ನ್ಯೂಸ್ ಕಡಬ

ಚೆಕ್‍ಪೋಸ್ಟ್ ನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದರೆ ಶೂಟ್ ಮಾಡಲು IGP ಆದೇಶ ► ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು 26 ಚೆಕ್‍ಪೋಸ್ಟ್ ಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆದಿರುವುದರಿಂದಾಗಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಲ್ಲಲ್ಲಿ ಪೊಲೀಸ್ ಚೆಕ್ ಪೋಸ್ಟ್‍ಗಳನ್ನು ತೆರೆಯಲಾಗಿದ್ದು, ವಾಹನ ಮಾಲೀಕರು ಸಹಕರಿಸದೆ ತನಿಖೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದರೆ ಶೂಟ್ ಮಾಡಲು ಪಶ್ಚಿಮ ವಲಯ ಐಜಿಪಿ ಪಿ. ಹರಿಶೇಖರನ್ ಸೂಚಿಸಿದ್ದಾರೆ. ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಲು ನಿಲ್ಲಿಸುವಂತೆ ಸೂಚಿಸಿದರೂ ಕೆಲವು ಸವಾರರು ಸಹಕರಿಸದೆ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಇನ್ನು ಕೆಲವರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸುತ್ತಾರೆ. ಅಂತಹವರ ವಿರುದ್ಧ […]

ಚೆಕ್‍ಪೋಸ್ಟ್ ನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದರೆ ಶೂಟ್ ಮಾಡಲು IGP ಆದೇಶ ► ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು 26 ಚೆಕ್‍ಪೋಸ್ಟ್ ಸ್ಥಾಪನೆ Read More »

ಕರಾವಳಿ

ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜು: ಪಾಲಕರ ಸಮಾವೇಶ, ಕಂಪ್ಯೂಟರ್ ಕೊಠಡಿ, ತುಳು ಪಠ್ಯ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.09. ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪ.ಪು.ಕಾಲೇಜಿನಲ್ಲಿ ಪಾಲಕರ ಸಮಾವೇಶ, ನೂತನ ಕಂಪ್ಯುಟರ್ ಕೊಠಡಿ ಹಾಗೂ ತುಳು ಪಠ್ಯ ಉದ್ಘಾಟನಾ ಸಮಾರಂಭ ಜು.7ರಂದು ಬೆಳಿಗ್ಗೆ ರೆ.ಫಾ.ಜೋಸ್ ಮೆಮೋರಿಯಲ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಜಿ.ಎಸ್.,ಮಾತನಾಡಿ, ಮಂಗಳೂರಿನ ಕ್ರಿಶ್ಚನ್ ಪಾಮ್ಪಾಮ್ ವಿದ್ಯಾಸಂಸ್ಥೆಯಲ್ಲಿ 18 ಮಕ್ಕಳಿಗೆ ತುಳು ಭಾಷೆ ಕಲಿಕೆ ಆರಂಭಿಸುವ ಮೂಲಕ ರಾಜ್ಯದಲ್ಲಿ ತುಳುಭಾಷೆ ಪಠ್ಯ ಆರಂಭಗೊಂಡಿದ್ದು ಈಗ ರಾಜ್ಯದಲ್ಲಿ ತೃತೀಯ ಭಾಷೆಯಾಗಿ 36 ಶಾಲೆಗಳಲ್ಲಿ ಕಲಿಸಲಾಗುತ್ತಿದೆ. ಕಡಬ ತಾಲೂಕಿನಲ್ಲಿ

ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜು: ಪಾಲಕರ ಸಮಾವೇಶ, ಕಂಪ್ಯೂಟರ್ ಕೊಠಡಿ, ತುಳು ಪಠ್ಯ ಉದ್ಘಾಟನೆ Read More »

ಕರಾವಳಿ

ಕುತ್ತಾರು: ಯುವಕನಿಗೆ ಚೂರಿ ಇರಿತ ► ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಪ್ರಕರಣಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರು ರಾಣಿಪುರದಲ್ಲಿ ಯುವಕನ ಮೇಲೆ ತಲವಾರು ದಾಳಿ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಅಂಬ್ಲಮೊಗರು ಕೋಟ್ರಗುತ್ತು ನಿವಾಸಿ ಚಿರಂಜೀವಿ(24) ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಮೂವರು ಅಪರಿಚಿತರು ತಲೆಗೆ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ. ಚಿರಂಜೀವಿಯನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.

