ನ್ಯೂಸ್ ಕಡಬ

ವಿವಾಹಿತ ಮಹಿಳೆ ಪಕ್ಕದ ಮನೆಯ ಯುವತಿಯೊಂದಿಗೆ ನಾಪತ್ತೆ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಜು. 29. ವಿವಾಹಿತ ಮಹಿಳೆಯೊಬ್ಬಳು ಪಕ್ಕದ ಮನೆ ಯುವತಿಯೊಂದಿಗೆ ಓಡಿ ಹೋಗಿರುವ ವಿಚಿತ್ರ ಪ್ರಕರಣ ಉತ್ತರಪ್ರದೇಶದಿಂದ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಇಬ್ಬರ ನಡುವೆ ಮೊಬೈಲ್ ಫೋನ್‌ ಮೂಲಕ ದಿನಂಪ್ರತಿ ಕನಿಷ್ಠ ಏಳರಿಂದ ಎಂಟು ಗಂಟೆಗಳವರೆಗೆ ಫೋನ್ ಮೂಲಕ ಸಂಭಾಷಣೆ ನಡೆಯುತ್ತಿತ್ತು. ಈ ನಡುವೆ, ಪಕ್ಕದ ಮನೆಯ ಯುವತಿ ಮತ್ತು ವಿವಾಹಿತ ಮಹಿಳೆ ಇದ್ದಕಿದ್ದಂತೆ ನಾಪತ್ತೆ ಆಗಿ ಬಿಟ್ಟಿದ್ದಾರೆ ಎನ್ನಲಾಗಿದೆ. ಪತಿಯೊಂದಿಗೆ ಮಾರುಕಟ್ಟೆಗೆ ತೆರಳಿದ್ದ ವಿವಾಹಿತ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದರಿಂದ ಚಿಂತಿತನಾದ […]

ವಿವಾಹಿತ ಮಹಿಳೆ ಪಕ್ಕದ ಮನೆಯ ಯುವತಿಯೊಂದಿಗೆ ನಾಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಡಿತರ ಚೀಟಿಯಿಂದ ಮೃತರ ಹೆಸರು ತೆಗೆಯಲು ಡಿಸಿ ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29 ದ.ಕ ಜಿಲ್ಲೆಯಲ್ಲಿನ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ ಕೂಡ ಅವರ ಹೆಸರು ಪಡಿತರ ಚೀಟಿಯಲ್ಲಿ ತೆಗೆದು ಹಾಕಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಅಕ್ರಮವಾಗಿ ಉಳಿಸಿರುವುದು ಪತ್ತೆಯಾಗಿದೆ. ಅಂತಹ ಪಡಿತರ ಚೀಟಿದಾರರು ಮೃತಪಟ್ಟವರ ದಾಖಲಾತಿಯನ್ನು ತಾಲೂಕು ಕಚೇರಿಗೆ ಸಲ್ಲಿಸಿ ಪಡಿತರ ಚೀಟಿಯಿಂದ ಮೃತಪಟ್ಟವರ ಹೆಸರನ್ನು ತೆಗೆಸಬೇಕು. ಇಲ್ಲದಿದ್ದರೆ ನಿಯಾಮಾನುಸಾರ ಅನರ್ಹಗೊಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪಡಿತರ ಚೀಟಿಯಿಂದ ಮೃತರ ಹೆಸರು ತೆಗೆಯಲು ಡಿಸಿ ಸೂಚನೆ Read More »

ಕರಾವಳಿ

ಮನೆಯ ಮೇಲೆ ಕುಸಿದು ಬಿದ್ದ ಮರ – ಮಹಿಳೆ ಅಪಾಯದಿಂದ ಪಾರು !!

