ಮಂಗಳೂರು

ಪೇಜಾವರ ಶ್ರೀಗಳಿಂದ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

(ನ್ಯೂಸ್ ಕಡಬ) newskadaba,ಉಡುಪಿ ಜೂ.27: ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಸುಬ್ರಹ್ಮಣ್ಯನಗರ ವಾರ್ಡಿನಲ್ಲಿ 11 ಎಕರೆ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗುತ್ತಿದ್ದು, ಇಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಶಾಸಕ ಕೆ. ರಘುಪತಿ ಭಟ್ ಅವರೊಂದಿಗೆ ಭೂ ಮಾತೆಗೆ ಹಾಲನ್ನು ಅರ್ಪಿಸಿ ನಾಟಿ ಕಾರ್ಯಕ್ಕೆ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು.ಈ ಭಾಗದಲ್ಲಿ ಹಡಿಲು […]

ಪೇಜಾವರ ಶ್ರೀಗಳಿಂದ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ Read More »

ಕರಾವಳಿ

ಹಡೀಲು ಭೂಮಿಯಲ್ಲಿ ಸ್ವತಃ ನಾಟಿ ಮಾಡಿ ