ನ್ಯೂಸ್ ಕಡಬ

ಬಸ್ ನಿಲ್ಲಿಸದ ಕಾರಣ ಕೋಪದಿಂದ ಕಲ್ಲು ಎಸೆದ ಮಹಿಳೆ ➤ 5000 ರೂ. ದಂಡ

(ನ್ಯೂಸ್ ಕಡಬ) newskadaba.com ಕೊಪ್ಪಳ, ಜೂ. 26. ಮಹಿಳೆಯೊಬ್ಬರು ಬಸ್ ನಿಲ್ಲಿಸದ ಕಾರಣ ಸಿಟ್ಟಿಗೆದ್ದು ಸರ್ಕಾರಿ ಬಸ್ ಗೆ ಕಲ್ಲು ಎಸೆದ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿ ನಡೆದಿದೆ. ಇಳಕಲ್ ಬಳಿಯ ಪಾಪನಳ್ಳಿ ನಿವಾಸಿ ಲಕ್ಷ್ಮಿ ಎಂಬವರು ಹುಲಿಗಿಯ ಹುಲಿಗೆಮ್ಮ ದೇವಿ ದರ್ಶನ ಪಡೆಯಲು ಹೊಗಿದ್ದ ವೇಳೆ ಹುಲಿಗೆ ಕ್ರಾಸ್ ಬಳಿ ತುಂಬಾ ಹೊತ್ತಿನಿಂದ ಕಾದರೂ ಯಾವುದೇ ಬಸ್ ನಿಲ್ಲಿಸಿರಲಿಲ್ಲ. ಇದರಿಂದ ಕೋಪಗೊಂಡ ಅವರು ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗದ ಕೊಪ್ಪಳದಿಂದ-ಹೊಸಪೇಟೆಗೆ ಹೋಗುವ  ಬಸ್ ಗೆ […]

ಬಸ್ ನಿಲ್ಲಿಸದ ಕಾರಣ ಕೋಪದಿಂದ ಕಲ್ಲು ಎಸೆದ ಮಹಿಳೆ ➤ 5000 ರೂ. ದಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್

“ನನ್ನ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಪ್ರಧಾನಿಯನ್ನು ನೋಡಿಲ್ಲ”  ➤ ಸಿದ್ದರಾಮಯ್ಯ ವಾಗ್ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 26. ‘ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ನರೇಂದ್ರ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನೋಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ‘ನಾ ಖಾವೂಂಗ, ನಾ ಖಾನೆ ದೂಂಗ’ ಎಂದು ಹೇಳಿದ್ದರು. ಆದರೆ ಕರ್ನಾಟಕದಲ್ಲಿ 40 ಪರ್ಸೆಂಟ್ ಭ್ರಷ್ಟಾಚಾರ ರಾರಾಜಿಸಿತು. ಮೋದಿಯವರ ಆ ಮಾತು ಏನಾಯಿತು ಎಂದು ಪ್ರಶ್ನಿಸಿದ್ದಾರೆ. ಇನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ, ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ ಬಿಜೆಪಿ ವಿರುದ್ಧ ಹೋರಾಡಿ

“ನನ್ನ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಪ್ರಧಾನಿಯನ್ನು ನೋಡಿಲ್ಲ”  ➤ ಸಿದ್ದರಾಮಯ್ಯ ವಾಗ್ದಾಳಿ Read More »

ಕರಾವಳಿ, ಕರ್ನಾಟಕ

ನಮ್ಮ ಹೋರಾಟ ನ್ಯಾಯಾಲಯಕ್ಕೆ ಸ್ಥಳಾಂತರ ➤ ಪ್ರತಿಭಟನೆ ಹಿಂಪಡೆದ ಕುಸ್ತಿಪಟು

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 26. ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ಕಳೆದ ಐದು ತಿಂಗಳಿಂದ ಮಹಿಳಾ ಕುಸ್ತಿಪಟುಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದುಕೊಳ್ಳುವುದಾಗಿ ಕುಸ್ತಿಪಟುಗಳು ತಿಳಿಸಿದ್ದಾರೆ. ಇನ್ನುಮುಂದೆ ನಾವು ರಸ್ತೆಯಲ್ಲಿ ಪ್ರತಿಭಟನೆ ಮಾಡುವುದಿಲ್ಲ, ಪ್ರತಿಭಟನೆಯನ್ನು ನ್ಯಾಯಾಲಯಕ್ಕೆ ಸ್ಥಳಾಂತರಿಸಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ. ಸರಕಾರವು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರೋಪ ಸಲ್ಲಿಸುವ ಭರವಸೆಯನ್ನು ಈಡೇರಿಸಿದೆ ಎಂದು ವಿನೇಶ್ ಫೋಗಟ್, ಸಾಕ್ಷಿ ಮಲಿಕ್

