ನ್ಯೂಸ್ ಕಡಬ

ವಕೀಲೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ರಾಮನಗರ, ಆ. 23.  ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಕೀಲೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ ವಕೀಲೆಯನ್ನು ವಾಸುಕಿ(25) ಎಂದು ಗುರುತಿಸಲಾಗಿದ್ದು, ಮಾಗಡಿಯ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವತಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.    

ವಕೀಲೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮುಡಾ ಹಗರಣ     ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಆಕ್ರೋಶದ ಪೋಸ್ಟ್ 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನಡುವಣ ವಾಕ್ಸಮರ ತಾರಕಕ್ಕೇರಿದಂತಿದೆ. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ, ದಾಖಲೆ ಸಮೇತ ತಿರುಗೇಟು ನೀಡಿದ್ದಾರೆ ಎಂದು

ಮುಡಾ ಹಗರಣ     ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಆಕ್ರೋಶದ ಪೋಸ್ಟ್  Read More »

ಕರ್ನಾಟಕ

ಆನ್‌ಲೈನ್‌ ಟ್ರೇಡಿಂಗ್‌ ಮೋಸ..!  4 ಆರೋಪಿಗಳು ಅರೆಸ್ಟ್..!     

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 23.  ಆನ್‌ಲೈನ್‌ ಟ್ರೇಡಿಂಗ್‌ ಮೋಸದ ಕುರಿತು ಸೆನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ಜನ ಆರೋಪಿಗಳನ್ನು ಬಂಧಿಸಿ, ರೂ. 13,00,000/- ನಗದು ವಶಪಡಿಸಿಕೊಳ್ಳಲಾಗಿದೆ. ಉಪೇಂದ್ರಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಅವರನ್ನು ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್‌ಮೆಂಟ್ ಗ್ರೂಪ್‌ ಗೆ ಸೇರಿಸಿದ್ದಾರೆ ಎಂದು ನಂಬಿಸಿ, WhatsApp ಮೂಲಕ ಲಾಭಾಂಶಗಳ ಬಗ್ಗೆ ಮಾಹಿತಿ ನೀಡಿ‌ ಅವರಿಗೆ VIP-203-845 ಎಂಬ ಅಕೌಂಟ್ ನಂಬರನ್ನು ನೀಡಿದ್ದಾರೆ. ಹೆಚ್ಚಿನ ಲಾಭಾಂಶದ ಆಸೆ ತೋರಿಸಿ,

ಆನ್‌ಲೈನ್‌ ಟ್ರೇಡಿಂಗ್‌ ಮೋಸ..!  4 ಆರೋಪಿಗಳು ಅರೆಸ್ಟ್..!      Read More »

ಕರಾವಳಿ, ಕ್ರೈಮ್ ನ್ಯೂಸ್

*ಲೈಂಗಿಕ ಕಿರುಕುಳ ಆರೋಪ     ಆ.30ರವರೆಗೆ ಬಿಎಸ್‌ವೈ ಗೆ ಹೈಕೋರ್ಟ್‌ ಆದೇಶ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶ ನೀಡಲಾಗಿದೆ. ಆ.30ರವರೆಗೆ ಬಿಎಸ್‌ವೈ ಗೆ ಹೈಕೋರ್ಟ್‌ ವಿನಾಯಿತಿ ನೀಡಿದೆ. ಬಿ.ಎಸ್‌. ಯಡಿಯೂರಪ್ಪ, ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂಬುವುದಾಗಿ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ ಎನ್ನಲಾಗಿದೆ.  