(ನ್ಯೂಸ್ ಕಡಬ)newskadaba.com ಪುತ್ತೂರು, ಜು.29. ಮನೆಯ ಮೇಲೆ ಮರ ಬಿದ್ದು ಮನೆ ಭಾಗಶಃ ಹಾನಿಯಾಗಿರುವ ಘಟನೆ ಸರ್ವೆ ಗ್ರಾಮದ ರೆಂಜಿಲಾಡಿಯಲ್ಲಿ ರಾತ್ರಿ ಸಂಭವಿಸಿದೆ ಎನ್ನಲಾಗಿದೆ. ರೆಂಜಿಲಾಡಿ ನಿವಾಸಿ ಸರಕಾರಿ ಪ್ರೌಢ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯಾಗಿರುವ ಮೋಹಿನಿ ಎಂಬವರ ಮನೆಗೆ ರಾತ್ರಿ ವೇಳೆ ಮರ ಮುರಿದು ಬಿದ್ದಿದ್ದು, ಮನೆಯ ಹಿಂಭಾಗದ ಗೋಡೆ, ಶೀಟ್ ಸಂಪೂರ್ಣ ಕುಸಿದು ಬಿದ್ದಿದೆ ಎನ್ನಲಾಗಿದೆ. ಮನೆಯಲ್ಲಿ ಮೋಹಿಣಿ ಮಾತ್ರ ವಾಸವಾಗಿದ್ದು, ತನ್ನ ತಾಯಿಯ ಮನೆಗೆ ಹೋಗಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.  

ಮನೆಯ ಮೇಲೆ ಕುಸಿದು ಬಿದ್ದ ಮರ – ಮಹಿಳೆ ಅಪಾಯದಿಂದ ಪಾರು !! Read More »

ಕರಾವಳಿ

16 ವರ್ಷದ ಬಾಲಕಿಯ ಅಪಹರಿಸಿ ರೇಪ್ – ಆರೋಪಿ 15 ವರ್ಷದ ಬಾಲಕ ವಶಕ್ಕೆ !!

(ನ್ಯೂಸ್ ಕಡಬ)newskadaba.com ಬಲ್ಲಿಯಾ, ಜು.28. ನೆರೆಮನೆಯ ಹದಿಹರೆಯದ ಹುಡುಗಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ 15 ವರ್ಷದ ಹುಡುಗನನ್ನು ವಶಕ್ಕೆ ಪಡೆಯಲಾಗಿದೆ ಎಂದು ಉತ್ತರಪ್ರದೇಶದ ಬಲ್ಲಿಯಾ ಪೊಲೀಸರು ತಿಳಿಸಿದ್ದಾರೆ. ಕಳವಳಕಾರಿ ಘಟನೆ ಸಂಬಂಧ 16 ವರ್ಷದ ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ಆಕೆಯ ಆರೋಪಗಳ ಪ್ರಕಾರ, ಹುಡುಗ ಜುಲೈ 19 ರಂದು ಮಗಳನ್ನು ಅಪಹರಿಸಿದ್ದಾನೆ. ”ಅಪ್ರಾಪ್ತ ವಯಸ್ಕ ಬಾಲಕಿಯನ್ನು ಆರೋಪಿಯ ಮನೆಯ ಸಮೀಪದಿಂದ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಹುಡುಗಿಯ ಗುರುತಿನ ಮೇಲೆ ನಾವು ಆರೋಪಿ ಹುಡುಗನನ್ನು ಹಿಡಿದಿದ್ದೇವೆ

16 ವರ್ಷದ ಬಾಲಕಿಯ ಅಪಹರಿಸಿ ರೇಪ್ – ಆರೋಪಿ 15 ವರ್ಷದ ಬಾಲಕ ವಶಕ್ಕೆ !! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೃಹ ಸಚಿವರ ಮನೆ ಮುಂದೆ ಪ್ರತಿಭಟನೆ ಮಾಡಿದರವರ ವಿರುದ್ಧ FIR

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಗೃಹ ಸಚಿವ ಡಾ.ಜಿ. ಪರಮೇಶ್ವರ್ ನಿವಾಸದ ಮುಂದೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು ಎನ್ನಲಾಗಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತನಾದ ಪ್ರಶಾಂತ್ ಸೇರಿದಂತೆ 10 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 143 ಮತ್ತು 149 ರ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದ್ದು, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈ ಸಂಬಂಧ ಕಾರ್ಯಕರ್ತರ

