ನ್ಯೂಸ್ ಕಡಬ

ಶಾಸಕರ ಹಗ್ಗ-ಜಗ್ಗಾಟಕ್ಕೆ ತೆರೆ – ಬಳ್ಳಾರಿಗೆ ನೂತನ ಜಿಲ್ಲಾಧಿಕಾರಿ ಆಯ್ಕೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜು. 24. ಕೆಲ ದಿನಗಳಿಂದ ಬಳ್ಳಾರಿಯ ಜಿಲ್ಲಾಧಿಕಾರಿ ಆಯ್ಕೆ ವಿಚಾರವಾಗಿ ಗೊಂದಲ ಉಂಟಾಗಿದ್ದು ಇದೀಗ ನೂತನ ಡಿ.ಸಿ ಆಗಿ ಪ್ರಶಾಂತ್ ಕುಮಾರ್ ಮಿಶ್ರ ನೇಮಕಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಶಾಂತ್ ಕುಮಾರ್ ಮಿಶ್ರ 2014ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದು ಈ ಹಿಂದೆ ಕೆಎಸ್‌ಆರ್ಟಿಸಿ ನಿರ್ದೇಶಕರಾಗಿದ್ದರು ಎನ್ನಲಾಗಿದೆ. ಅವರು ಇಂದಿನಿಂದ ಬಳ್ಳಾರಿ ನೂತನ ಡಿಸಿಯಾಗಿ ನೇಮಕವಾಗಿದ್ದು ಅಧಿಕಾರ ಸ್ವೀಕರಿಸಿದ್ದಾರೆ. ಇದಕ್ಕೂ ಮೊದಲು ಪವನ್ ಕುಮಾರ್ ಮಾಲಪಾಟಿ ಬಳ್ಳಾರಿ ಜಿಲ್ಲಾಧಿಕಾರಿಯಾಗಿದ್ದರು. ಪವನ್ ಕುಮಾರ್ ವರ್ಗಾವಣೆಯಾಗಿದ್ದು, […]

ಶಾಸಕರ ಹಗ್ಗ-ಜಗ್ಗಾಟಕ್ಕೆ ತೆರೆ – ಬಳ್ಳಾರಿಗೆ ನೂತನ ಜಿಲ್ಲಾಧಿಕಾರಿ ಆಯ್ಕೆ Read More »

ಕರ್ನಾಟಕ
Theft, crime, Robbery

ಎಟಿಎಂನಲ್ಲಿದ್ದ 15 ಲಕ್ಷ ರೂ. ಎಗರಿಸಿದ ಖರ್ತನಾಕ್ ಕಳ್ಳರು

(ನ್ಯೂಸ್ ಕಡಬ)newskadaba.com ಕೋಲಾರ, ಜು.24. ಎಟಿಎಂ ನಲ್ಲಿ ಹಣ ಕಳ್ಳತನವಾಗಿರುವುದು ಬಂಗಾರಪೇಟೆ ತಾಲ್ಲೂಕು ಹಂಚಾಳ ಗೇಟ್ ಕೆನರಾ ಬ್ಯಾಂಕ್ ನಲ್ಲಿ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗ್ಯಾಸ್ ಕಟ್ಟರ್ ಬಳಸಿಕೊಂಡು ಎಟಿಎಂನಲ್ಲಿದ್ದ ಹಣ ಕಳ್ಳತನ ಮಾಡಲಾಗಿದ್ದು, ಕೆನರಾ ಬ್ಯಾಂಕ್ ನಲ್ಲಿದ್ದ ಸುಮಾರು 15 ಲಕ್ಷ ರೂಪಾಯಿ ಕಳ್ಳತನವಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ರಮೇಶ್ ಹಾಗೂ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಕಂಡು ಬಂದಿದೆ.

ಎಟಿಎಂನಲ್ಲಿದ್ದ 15 ಲಕ್ಷ ರೂ. ಎಗರಿಸಿದ ಖರ್ತನಾಕ್ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ

(ನ್ಯೂಸ್ ಕಡಬ)newskadaba.com ಕಡಬ, ಜು.24. ದಲಿತ ವರ್ಗದವರು ಶಿಕ್ಷಣದಿಂದ ವಂಚಿತರಾಗಬಾರದು, ಉತ್ತಮ ವಿದ್ಯಾಭ್ಯಾಸ ಪಡೆದು ಸರಕಾರಿ ಉದ್ಯೋಗಳಿಗಾಗಿ ಪ್ರಯತ್ನ ಪಡಬೇಕು ಎಂದು ಕಡಬ ಠಾಣಾ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಹೇಳಿದರು ಎನ್ನಲಾಗಿದೆ. ಕಡಬ ಠಾಣೆಯಲ್ಲಿ ನಡೆದ ದಲಿತ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಇಂದಿನ ದಿನಗಳಲ್ಲಿ ದಲಿತರು ಸೇರಿದಂತೆ ಎಲ್ಲ ವರ್ಗದ ಯುವಕರು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಈ ಕುರಿತು ಮುಖಂಡರು ಗಮನ ಹರಿಸಿ ಇದರಿಂದ ಮುಕ್ತಿಗೊಳಿಸಲು ಪ್ರಯತ್ನಿಸ ಬೇಕು, ಅಲ್ಲದೆ ಉತ್ತಮ

