ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ► ನೂಜಿಬಾಳ್ತಿಲ ಬೆಥನಿ ಕಾಲೇಜಿನಲ್ಲಿ ವಾರ್ಷಿಕ ವಿಶೇಷ ಶಿಬಿರ
(ನ್ಯೂಸ್ ಕಡಬ) newskadaba.com ಕಡಬ,ಅ.4. ದೇವರು ನಮ್ಮನ್ನು ಮನುಷ್ಯರನ್ನಾಗಿ ಈ ಲೋಕದಲ್ಲಿ ಸೃಷ್ಟಿಸಿದ್ದು ನಾವು ಉತ್ತಮ ಶಿಕ್ಷಣ ಪಡೆಯುವುದರೊಂದಿಗೆ ಸಾಮಾಜಿಕ ವಿಚಾರಧಾರೆಗಳನ್ನು ಅರಿತುಕೊಂಡು ಸಮಾಜದಲ್ಲಿ ಪ್ರೀತಿ, ವಿಶ್ವಾಸದಿಂದ ಶಾಂತಿ ಸೌಹಾರ್ದತೆಯಿಂದ ಬದುಕಬೇಕು ಎಂದು ಪುತ್ತೂರು ಧರ್ಮಪ್ರಾಂತ್ಯ ನೂತನ ಧರ್ಮಾಧ್ಯಕ್ಷ ಡಾ. ಗೀವರ್ಗೀಸ್ ಮಾರ್ ಮಕಾರಿಯೋಸ್ ಹೇಳಿದರು. ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಒಂದು ವಾರಗಳ ನಡೆಯುವ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಎಲ್ಲರ ಒಳಿತನ್ನು ಬಯಸಿ ಜೀವನ ಮಾಡುವುದೆ ನಿಜವಾದ ಧರ್ಮ. […]









