ನ್ಯೂಸ್ ಕಡಬ

ಕರಾವಳಿಯಲ್ಲಿ ಕಡಿಮೆಯಾದ ಮಳೆಯ ಪ್ರಮಾಣ – ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ನಾಳೆ (ಜುಲೈ 08) ಶನಿವಾರ ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿರಲಿವೆ. ಭಾರೀ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಿದ್ಯಾರ್ಥಿಗಳು ಶಾಲೆಗೆ ತೆರಳಲು ತೊಂದರೆಯಾಗುತ್ತಿರುವುದನ್ನು ಗಮನಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಸ್ಥಿತಿಗೆ ಅನುಗುಣವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಶುಕ್ರವಾರ […]

ಕರಾವಳಿಯಲ್ಲಿ ಕಡಿಮೆಯಾದ ಮಳೆಯ ಪ್ರಮಾಣ – ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ Read More »

ಕರಾವಳಿ

ವಿಧಾನಸಭೆಯಲ್ಲೂ ತುಳು ವಿನಲ್ಲೇ ‘ಆಯಡ ಪನ್ಲೆ’ ಎಂದ ಸ್ಪೀಕರ್ ಯು.ಟಿ.ಖಾದರ್ – ತುಳುವರು ಎಲ್ಲಿ ಹೋದರೂ ಮಾತೃಭಾಷೆ ಬಿಡಲ್ಲ ಎಂದ ನೆಟ್ಟಿಗರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.07. ತುಳುವರು ಎಲ್ಲಿ ಹೋದರೂ, ಯಾವುದೇ ಸ್ಥಾನಕ್ಕೆ ತಲುಪಿದರೂ ತಮ್ಮ ಮಾತೃಭಾಷೆ ತುಳುವನ್ನು ಮಾತನಾಡದೆ ಇರಲ್ಲ ಎನ್ನುವುದಕ್ಕೆ ವಿಧಾನಸಭೆ ಕೂಡಾ ಸಾಕ್ಷಿಯಾಗಿದೆ. ವಿಧಾನಸಭೆಯಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಆರೋಪ ಪ್ರತ್ಯಾರೋಪವನ್ನು ನಿಯಂತ್ರಿಸುವ ಸಲುವಾಗಿ ಸಭಾಧ್ಯಕ್ಷ ಯು.ಟಿ. ಖಾದರ್, ಎದ್ದು ನಿಂತಿದ್ದ ಶಾಸಕರನ್ನು ಕುಳಿತುಕೊಳ್ಳುವಂತೆ ಸೂಚಿಸುವ ವೇಳೆ ತುಳುವಿನಲ್ಲಿ ಹೇಳಿ ತುಳುವರು ಎಂದೂ ಮಾತೃಭಾಷೆಯನ್ನು ಬಿಟ್ಟುಕೊಡಲ್ಲ ಎಂಬುವುದನ್ನು ಸಾಬೀತುಪಡಿಸಿದರು. ನೀವು ಕುಳಿತುಕೊಳ್ಳಿ, ನೀವು ಕುಳಿತುಕೊಳ್ಳಿ ಎಂದು ಹೇಳುತ್ತಿದ್ದ ಸ್ಪೀಕರ್ ಯು.ಟಿ.ಖಾದರ್ ಮಧ್ಯದಲ್ಲಿ