ಕಡಬ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ Read More »

ಕರಾವಳಿ

ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಪಾಕ್‌ ಮಹಿಳೆ ಸೀಮಾ ಹೈದರ್

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22. ಪಾಕಿಸ್ತಾನದಿಂದ ಭಾರತಕ್ಕೆ ಓಡಿ ಬಂದಿರುವ ಸೀಮಾ ಹೈದರ್ ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಮನವಿ ಪತ್ರದಲ್ಲಿ ಹೀರ್-ರಾಂಜಾ, ಲೈಲಾ-ಮಜ್ನು ಪ್ರೇಮಕಥೆಯನ್ನು ಸೀಮಾ ಪ್ರಸ್ತಾಪಿಸಿದ್ದಾರೆ. ‘ಸಚಿನ್ ಪ್ರೀತಿ ಪಡೆಯಲು ಭಾರತಕ್ಕೆ ಬಂದಿದ್ದು ಇಲ್ಲೇ ಇರಲು ಬಯಸುತ್ತೇನೆ. ತಾರೆಯರಾದ ಆಲಿಯಾ ಭಟ್, ಅಕ್ಷಯ್ ಕುಮಾರ್ ಅವರು ವಿದೇಶಿ ಪೌರತ್ವ ಹೊಂದಿದ್ದರೂ ಭಾರತದಲ್ಲಿ ವಾಸಿಸಲು ಸಾಧ್ಯವಾದರೆ ನಾನೇಕೆ ಇಲ್ಲಿ ಇರಬಾರದು ?’ ಎಂದು ಅವರು ಮನವಿಯಲ್ಲಿ ಪ್ರಶ್ನಿಸಿದ್ದಾರೆ. ಭಾರತಕ್ಕೆ ಅಕ್ರಮವಾಗಿ

ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಪಾಕ್‌ ಮಹಿಳೆ ಸೀಮಾ ಹೈದರ್ Read More »

ರಾಷ್ಟ್ರೀಯ ನ್ಯೂಸ್

ಭಾರೀ ಮಳೆಗೆ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ- ವಾಹನ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 22. ಭಾರೀ ಮಳೆಗೆ ಮರವೊಂದು ಹೆದ್ದಾರಿಗೆ ಅಡ್ಡಲಾಗಿ ಬಿದ್ದು, ಸಂಚಾರಕ್ಕೆ ತೊಡಕುಂಟಾದ ಘಟನೆ ನೇರಳಕಟ್ಟೆ ಎಂಬಲ್ಲಿ ಶನಿವಾರದಂದು ಬೆಳಗ್ಗೆ ನಡೆದಿದೆ. ಮರದ ಜೊತೆಗೆ ವಿದ್ಯುತ್ ಕಂಬಗಳು ಬಿದ್ದಿದ್ದು, ವಿದ್ಯುತ್ ತಂತಿಗಳು ನೆಲದ ಮೇಲೆ ಹರಿದಾಡಿತ್ತು. ಘಟನೆಯಿಂದಾಗಿ ಮಾಣಿ-ಮೈಸೂರು ಹೆದ್ದಾರಿ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು, ಸುಮಾರು ಒಂದು ತಾಸುಗಿಂತಲೂ ಹೆಚ್ಚು ಕಾಲ ವಾಹನ ಸವಾರರು ಪರದಾಡುವಂತಾಯಿತು. ಎರಡೂ ಬದಿಯ ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿವೆ. ಸ್ಥಳೀಯರು ಮರ ತೆರವು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಭಾರೀ ಮಳೆಗೆ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ- ವಾಹನ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ಬೆಂಗಳೂರು ಅಲ್ಲ ಇಡೀ ಕರ್ನಾಟಕವೇ ಟಾರ್ಗೆಟ್ – ಶಂಕಿತ ಉಗ್ರರಿಂದ ಸ್ಪೋಟಕ ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಬಂಧಿತ ಶಂಕಿತ ಉಗ್ರರ ಕೃತ್ಯಗಳ ಪ್ಲಾನ್‍ಗಳು ಬಗೆದಷ್ಟೂ ಬಯಲಾಗುತ್ತಿದ್ದು, ಶಂಕಿತ ಉಗ್ರರ ಟಾರ್ಗೆಟ್ ಬೆಂಗಳೂರು ಮಾತ್ರ ಅಲ್ಲ, ಇಡೀ ಕರ್ನಾಟಕದಲ್ಲೇ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಕೋಮುಗಲಭೆ ಸೃಷ್ಟಿಸಿ ನರಮೇಧಕ್ಕೆ ಷಡ್ಯಂತ್ರ ರೂಪಿಸಿರುವುದು ಎಂಬಂತಹ ಒಂದೊಂದೇ ಸ್ಫೋಟಕ ಸತ್ಯಗಳು ಕೇಂದ್ರ ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸಿದ ವೇಳೆ ಹೊರ ಬರುತ್ತಿರುವುದಾಗಿ ತಿಳಿದು ಬಂದಿದೆ. ಶಂಕಿತ ಉಗ್ರರು ರಾಜ್ಯಾದ್ಯಂತ ರಕ್ತಪಾತ, ನರಮೇಧ, ಪೈಶಾಚಿಕ ಕೃತ್ಯಕ್ಕೆ