ಕುತ್ತಾರು: ಯುವಕನಿಗೆ ಚೂರಿ ಇರಿತ ► ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಪ್ರಕರಣಗಳು Read More »

ಕರಾವಳಿ

ಕಲ್ಲುಗುಡ್ಡೆ ಕಾಲೋನಿ ಸಮೀಪ ಮದ್ಯದಂಗಡಿ ತೆರವಿಗೆ ಆಕ್ಷೇಪ

(ನ್ಯೂಸ್ ಕಡಬ) newskadaba.com ಕಡಬ, ಜು.08. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಕಾಲೋನಿ ಸಮೀಪದಲ್ಲಿ ಆರಂಭಗೊಳ್ಳಲಿದೆ ಎನ್ನಲಾದ ಮದ್ಯದಂಗಡಿಗೆ ದಲಿತ ಮುಖಂಡೆ ಕಮಲ ಅಕ್ಷೇಪ ವ್ಯಕ್ತಪಡಿಸಿದ್ದು ವಿರೋಧದ ನಡುವೆ ಆರಂಭಗೊಂಡಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಅವರು ಶನಿವಾರ ಕಡಬದಲ್ಲಿ ನಡೆದ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿ, ಸುಪ್ರಿಂಕೋರ್ಟ್ ಆದೇಶದಿಂದ ನೆಲ್ಯಾಡಿ ಸಮೀಪದ ಉದನೆಯಲ್ಲಿ ಮುಚ್ಚಲ್ಪಟ್ಟ ಬಾರೊಂದು ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಕಾಲೋನಿಯ ಅನತಿ ದೂರದಲ್ಲಿ ಪ್ರಾರಂಭಗೊಳ್ಳಲಿರುವ ಬಗ್ಗೆ ಗುಮಾನಿ ಇದೆ. ಈ ನಿಟ್ಟಿನಲ್ಲಿ ನೂಜಿಬಾಳ್ತಿಲ ಪಂಚಾಯಿತಿಗೆ ಈಗಾಗಲೇ

ಕಲ್ಲುಗುಡ್ಡೆ ಕಾಲೋನಿ ಸಮೀಪ ಮದ್ಯದಂಗಡಿ ತೆರವಿಗೆ ಆಕ್ಷೇಪ Read More »

ಕರಾವಳಿ

ಶವಯಾತ್ರೆಯಲ್ಲಿನ ಕಲ್ಲುತೂರಾಟ ಪೂರ್ವಯೋಜಿತ ಕೃತ್ಯವೇ…? ► ಸಂಶಯಕ್ಕೆ ಕಾರಣವಾದ ವೀಡಿಯೋ ಇದೀಗ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ದುಷ್ಕರ್ಮಿಗಳಿಂದ ಕೊಲೆಯಾದ ಆರೆಸ್ಸೆಸ್ ಕಾರ್ಯಕರ್ತ ಶರತ್ ದೇವಾಡಿಗರ ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದ ಕೆಲವು ಕಿಡಿಗೇಡಿಗಳು ರಸ್ತೆಬದಿಯಲ್ಲಿನ ಕೆಲವು ಕಲ್ಲುಗಳನ್ನು ತೆಗೆದು ಕಾರಿನೊಳಗೆ ಶೇಖರಿಸುತ್ತಿರುವುದನ್ನು ಯಾರೋ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಸಂಶಯಕ್ಕೆ ಕಾರಣವಾಗಿದೆ. ಶವಯಾತ್ರೆಯಲ್ಲಿ ಕೈಕಂಬ ಹಾಗೂ ಬಿ.ಸಿ.ರೋಡಲ್ಲಿ ನಡೆದ ಕಲ್ಲು ತೂರಾಟ ಘಟನೆಯು ಹಿಂದೂ ಪರ ಸಂಘಟನೆಯ ಕೆಲವು ಗೂಂಡಾ ಪ್ರವೃತ್ತಿಯ ಕಾರ್ಯಕರ್ತರ ಪೂರ್ವಯೋಜಿತ ಕೃತ್ಯವಾಗಿರಬಹುದು ಎಂದು ಜಿಲ್ಲೆಯ ಶಾಂತಿಪ್ರಿಯ ಜನರಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಇದೀಗ ವೈರಲ್ ಆಗಿರುವ

