲ ಪರಿವಾರದ ಕಚೇರಿ ತನಕ ನಗರದ ಮುಖ್ಯ ರಸ್ತೆಯಲ್ಲಿ ಡಿಜೆ ಅಳವಡಿಸಿ ಮೆರವಣಿಗೆ ನಡೆಸಲಾಗಿತ್ತು ಎನ್ನಲಾಗಿದೆ. ಮೆರವಣಿಗೆ

ಪುತ್ತಿಲ ಪರಿವಾರದ ವಿರುದ್ಧ ಕೇಸ್ ದಾಖಲು Read More »

ಕರಾವಳಿ

ಕಡಬ: ಸಂಪರ್ಕ ರಸ್ತೆ ಇಲ್ಲದೆ ರೋಗಿಯನ್ನು ಹೊತ್ತುಕೊಂಡು ಸಾಗಿದ ಗ್ರಾಮಸ್ಥರು.!!

(ನ್ಯೂಸ್ ಕಡಬ)newskadaba.com ಕಡಬ, ಜು.29. ಸಂಪರ್ಕ ರಸ್ತೆ ಇಲ್ಲದ ಕಾರಣ ರೋಗಿಯೊಬ್ಬರನ್ನು ಚೇರ್ ಮೇಲೆ ಕುಳ್ಳಿರಿಸಿ ಆಸ್ಪತ್ರೆಗೆ ಹೊತ್ತುಕೊಂಡು ಹೋಗುವ ಘಟನೆ ವರದಿಯಾಗಿದೆ. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಇಚ್ಲಂಪ್ಪಾಡಿಯ ಕೆರ್ನಡ್ಕ ನಿವಾಸಿ ಸಾವಿತ್ರಿ ಗೋಪಾಲ್ ಅವರಿಗೆ ವಾರಕ್ಕೆ 2 ದಿನ ಪುತ್ತೂರು ಆಸ್ಪತ್ರೆಯಗೆ ಹೋಗಿ ಚಿಕಿತ್ಸೆ ಪಡೆಯಬೇಕಾಗಿದೆ. ಅವರ ಮನೆಗೆ ವಾಹನ ಸಂಚಾರಕ್ಕೆ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಹೊತ್ತೇ ಸಾಗಬೇಕಾದ ಸ್ಥಿತಿ ಇದೆ. ಸಾವಿತ್ರಿ

ಕಡಬ: ಸಂಪರ್ಕ ರಸ್ತೆ ಇಲ್ಲದೆ ರೋಗಿಯನ್ನು ಹೊತ್ತುಕೊಂಡು ಸಾಗಿದ ಗ್ರಾಮಸ್ಥರು.!! Read More »

ಕರಾವಳಿ

ಕೆ.ಆರ್.ಎಸ್ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷ

(ನ್ಯೂಸ್ ಕಡಬ)newskadaba.com ಮಂಡ್ಯ, ಜು.29. ಶ್ರೀರಂಗಪಟ್ಟಣ ತಾಲೂಕಿನ‌ಲ್ಲಿರುವ ಕೆ ಆರ್ ಎಸ್ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ತುಂಬುತ್ತಿರುವ ಡ್ಯಾಂನ ಹಿನ್ನೀರಿನಲ್ಲಿ ನೀರು ನಾಯಿಗಳು ಕಂಡು ಬಂದಿದ್ದು, ಕ್ಯಾಮರಾ ಕಂಡೊಡನೆ ನೀರಿನಲ್ಲಿ ಮರೆಯಾಗಿವೆ. ಈ ಪೈಕಿ ಒಂದು ನೀರು ನಾಯಿ, ನೀರಿನಲ್ಲಿ ಮುಳಗಿ ಮತ್ತೆ ಮೇಲೆ ಬಂದು ಕ್ಯಾಮರಾ ನೋಡುತ್ತಿರುವ ದೃಶ್ಯ ಕೂಡ ಕಂಡುಬಂದಿದೆ.

ಕೆ.ಆರ್.ಎಸ್ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷ Read More »

ಕರ್ನಾಟಕ
Scroll to Top