ಗೃಹ ಸಚಿವರ ಮನೆ ಮುಂದೆ ಪ್ರತಿಭಟನೆ ಮಾಡಿದರವರ ವಿರುದ್ಧ FIR Read More »

ಕರ್ನಾಟಕ

ಕಡಬ: ಶೌಚಾಲಯದಲ್ಲಿ ವೀಡಿಯೋ ಚಿತ್ರಿಕರಣ ಪ್ರಕರಣ – ಉನ್ನತ ಮಟ್ಟದ ತನಿಖೆಗೆ ಒತ್ತಾಯ

(ನ್ಯೂಸ್ ಕಡಬ)newskadaba.com ಕಡಬ, ಜು.28. ಕಾಲೇಜೊಂದರ ಶೌಚಾಲಯದಲ್ಲಿ ಗುಪ್ತ ಕ್ಯಾಮರ ಅಳವಡಿಸಿ ವೀಡಿಯೋ ಚಿತ್ರಿಕರಣ ಮಾಡಿದ ಮೂವರು ವಿದ್ಯಾರ್ಥಿಗಳನ್ನು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಡಬ ಮಾತೃಶಕ್ತಿ ಪ್ರಮುಖ ಪ್ರಮೀಳಾ ಲೋಕೇಶ್ ಅವರು ಆಗ್ರಹಿಸಿದ್ದಾರೆ. ಹಿಂದೂಗಳ ಮೇಲೆ ನಿರಂತರವಾಗಿ ಹೀನ ಕೃತ್ಯಗಳು ನಡೆಯುತ್ತಿದ್ದು, ಈ ಮದ್ಯೆ ಮುಸ್ಲಿಂ ಸಮುದಾಯದ ಯುವತಿಯರಿಂದ ಇಂತಹ ಕೃತ್ಯ ನಡೆದಿರುವುದು ನಾಚಿಗೇಡಿತನವಾಗಿದ್ದು, ಇದರ ಹಿಂದಿರುವ ವ್ಯಕ್ತಿಗಳನ್ನು ಸೂಕ್ತ ತನಿಖೆಗೆ ಒಳಪಡಿಸಬೇಕು ಅಲ್ಲದೆ ಈ ಮೂವರು ವಿದ್ಯಾರ್ಥಿನಿಯರಿಗೆ ಶಿಕ್ಷೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಕಡಬ: ಶೌಚಾಲಯದಲ್ಲಿ ವೀಡಿಯೋ ಚಿತ್ರಿಕರಣ ಪ್ರಕರಣ – ಉನ್ನತ ಮಟ್ಟದ ತನಿಖೆಗೆ ಒತ್ತಾಯ Read More »

ಕರಾವಳಿ

ಕಡಬ: ಉಪ ವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ

(ನ್ಯೂಸ್ ಕಡಬ)newskadaba.com ಕಡಬ, ಜು.28. ಕಡಬ ತಾಲೂಕಿನ ನೆಟ್ಟಣದ ಕೇಂದ್ರೀಯ ಮರಗಳ ಸಂಗ್ರಹಾಲಯದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ಮೂಲತಃ ಕಾಸರಗೋಡು ಸಮೀಪದ ಹೊಸದುರ್ಗ ನಿವಾಸಿ ರಾಮನಾಥ ಅರಳೀಕಟ್ಟೆ ಅವರ ಪುತ್ರ ಸುಭಾಷ್ ಬಿ. (55) ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜು.28ರಂದು ನಿಧನ ಹೊಂದಿದರು ಎಂದು ವರದಿಯಾಗಿದೆ. ಮೃತರು ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿಯನ್ನು ಅಗಲಿದ್ದಾರೆ. ಸುಭಾಷ್ ಅವರು 1990ರಲ್ಲಿ ಬೆಳ್ತಂಗಡಿಯಲ್ಲಿ ಅರಣ್ಯ ವೀಕ್ಷಕರಾಗಿ ಇಲಾಖಾ ಸೇವೆಗೆ ಸೇರಿದ್ದರು. ಬೆಳ್ತಂಗಡಿಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ

ಕಡಬ: ಉಪ ವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.28. ಓವರ್ ಲೋಡ್ ಇದ್ದ ಲಾರಿ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ. ಘಟನೆಯಲ್ಲಿ ಚಾಲಕ ಅಲ್ಪ ಸ್ವಲ್ಪ ಗಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ದೇರಳಕಟ್ಟೆ ಕಡೆಯಿಂದ ಲಾರಿ ತೆರಳುತ್ತಿದ್ದು, ಈ ನಡುವೆ ತಿರುವಿನಲ್ಲಿ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಎದುರಿನಿಂದ ಬಂದಿದ್ದು, ಎದುರಿನ ಲಾರಿಗೆ ಸೈಡ್ ಕೊಡುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ಲಾರಿ ಪ್ರಪಾತಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ – ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಐಫೋನ್ ಖರೀದಿಗಾಗಿ ಹೆತ್ತ ಮಗುವನ್ನೇ ಮಾರಾಟ ಮಾಡಿದ ಪಾಪಿಗಳು

(ನ್ಯೂಸ್ ಕಡಬ)newskadaba.com ಪಶ್ಚಿಮಬಂಗಾಳ, ಜು.28. ಐಫೋನ್ ಖರೀದಿಸಲು ಹೆತ್ತ ಮಗುವನ್ನೇ ದಂಪತಿ ಮಾರಾಟ ಮಾಡಿರುವ ಘಟನೆಯೊಂದು ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಈ ದಂಪತಿ ಇನ್‌ ಸ್ಟಾಗ್ರಾಮ್ ರೀಲ್‌ಗಳನ್ನು ಮಾಡಲು ಐಫೋನ್ ಖರೀದಿಸಲು ಬಯಸಿದ್ದು, ಆದರೆ ಫೋನ್ ಖರೀದಿಸಲು ಆರ್ಥಿಕ ಸಮಸ್ಯೆ ಎದುರಾಗಿದೆ ಹೀಗಾಗಿ ತಮ್ಮ ಮಗುವನ್ನೇ ಮಾರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ದಂಪತಿಗಳಲ್ಲಿ ಬಹಳಷ್ಟು ಬದಲಾವಣೆಗಳು ಕಂಡು ಬಂದಿತ್ತು. ಜೊತೆಗೆ ದಂಪತಿಗಳಿಗೆ ಎಂಟು ತಿಂಗಳ ಹೆಣ್ಣು ಮಗು ಕೂಡಾ ಮನೆಯಲ್ಲಿ ಕಾಣುತ್ತಿರಲಿಲ್ಲ ಈ ನಡುವೆ

ಐಫೋನ್ ಖರೀದಿಗಾಗಿ ಹೆತ್ತ ಮಗುವನ್ನೇ ಮಾರಾಟ ಮಾಡಿದ ಪಾಪಿಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯ ನಾಯಕರೊಂದಿಗೆ (ಆ.02)ರಂದು ಕಾಂಗ್ರೆಸ್‌ ಹೈಕಮಾಂಡ್‌ ಸಭೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.28. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರ ಮುನಿಸಿನ ಬೆನ್ನಲ್ಲೇ, ಪಕ್ಷದ ಹಿರಿಯ ನಾಯಕರ ಜತೆಗೆ ಆಗಸ್ಟ್‌ 2ರಂದು ನವದೆಹಲಿಯಲ್ಲಿ ಸಭೆ ನಡೆಸಲು ಹೈಕಮಾಂಡ್‌ ತೀರ್ಮಾನಿಸಿದ್ದು, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಸಚಿವ ಸಂಪುಟದ ಎಲ್ಲ ಸದಸ್ಯರು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್

ರಾಜ್ಯ ನಾಯಕರೊಂದಿಗೆ (ಆ.02)ರಂದು ಕಾಂಗ್ರೆಸ್‌ ಹೈಕಮಾಂಡ್‌ ಸಭೆ Read More »

ರಾಷ್ಟ್ರೀಯ ನ್ಯೂಸ್
Scroll to Top