ಬೆಂಗಳೂರು ಅಲ್ಲ ಇಡೀ ಕರ್ನಾಟಕವೇ ಟಾರ್ಗೆಟ್ – ಶಂಕಿತ ಉಗ್ರರಿಂದ ಸ್ಪೋಟಕ ಹೇಳಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಅಮೆರಿಕ, ಜು.21. ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಯುನೈಟೆಡ್ ಸ್ಟೇಟ್ಸ್‌ನ ನೆವಾಡಾದಲ್ಲಿ ನಡೆದಿದೆ. ವುಡ್ರೋ ಟರ್ನರ್ ಬಂಡಿ ಮೃತ ಬಾಲಕ ಎಂದು ಗುರುತಿಸಲಾಗಿದೆ. ನೆವಾಡಾದಲ್ಲಿ ಎರಡು ವರ್ಷದ ಬಾಲಕ ಅಪರೂಪದ ಸೋಂಕಿನಿಂದ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ. ಬಾಲಕನ ಆರೋಗ್ಯದಲ್ಲಿ ಆಗಿರುವ ಏರುಪೇರು ಗಮನಕ್ಕೆ ಬಂದು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರಿಗೆ ರೋಗದ ಲಕ್ಷಣದ ಬಗ್ಗೆ ತಿಳಿದಿದೆ. ಎರಡು ವರ್ಷದ ಮಗುವಿಗೆ ಚಿಕಿತ್ಸೆಯನ್ನು ನೀಡಲು ನಿರಾಕರಿಸಿದ್ದಾರೆ. ಏಕೆಂದರೆ,

ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಾದಕ ವಸ್ತು ಮತ್ತು MDMA ಮಾರಾಟ ➤ ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಮಾದಕ ವಸ್ತು ಮತ್ತು MDMA ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಎರಡು ಕಾರಿನಲ್ಲಿ ಬಂದು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೊಹಮ್ಮದ್ ನಿಯಾಜ್ (28), ನಿಶಾದ್ (28), ಮೊಹಮ್ಮದ್ ರಝೀನ್ (24) ಎಂಬ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮಾದಕ ವಸ್ತು ಮತ್ತು MDMA ಮಾರಾಟ ➤ ಆರೋಪಿಗಳು ಪೊಲೀಸ್ ವಶಕ್ಕೆ Read More »

ಕರಾವಳಿ

ಗೃಹಲಕ್ಷ್ಮೀ ಯೋಜನೆ – ಡಿಸಿಯವರಿಂದ ನೋಂದಣಿ ಪ್ರಕ್ರಿಯೆ ವೀಕ್ಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಯೋಜನೆಯಡಿ ನೋಂದಣಿಗಾಗಿ 9 ಕೇಂದ್ರಗಳನ್ನು ತೆರೆಯಲಾಗಿದೆ. ಅಲ್ಲದೇ 3 ವಲಯ ಕಚೇರಿಗಳಲ್ಲಿ 6 ಕೇಂದ್ರಗಳು ಆರಂಭವಾಗಿವೆ. ಈ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಜು.20ರಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿದ್ದರು ಎನ್ನಲಾಗಿದೆ.

ಗೃಹಲಕ್ಷ್ಮೀ ಯೋಜನೆ – ಡಿಸಿಯವರಿಂದ ನೋಂದಣಿ ಪ್ರಕ್ರಿಯೆ ವೀಕ್ಷಣೆ..! Read More »

ಕರಾವಳಿ

ಮಾರಕಾಸ್ತ್ರದಿಂದ ಹೊಡೆದು ಯುವಕ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜು.21. ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ಓರ್ವನಿಗೆ ಬರ್ಬರವಾಗಿ ಕೊಲೆ ಮಾಡಲಾಗಿದೆ‌. ಮುಜಾಯಿದ್ದೀನ್(32) ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಮಾರಕಾಯುಧದಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಮುಜಾಯಿದ್ದೀನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಾರಕಾಸ್ತ್ರದಿಂದ ಹೊಡೆದು ಯುವಕ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top