*ಲೈಂಗಿಕ ಕಿರುಕುಳ ಆರೋಪ     ಆ.30ರವರೆಗೆ ಬಿಎಸ್‌ವೈ ಗೆ ಹೈಕೋರ್ಟ್‌ ಆದೇಶ Read More »

ಕರ್ನಾಟಕ

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಆದೇಶ ಉಲ್ಲಂಘನೆ ಆರೋಪ      ಕೋರ್ಟ್‌ ವಿಚಾರಣೆ ರದ್ದು         

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ಆದೇಶ ಉಲ್ಲಂಘನೆ ಆರೋಪದ ವಿಚಾರವಾಗಿ ಯತ್ನಾಳ್‌ ವಿರುದ್ಧದ ಕೋರ್ಟ್‌ ವಿಚಾರಣೆ ರದ್ದು ಮಾಡಲಾಗಿದೆ. ಕಳೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ‘ಎಲ್ಲ ಹಿಂದುಗಳು ಕಾಂಗ್ರೆಸ್‌ ಪಕ್ಷವನ್ನು ಬಹಿಷ್ಕರಿಸುತ್ತಾರೆ’ ಎಂದು ಯತ್ನಾಳ್ ಹೇಳಿಕೆ ನೀಡಿದ್ದರು. ಈ ವೀಡಿಯೋ ವೈರಲ್ ಆಗಿದ್ದು, ಈ ಕಾರಣದಿಂದ ಸರ್ಕಾರಿ ಅಧಿಕಾರಿಗಳ ಆದೇಶ ಉಲ್ಲಂಘಿಸಿದ ಆರೋಪ ಸಂಬಂಧ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ವಿಚಾರಣಾ ನ್ಯಾಯಾಲಯ ಮೇ 11ರಂದು ಸಮನ್ಸ್‌

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಆದೇಶ ಉಲ್ಲಂಘನೆ ಆರೋಪ      ಕೋರ್ಟ್‌ ವಿಚಾರಣೆ ರದ್ದು          Read More »

ಕರ್ನಾಟಕ

ಶಿರೂರು ಭೂಕುಸಿತ ಪ್ರಕರಣ     ವಿಶೇಷ ಅನುದಾನಕ್ಕೆ ಮೋದಿ ಅನುಮೋದನೆ  

(ನ್ಯೂಸ್ ಕಡಬ) newskadaba.c0m ಕಾರವಾರ, ಆ. 23.  ಶಿರೂರು ಭೂ ಕುಸಿತ ಪ್ರಕರಣದ ವಿಚಾರವಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬರೆದ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದಾರೆ. ಸಂಸದ ಕಾಗೇರಿಯವರು ವಿಶೇಷ ಪ್ರಕರಣದಡಿ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಕೋರಿದ್ದರು. ಈ ಪತ್ರಕ್ಕೆ ಮೋದಿ ಸ್ಪಂದಿಸಿ, ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಂತ್ರಸ್ತರಿಗೆ ವಿಶೇಷ ಅನುದಾನ ಬಿಡುಗಡೆಗೆ ಮೋದಿ ಅನುಮತಿ ನೀಡಿದ್ದಾರೆ ಜೊತೆಗೆ, ಕೇಂದ್ರ ಸರ್ಕಾರದಿಂದ ಶಿರೂರು ದುರಂತದಲ್ಲಿ ಸಾವನ್ನಪ್ಪಿದವರಿಗೆ ಎನ್‌ಡಿಆರ್‌ಎಫ್ ರಿಲೀಫ್ ಫಂಡ್​​ನಿಂದ 5 ಲಕ್ಷ

ಶಿರೂರು ಭೂಕುಸಿತ ಪ್ರಕರಣ     ವಿಶೇಷ ಅನುದಾನಕ್ಕೆ ಮೋದಿ ಅನುಮೋದನೆ   Read More »

ಕರ್ನಾಟಕ

ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಸಂಚು    14 ಆರೋಪಿಗಳು ಅರೆಸ್ಟ್       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 23.  ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಉದ್ದೇಶ ಹೊಂದಿದ್ದ 14 ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕವನ್ನು ಭೇದಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.   ಗುಪ್ತಚರ ಮಾಹಿತಿ ಪಡೆದ ನಂತರ, ವಿವಿಧ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಭೇದಿಸಲಾದ ಮಾಡ್ಯೂಲ್‌ಗೆ ಜಾರ್ಖಂಡ್‌ನ ರಾಂಚಿಯ ಡಾ। ಇಶ್ತಿಯಾಕ್ ಎಂಬಾತ ನೇತೃತ್ವ ವಹಿಸಿದ್ದು, ಇದು ‘ಖಿಲಾಫತ್’ ಅಂದರೆ ಬಂಡಾಯ ಸಾರಿ ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ

ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಸಂಚು    14 ಆರೋಪಿಗಳು ಅರೆಸ್ಟ್        Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಮತ್ತು ಕಾರು ಡಿಕ್ಕಿ..!    ಯುವಕ ಮೃತ್ಯು..!               