ನಮ್ಮ ಹೋರಾಟ ನ್ಯಾಯಾಲಯಕ್ಕೆ ಸ್ಥಳಾಂತರ ➤ ಪ್ರತಿಭಟನೆ ಹಿಂಪಡೆದ ಕುಸ್ತಿಪಟು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತಿ-ಪತ್ನಿ ನಡುವೆ ಕಲಹ, ಹಲ್ಲೆ ➤ ಇಬ್ಬರು ಮಕ್ಕಳು ಮೃತ್ಯು

 (ನ್ಯೂಸ್ ಕಡಬ) newskadaba.com ಶ್ರೀರಂಗಪಟ್ಟಣ, ಜೂ. 22. ಹೆತ್ತ ತಂದೆಯೇ ತನ್ನಿಬ್ಬರ ಮಕ್ಕಳನ್ನು ಕೊಂದು ಹಾಕಿದ ಘಟನೆ ಶ್ರೀರಂಗಪಟ್ಟಣದ ಮರಲಗಾಲ ಗ್ರಾಮದ ಬಳಿಯ ಫಾರ್ಮ್ ಹೌಸ್​ನಲ್ಲಿ ನಡೆದಿದೆ. ಮೃತ ಮಕ್ಕಳನ್ನು ಆದರ್ಶ ಹಾಗೂ ಅಮೂಲ್ಯ ಎಂದು ಗುರುತಿಸಲಾಗಿದೆ ಪತಿ ಪತ್ನಿ ನಡುವೆ ಕಲಹವೇರ್ಪಟ್ಟು, ಪತಿ, ಪತ್ನಿ ಲಕ್ಷ್ಮಿಗೆ ಸುತ್ತಿಗೆಯಿಂದ ಹಲ್ಲೆ ಮಾಡಿದ್ದಾನೆ. ಏಟು ಬಿದ್ದ ತಕ್ಷಣ ಲಕ್ಷ್ಮೀ ಕೆಳಗೆ ಬಿದ್ದಿದ್ದು, ಬಳಿಕ ಮಕ್ಕಳಿಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪತ್ನಿ ಲಕ್ಷ್ಮೀಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ

ಪತಿ-ಪತ್ನಿ ನಡುವೆ ಕಲಹ, ಹಲ್ಲೆ ➤ ಇಬ್ಬರು ಮಕ್ಕಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯುತ್ ದರ ಏರಿಕೆ ವಿರೋಧಿಸಿ ಇಂದು ರಾಜ್ಯದ ಹಲವೆಡೆ ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.  22. ವಿದ್ಯುತ್ ದರ ಏರಿಕೆ ಖಂಡಿಸಿ KCCI ಯು ಕರ್ನಾಟಕ ಬಂದ್ ಗೆ ಇಂದು ಕರೆ ನೀಡಿದೆ. ಈ ಹಿನ್ನೆಲೆ ಇಂದು ರಾಜ್ಯಾದ್ಯಂತ ಕೈಗಾರಿಕೆಗಳು ಬಂದ್ ಇರಲಿದ್ದು, ಕೆಸಿಸಿ&ಐ ಹಾಗೂ ಇತರ ಎಲ್ಲಾ ಜಿಲ್ಲಾ ವಾಣಿಜ್ಯ ಮಂಡಳಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಹೀಗಾಗಿ ಎಲ್ಲಾ ವ್ಯಾಪಾರ ಹಾಗೂ ಕೈಗಾರಿಕೆಗಳನ್ನು ಇಂಡಸ್ಟ್ರಿಗಳು ಸ್ಥಗಿತಗೊಳಿಸಲಿವೆ. ಬಂದ್ ಗೆ 25ಕ್ಕೂ ಹೆಚ್ಚು ಜಿಲ್ಲಾ ಚೇಂಬರ್ ಗಳಿಂದ ಬೆಂಬಲ ದೊರಕಿದೆ. ದಕ್ಷಿಣ ಕರ್ನಾಟಕದ FKCCI