ವಿಧಾನಸಭೆಯಲ್ಲೂ ತುಳು ವಿನಲ್ಲೇ ‘ಆಯಡ ಪನ್ಲೆ’ ಎಂದ ಸ್ಪೀಕರ್ ಯು.ಟಿ.ಖಾದರ್ – ತುಳುವರು ಎಲ್ಲಿ ಹೋದರೂ ಮಾತೃಭಾಷೆ ಬಿಡಲ್ಲ ಎಂದ ನೆಟ್ಟಿಗರು Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಭಾರೀ ಗಾಳಿ – ಮಳೆಯಾಗುತ್ತಿರುವ ಹಿನ್ನೆಲೆ | ತುರ್ತು ಕ್ರಮಗಳಿಗಾಗಿ ಈ ಕ್ರಮಗಳನ್ನು ಅನುಸರಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ಕಳೆದೆರಡು ದಿನಗಳಿಂದ ಕರಾವಳಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಹಲವು ತೊಂದರೆಗಳನ್ನು ಅನುಭವಿಸುವಂತಾಗಿದೆ. ಮಳೆ ಹಾನಿ ಹಾಗೂ ತೊಂದರೆಗಳು ಉಂಟಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ತುರ್ತು ಕ್ರಮಗಳನ್ನು ಕೈಗೊಂಡಿದ್ದು, ಈ ಕೆಳಗಿನಂತಿವೆ. ಗ್ರಾಮೀಣ ಅಥವಾ ದೂರ ಪ್ರದೇಶಗಳಿಂದ ತೆರಳುವ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಹಾಜರಾಗಲು ಅನಾನುಕೂಲವಾಗುವ ಸಂದರ್ಭಗಳಲ್ಲಿ ಆನ್‍ಲೈನ್ ಮೂಲಕ ತರಗತಿಗಳನ್ನು ನಡೆಸಲು ಸಂಬಂಧಿಸಿದ ವಿದ್ಯಾಸಂಸ್ಥೆಗಳು ಅವಕಾಶ

ಕರಾವಳಿಯಲ್ಲಿ ಭಾರೀ ಗಾಳಿ – ಮಳೆಯಾಗುತ್ತಿರುವ ಹಿನ್ನೆಲೆ | ತುರ್ತು ಕ್ರಮಗಳಿಗಾಗಿ ಈ ಕ್ರಮಗಳನ್ನು ಅನುಸರಿಸಿ Read More »

ಕರ್ನಾಟಕ

ನಾಳೆ (ಜುಲೈ 07) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆಯೂ ವ್ಯಾಪಕ ಮಳೆಯಾಗುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 7 ಶುಕ್ರವಾರದಂದು ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಮುಲ್ಲೈ

ನಾಳೆ (ಜುಲೈ 07) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಸೀನಿಯರ್ ಛೇಂಬರ್ ಕಡಬ ಲೀಜನ್ ವತಿಯಿಂದ ವನ ಮಹೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜು.05. ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಕಡಬ ಲೀಜನ್ ವತಿಯಿಂದ ಕಡಬ ಮಿನಿ ವಿಧಾನಸೌಧದ ವಠಾರದಲ್ಲಿ ಬುಧವಾರದಂದು ವನ ಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಡಬ ತಹಶೀಲ್ದಾರ್ ರಮೇಶ್ ಬಾಬು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಿನಿ ವಿಧಾನ ಸೌಧದ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸೀನಿಯರ್ ಛೇಂಬರ್ ಕಡಬ ಲೀಜನ್ ಅಧ್ಯಕ್ಷರಾದ ಪಿ.ವಿಲ್ಸನ್, ಕಾರ್ಯದರ್ಶಿ ಪಿ.ಕೆ.ಚೆರಿಯನ್, ಕೋಶಾಧಿಕಾರಿ ಯೋಹನ್ನಾನ್, ಪೂರ್ವಾಧ್ಯಕ್ಷರಾದ ಟೈಟಸ್ ವರ್ಗೀಸ್, ಇ.ಸಿ.ಚೆರಿಯನ್ ಮೊದಲಾದವರು ಉಪಸ್ಥಿತರಿದ್ದರು.

ಸೀನಿಯರ್ ಛೇಂಬರ್ ಕಡಬ ಲೀಜನ್ ವತಿಯಿಂದ ವನ ಮಹೋತ್ಸವ Read More »