ಶವಯಾತ್ರೆಯಲ್ಲಿನ ಕಲ್ಲುತೂರಾಟ ಪೂರ್ವಯೋಜಿತ ಕೃತ್ಯವೇ…? ► ಸಂಶಯಕ್ಕೆ ಕಾರಣವಾದ ವೀಡಿಯೋ ಇದೀಗ ವೈರಲ್ Read More »

ಕರಾವಳಿ

ಸಾಲ ಮರುಪಾವತಿಗೆ ಬ್ಯಾಂಕುಗಳು ರೈತರನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಜು.08. ರೈತರು ಬೆಳೆ ನಷ್ಟ ಅನುಭವಿಸಿದ ಸಂದರ್ಭದಲ್ಲಿ ಬ್ಯಾಂಕ್‌ಗಳು ಅಥವಾ ಇನ್ನಿತರ ಯಾವುದೇ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿ ಮಾಡುವಂತೆ ಬಲವಂತಪಡಿಸಬಾರದು. ಇಂಥಹ ಸಂದರ್ಭದಲ್ಲಿ ಸರ್ಕಾರಗಳು ರೈತರ ನೆರವಿಗೆ ಧಾವಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅಲ್ಲದೆ, ರೈತರ ಆತ್ಮಹತ್ಯೆಗಳನ್ನು ತಡೆಯುವುದು ಸರ್ಕಾರದ ಜವಾಬ್ದಾರಿಯಾಗಬೇಕೇ ಹೊರತು ಪರಿಹಾರ ಹಂಚಿಕೆ ಮಾಡುವುದಲ್ಲ ಎಂದು ಕೇಂದ್ರಕ್ಕೆ ಸುಪ್ರೀಂ ಚಾಟಿ ಬೀಸಿದೆ. ಈ ಬಗ್ಗೆ ತಮಿಳುನಾಡು ರೈತರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ

ಸಾಲ ಮರುಪಾವತಿಗೆ ಬ್ಯಾಂಕುಗಳು ರೈತರನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇವತ್ತು ಕೊನೆಯ ದಿನ ► ಮಂಗಳೂರು ಮುಸ್ಲಿಮ್ಸ್ ಪೇಜ್‍ನಿಂದ ಬಹಿರಂಗ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. “ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇಂದು ಕೊನೆಯ ದಿನ” ಎಂದು ಮಂಗಳೂರು ಮುಸ್ಲಿಮ್ ಹೆಸರಿನಲ್ಲಿರುವ ಫೇಸ್‍ಬುಕ್ ಪೇಜ್ ನಲ್ಲಿ ಉದ್ರೇಕಕಾರಿ ಸ್ಟೇಟಸ್ ಅಪ್‍ಡೇಟ್ ಮಾಡಲಾಗಿದೆ. ಭಯೋತ್ಪಾದಕ ಕಲ್ಲಡ್ಕ ಪ್ರಭಾಕರ ಭಟ್ಟ ಸತ್ತರೆ ಅವನಿಗೆ ರಾಷ್ಟ್ರ ಧ್ವಜ ಹಾಕಿ ಗೌರವಿಸುತ್ತಿರೋ ಇಲ್ಲಾ ಕೇಸರಿ ಧ್ವಜ ಹಾಕುತ್ತಿರೋ? ಇವತ್ತು ಅವನ ಕೊನೆಯ ದಿನ.. ತೀರ್ಮಾನಿಸಿ ಎಂದು ಈ ಎಫ್‍ಬಿ ಪೇಜ್‍ನಲ್ಲಿ ಸ್ಟೇಟಸ್ ಹಾಕಲಾಗಿದೆ. ಈ ಪೇಜ್ ನಲ್ಲಿ ರಾಜ್ಯಸರ್ಕಾರ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದ್ದು,

ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇವತ್ತು ಕೊನೆಯ ದಿನ ► ಮಂಗಳೂರು ಮುಸ್ಲಿಮ್ಸ್ ಪೇಜ್‍ನಿಂದ ಬಹಿರಂಗ ಬೆದರಿಕೆ Read More »

ಕರಾವಳಿ

ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ವಿಧಿವಶ ► ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶರತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. ಇತ್ತೀಚೆಗೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ನಗರದ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ  ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಜುಲೈ 4 ರಂದು ರಾತ್ರಿ ಶರತ್ ಬಿ.ಸಿ.ರೋಡ್‌ನ ತನ್ನ ತಂದೆಯ ಲಾಂಡ್ರಿಯಲ್ಲಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳ ತಂಡವೊಂದು ಅಂಗಡಿಗೆ ನುಗ್ಗಿ ಶರತ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಮಂಗಳೂರಿಗೆ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ವಿಧಿವಶ ► ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶರತ್ Read More »

ಕರಾವಳಿ

ಅಡ್ಯಾರ್ ಪದವು: ಸಹಾಯ ಕೇಳುವ ನೆಪದಲ್ಲಿ ಚೂರಿ ಇರಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.7. ಪೆಟ್ರೋಲ್ ಕೇಳುವ ನೆಪದಲ್ಲಿ ದುಷ್ಕರ್ಮಿಗಳ ತಂಡವೊಂದು ವಿದ್ಯಾರ್ಥಿಗಳಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಅಡ್ಯಾರ್ ಪದವಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮಂಗಳೂರಿನ ಖಾಸಗಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಕೇರಳದ ಮಲಪ್ಪುರಂ ನಿವಾಸಿ ಸಾಜಿದ್ (23) ಹಾಗೂ ಆತನ ಸ್ನೇಹಿತ ನೌಫಲ್ ನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಅಡ್ಯಾರ್ ಪದವಿನಲ್ಲಿ ಬೈಕ್ ನಲ್ಲಿದ್ದ ಮೂವರ ತಂಡ “ಪೆಟ್ರೋಲ್ ಖಾಲಿಯಾಗಿದ್ದು, ಪೆಟ್ರೋಲ್ ಇದ್ದರೆ ನೀಡಿ” ಎಂದು

ಅಡ್ಯಾರ್ ಪದವು: ಸಹಾಯ ಕೇಳುವ ನೆಪದಲ್ಲಿ ಚೂರಿ ಇರಿತ Read More »

ಕರಾವಳಿ

ಬಿ.ಸಿ.ರೋಡ್: ನಿಷೇಧಾಜ್ಞೆ ನಡುವೆ ಪ್ರತಿಭಟನೆ ► ಸಂಸದರು, ಶಾಸಕರು ಸೇರಿದಂತೆ ಸಂಘಟನೆಯ ಮುಖಂಡರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.7. ಆರೆಸ್ಸೆಸ್ ಕಾರ್ಯಕರ್ತ ಶರತ್ ಮೇಲಿನ ಹಲ್ಲೆಯನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ‘ಬಿ.ಸಿ.ರೋಡ್ ಚಲೋ’ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಶಾಸಕ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಸೇರಿದಂತೆ ಹಲವು ಸಂಘ ಪರಿವಾರದ ಮುಖಂಡರನ್ನು ಪೊಲೀಸರು ಬಂಧಿಸಿದರು. ಇಂದು ಪ್ರತಿಭಟನೆ ನಡೆಯುವ ಮುನ್ಸೂಚನೆ ಇದ್ದ ಕಾರಣ ಬಿ.ಸಿ.ರೋಡಿನಲ್ಲಿ ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.

ಬಿ.ಸಿ.ರೋಡ್: ನಿಷೇಧಾಜ್ಞೆ ನಡುವೆ ಪ್ರತಿಭಟನೆ ► ಸಂಸದರು, ಶಾಸಕರು ಸೇರಿದಂತೆ ಸಂಘಟನೆಯ ಮುಖಂಡರ ಬಂಧನ Read More »

ಕರಾವಳಿ
Scroll to Top