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 23.  ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ಚೆರ್ಕಳ ಕೆ .ಕೆ ಪುರದಲ್ಲಿ ನಡೆದಿದೆ. ಮೃತಪಟ್ಟವರನ್ನು ಕುಂಬಳೆ ಮೊಗ್ರಾಲ್ ಖುತುಬಿ ನಗರದ ಅಹಮ್ಮದ್ ಕಬೀರ್ ( 30) ಎಂದು ಗುರುತಿಸಲಾಗಿದೆ. ಸಂಬಂಧಿಕರೊಬ್ಬರ ವಿವಾಹ ಆಮಂತ್ರಣಕ್ಕೆ ತೆರಳಿ ಮರಳುತ್ತಿದ್ದಾಗ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡ ಕಬೀರ್ ರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ

ಬೈಕ್ ಮತ್ತು ಕಾರು ಡಿಕ್ಕಿ..!    ಯುವಕ ಮೃತ್ಯು..!                Read More »

ಕರಾವಳಿ, ಕ್ರೈಮ್ ನ್ಯೂಸ್

’ಬಿಜೆಪಿ ಸರ್ಕಾರ ತೆಗೆಯುವ ಉದ್ದೇಶ ಹೊಂದಿಲ್ಲ’- ಸಚಿವ ಪ್ರಹ್ಲಾದ್ ಜೋಷಿ 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ನಮ್ಮಿಂದ ಸರ್ಕಾರ ಅಸ್ಥಿರವಾಗುವುದಿಲ್ಲ. ನಿಮ್ಮ ಜಗಳದಿಂದ ಸರ್ಕಾರ ಅಸ್ಥಿರಗೊಂಡರೆ ಅದಕ್ಕೂ ನಮಗೆ ಸಂಬಂಧವಿಲ್ಲ. ಬಿಜೆಪಿ ಯಾವ ಕಾರಣಕ್ಕೂ ನಿಮ್ಮ ಸರ್ಕಾರ ತೆಗೆಯುವ ಉದ್ದೇಶ ಹೊಂದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. ರಾಜ್ಯಪಾಲರ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದರು. ನಿಮ್ಮ ಮನೆಯನ್ನು ನೀವು ಮೊದಲು ಸರಿ ಮಾಡಿಕೊಳ್ಳಿ, ಬೇರೆಯವರ ಮೇಲೆ ಆರೋಪ ಬಿಡಿ. ಸಿಎಂ ಮೇಲೆ ಆರೋಪ ಬಂದಿದೆ. ಅವರು

’ಬಿಜೆಪಿ ಸರ್ಕಾರ ತೆಗೆಯುವ ಉದ್ದೇಶ ಹೊಂದಿಲ್ಲ’- ಸಚಿವ ಪ್ರಹ್ಲಾದ್ ಜೋಷಿ  Read More »

ಕರ್ನಾಟಕ

ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲೆ         ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್             

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 23.  ಅಕ್ರಮ ಗಣಿಗಾರಿಕೆ ನಡೆಸಿದ ಮತ್ತು ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟಿಸಿರುವುದಷ್ಟೇ ಅಲ್ಲದೇ ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಿಸಲಾದ ಪ್ರಕರಣ ಸಂಬಂಧ ನೀಡಿದ ಮಧ್ಯಂತರ ತಡೆಯನ್ನು ಹೈಕೋರ್ಟ್ ಪುನಃ ವಿಸ್ತರಣೆ ಮಾಡಿದೆ. ತಮ್ಮ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಅರ್ಜಿ ಸಲ್ಲಿಸಿದ್ದರು.

ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲೆ         ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್              Read More »

ಕರಾವಳಿ
Scroll to Top