ಕರಾವಳಿ

ಪರಿಹಾರ ನೀಡದ ಕಾರಣ ಗ್ರಾಮ ಸಭೆ ನಡೆಸದಂತೆ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 04. ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದು ಗ್ರಾಮಸ್ಥರು ಮನೆ ಕಳೆದುಕೊಂಡಿದ್ದು, ಪರಿಹಾರ ನೀಡದ ಇಲಾಖೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮ ಸಭೆ ನಡೆಸದಂತೆ ಪ್ರತಿಭಟನೆ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆ ಗುಡ್ಡ ಕುಸಿದು ಹನ್ನೊಂದು ಕುಟುಂಬ ಮನೆ ಕಳೆದುಕೊಂಡಿದ್ದರೂ ಇಲ್ಲಿಯವರೆಗೆ ಪರಿಹಾರ ಸಿಗಲಿಲ್ಲ. ಹಾಗಾಗಿ ಇಂದು ಗ್ರಾಮ ಸಭೆ ನಡೆಯದಂತೆ ಗ್ರಾಮದ ಜನತೆ ತಡೆದಿದ್ದಾರೆ, ಪರಿಹಾರ ಒದಗಿಸುವ ದಿನಾಂಕ ಮತ್ತು ಸಭೆ ಎಲ್ಲಾ

ಪರಿಹಾರ ನೀಡದ ಕಾರಣ ಗ್ರಾಮ ಸಭೆ ನಡೆಸದಂತೆ ಪ್ರತಿಭಟನೆ Read More »

ಕರ್ನಾಟಕ

‘ಭಯೋತ್ಪಾದನೆ ವಿಚಾರದಲ್ಲಿ ದ್ವಂದ್ವ ನೀತಿ ಇರಬಾರದು’ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ)newskadaba.com ನವದೆಹಲಿ, ಜು. 04. ಭಯೋತ್ಪಾದನೆ ವಿಚಾರದಲ್ಲಿ ಯಾವುದೇ ದ್ವಂದ್ವ ನೀತಿ ಇರಬಾರದು. ಭಾರತೀಯರಿಗೆ ರಾಷ್ಟ್ರಗಳು ಕೇವಲ ನೆರೆಹೊರೆಯವರಲ್ಲ, ಅದು ಕುಟುಂಬವಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಪಾಕಿಸ್ತಾನದ ಶೆಹಬಾಜ್ ಷರೀಫ್, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಸಮ್ಮುಖದಲ್ಲಿ ನಡೆದ ಎಸ್‌ಸಿಒ ನಾಯಕರ ಸಭೆಯಲ್ಲಿ ಮಾತನಾಡಿದ ಅವರು, ಕೆಲವು ದೇಶಗಳು ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದು ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಾಧನವಾಗಿ ಬಳಸುತ್ತಿದೆ ಎಂದಿದ್ದಾರೆ.ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ದೇಶಗಳನ್ನು ಟೀಕಿಸಲು ಎಸ್‌ಸಿಒ

‘ಭಯೋತ್ಪಾದನೆ ವಿಚಾರದಲ್ಲಿ ದ್ವಂದ್ವ ನೀತಿ ಇರಬಾರದು’ ➤ ಪ್ರಧಾನಿ ನರೇಂದ್ರ ಮೋದಿ Read More »

ರಾಷ್ಟ್ರೀಯ ನ್ಯೂಸ್

ನಟ ಶಾರುಖ್‌ ಖಾನ್‌ಗೆ ಶೂಟಿಂಗ್‌ ವೇಳೆ ಅನಾಹುತ

(ನ್ಯೂಸ್ ಕಡಬ)newskadaba.com ಮುಂಬೈ, ಜು. 04. ನಟ ಶಾರುಖ್‌ ಖಾನ್‌ ರವರಿಗೆ ಶೂಟಿಂಗ್‌ ವೇಳೆ ಪೆಟ್ಟು ಬಿದ್ದಿರುವ ಘಟನೆ ನಡೆದಿದೆ. ಲಾಸ್ ಏಂಜಲೀಸ್‌ನಲ್ಲಿ ಬಹಿರಂಗವಾಗದಿರುವ ಪ್ರಾಜೆಕ್ಟ್‌ ವೊಂದರ ಶೂಟಿಂಗ್‌ ನಲ್ಲಿರುವಾಗ ನಟ ಶಾರುಖ್‌ ಖಾನ್‌ ಅವರ ಮೂಗಿಗೆ ಪೆಟ್ಟು ಬಿದ್ದಿದೆ, ತಕ್ಷಣ ಚಿತ್ರತಂಡದವರು ಅವರನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ರಕ್ತ ನಿಲ್ಲಲು ಶಸ್ತ್ರಚಿಕಿತ್ಸೆಯನ್ನು ಮಾಡಿ, ಯಾವುದೇ ಹೆದರುವ ಅವಶ್ಯಕತೆಯಿಲ್ಲ ಎಂದು ಬ್ಯಾಂಡೇಜ್‌ ಹಾಕಿ ಕಳುಹಿಸಿದ್ದಾರೆ.ಸದ್ಯ ಇವರು ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಟ ಶಾರುಖ್‌ ಖಾನ್‌ಗೆ ಶೂಟಿಂಗ್‌ ವೇಳೆ ಅನಾಹುತ Read More »