ವಿದ್ಯುತ್ ದರ ಏರಿಕೆ ವಿರೋಧಿಸಿ ಇಂದು ರಾಜ್ಯದ ಹಲವೆಡೆ ಬಂದ್ Read More »

ಕರ್ನಾಟಕ

ಲಿಂಗ ಬದಲಾಯಿಸಲು ನಿರ್ಧರಿಸಿದ ಮಾಜಿ ಸಿಎಂ ಪುತ್ರಿ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಜೂ. 22. ಲಿಂಗ ಬದಲಾವಣೆಗೆ ನಿರ್ಧರಿಸಿರುವ  ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಎಂಬವರು “ಟ್ರಾನ್ಸ್ ಮ್ಯಾನ್” ಆಗಿ ಬದಲಾಗಿರುವುದಾಗಿ ಘೋಷಿಸಿಕೊಂಡಿದ್ದಾರೆ. ಇತ್ತೀಚೆಗೆ LGBTQ ಸಮುದಾಯದ ಜೀವನೋಪಾಯದ ಕುರಿತಂತ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಅವರು, ನಾನು ದೈಹಿಕವಾಗಿ ಪುರುಷನಾಗಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ (ಎಸ್‌ಆರ್‌ಎಸ್) ಒಳಗಾಗುವುದಾಗಿ ಹೇಳಿದ್ದಾರೆ.        

ಲಿಂಗ ಬದಲಾಯಿಸಲು ನಿರ್ಧರಿಸಿದ ಮಾಜಿ ಸಿಎಂ ಪುತ್ರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 22. ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಹಾವೇರಿ ಮೂಲದ ಪ್ರಸ್ತುತ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ನಿವಾಸಿ ಹೊನ್ನ ಯಾನೆ ಹೊನ್ನಪ್ಪ(55) ಎಂದು ಗುರುತಿಸಲಾಗಿದೆ. ಶಂಕರನಾರಾಯಣ ಗ್ರಾಮದಲ್ಲಿ 1993ರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಈತನನ್ನು ಜೂ. 20ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಶಂಕರನಾರಾಯಣ ಪೊಲೀಸರು ಬಂಧಿಸಿ, ಜೂ.21ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತನ

30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂತರ್ ಜಾತಿ ಮದುವೆ ವಿರೋಧ ! ➤ ತಾಳಿ ಕಟ್ಟುವ ವೇಳೆ ವಧುವನ್ನು ಎಳೆದೊಯ್ದ ಪೊಲೀಸರು

(ನ್ಯೂಸ್ ಕಡಬ) newskadaba.com ತಿರುವನಂತಪುರ, ಜೂ. 21.ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಮದುವೆ ಆಗಲು ಹೋದ ವೇಳೆ ಪೊಲೀಸರು ಮಂಟಪದಿಂದ ಯುವತಿಯನ್ನು  ಬಲವಂತವಾಗಿ ಎಳೆದೊಯ್ದಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೂ.17 ರಂದು ಆಲ್ಫಿಯಾ(18) ಅಖಿಲ್(21) ನನ್ನು ತಿರುವನಂತಪುರದ ಕೋವಲಂ ದೇವಾಲಯದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು ಇನ್ನೇನು ಮದುವೆ ಶಾಸ್ತ್ರ ನಡೆದು ತಾಳಿ ಕಟ್ಟುವ ವೇಳೆಯೇ ಪೊಲೀಸರು ದೇವಸ್ಥಾನಕ್ಕೆ ಬಂದು ಯುವತಿಯನ್ನು ಎಳೆದುಕೊಂಡು ಹೋಗಿದ್ದಾರೆ, ಮುಸ್ಲಿಂ ಯುವತಿ ಆಗಿರುವ ಆಲ್ಫಿಯಾ ಹಿಂದೂ ಯುವಕ ಅಖಿಲ್ ನನ್ನು ಕಳೆದ