ರಾಷ್ಟ್ರೀಯ ನ್ಯೂಸ್

‘ಸಿಎಂ ಕಚೇರಿಯಲ್ಲಿ ಯಾವ ದಂಧೆಯೂ ಇಲ್ಲ’ ➤ ಡಿಕೆಶಿ ತಿರುಗೇಟು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು. 4. ಕಾಂಗ್ರೆಸ್ ಸರ್ಕಾರದ ವಿರುದ್ದ ಹೆಚ್‌ ಡಿ ಕುಮಾರಸ್ವಾಮಿ ಭ್ರಷ್ಟಾಚಾರದ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಕೆಶಿ , ಕುಮಾರಸ್ವಾಮಿಯವರು ಚುನಾವಣೆಯಲ್ಲಿ ಕಡಿಮೆ ಸ್ಥಾನ ಬಂದಿದೆ ಎಂಬ ಬೇಸರದಲ್ಲಿ ಈ ರೀತಿ ಮಾತನಾಡುತ್ತಿದ್ದಾರೆ, ಅವರ ಮಾತುಗಳನ್ನು ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.ಸರ್ಕಾರದ ಯಾವುದೇ ಕಚೇರಿಯಲ್ಲಿ ಪಿಂಚಣಿ ಪಡೆದು ಕೆಲಸ ನೀಡಲಾಗುತ್ತಿಲ್ಲ, ಸಿಎಂ ಕಛೇರಿಯಲ್ಲಿ ಯಾವ ಧಂದೆಯೂ ನಡೆಯುತ್ತಿಲ್ಲ, ಅವರ ಬಳಿ

‘ಸಿಎಂ ಕಚೇರಿಯಲ್ಲಿ ಯಾವ ದಂಧೆಯೂ ಇಲ್ಲ’ ➤ ಡಿಕೆಶಿ ತಿರುಗೇಟು Read More »

ಕರ್ನಾಟಕ

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ➤ ‘ಮೋಸ ನಿಲ್ಲಿಸಿ – ಗ್ಯಾರಂಟಿ ಜಾರಿಗೊಳಿಸಿ’

  (ನ್ಯೂಸ್ ಕಡಬ)newskadaba.com ಬೆಂಗಳೂರು, ಜು. 4. ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗಿದ್ದು, ಸದನದ ಸರ್ಕಾರದಲ್ಲಿ ಐದು ಗ್ಯಾರಂಟಿ ಘೋಷಣೆಗಳ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಧರಣಿ ನಡೆಸಲಿದೆ. ‘ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ’ ಶೀರ್ಷಿಕೆಯಡಿಯಲ್ಲಿ, ವಿಧಾನಸಭೆಯಲ್ಲಿ ಒಳಗೆ ಮಾಜಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ಮೂಲಕ ಒತ್ತಡ ತಂತ್ರಕ್ಕೆ ಮುಂದಾಗಿದ್ದಾರೆ, ಪರಿಷತ್ ನಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.ಇನ್ನು ಸದನದ ಹೊರಗೆ ಫ್ರೀಡಂಪಾರ್ಕ್​ನಲ್ಲಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ,

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ➤ ‘ಮೋಸ ನಿಲ್ಲಿಸಿ – ಗ್ಯಾರಂಟಿ ಜಾರಿಗೊಳಿಸಿ’ Read More »

ಕರ್ನಾಟಕ
Scroll to Top