ಅಂತರ್ ಜಾತಿ ಮದುವೆ ವಿರೋಧ ! ➤ ತಾಳಿ ಕಟ್ಟುವ ವೇಳೆ ವಧುವನ್ನು ಎಳೆದೊಯ್ದ ಪೊಲೀಸರು Read More »

ಕರಾವಳಿ

ನಾಪತ್ತೆಯಾದ ಜಲಾಂತರ್ಗಾಮಿ ನೌಕೆಗೆ ಮುಂದುವರಿದ ಶೋಧಕಾರ್ಯ

(ನ್ಯೂಸ್ ಕಡಬ) newskadaba.com ವಾಷ್ಟಿಂಗ್ಟನ್, ಜೂ. 21. ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ಜಲಾಂತರ್ಗಾಮಿ ನೌಕೆಯೊಂದು ನಾಪತ್ತೆಯಾಗಿದ್ದು, ಇದಕ್ಕಾಗಿ ಮಧ್ಯ ಅಟ್ಲಾಂಟಿಕ್ ಸಾಗರದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಯುಎಸ್ ಕರಾವಳಿ ಪಡೆ, ಕೆನಡಾದ ಜಂಟಿ ರಕ್ಷಣಾ ಕೇಂದ್ರ ಮತ್ತು ಫ್ರಾನ್ಸ್ ನ ಸಂಶೋಧನಾ ಹಡಗುಗಳ ರಕ್ಷಣಾ ತಂಡಗಳಿಗೆ ಸಾಗಾರದಾಳದಲ್ಲಿ ಪ್ರತಿ ಅರ್ಧಗಂಟೆಗೊಮ್ಮೆ ಬಡಿಯುವ ಶಬ್ಧ ಕೇಳಿಬರುತ್ತಿದೆ ಎಂಬ ಸುಳಿವೂ ಸಿಕ್ಕಿದ್ದು, ನೌಕೆಯ ಪತ್ತೆಗೆ ನಿರಂತರವಾಗಿ ಶ್ರಮಿಸುತ್ತಿವೆ. ನಾಪತ್ತೆಯಾದ ನೌಕೆಯಲ್ಲಿ ಐವರು ಸಿಬ್ಬಂದಿಗಳಿದ್ದು, ಇನ್ನು

ನಾಪತ್ತೆಯಾದ ಜಲಾಂತರ್ಗಾಮಿ ನೌಕೆಗೆ ಮುಂದುವರಿದ ಶೋಧಕಾರ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸುಳ್ಳು ಸುದ್ದಿ ತಡೆಗೆ ಪ್ರತ್ಯೇಕ ಸೈಬರ್ ಘಟಕ ಸ್ಥಾಪನೆ  ➤ ಡಾ.ಜಿ ಪರಮೇಶ್ವರ್

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.  21.  ಸುಳ್ಳು ಸುದ್ದಿ ಹಾವಳಿ ಕಡಿವಾಣಕ್ಕೆ ರಾಜ್ಯದ ಎಲ್ಲ ಠಾಣೆಗಳಲ್ಲಿ ಪ್ರತ್ಯೇಕ ಸೈಬರ್ ಘಟಕ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು ಸುಳ್ಳು ಸುದ್ದಿ ತಡೆಯುವ ಉದ್ದೇಶದಿಂದ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಜತೆ ಸಭೆ ಕರೆಯಲಾಗುತ್ತಿದೆ. ಯಾರು ಫೇಕ್ ಸುದ್ದಿ ಹಬ್ಬಿಸುತ್ತಿದ್ದಾರೋ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಯಾವುದೇ ಪಕ್ಷ ಇರಲಿ ಅಥವಾ ಸಂಘಟನೆ ಇರಲಿ ನಿರ್ದಾಕ್ಷಿಣ್ಯವಾಗಿ ಕಠಿಣ

ಸುಳ್ಳು ಸುದ್ದಿ ತಡೆಗೆ ಪ್ರತ್ಯೇಕ ಸೈಬರ್ ಘಟಕ ಸ್ಥಾಪನೆ  ➤ ಡಾ.ಜಿ ಪರಮೇಶ್ವರ್ Read More »

ಕರ್ನಾಟಕ
Scroll to Top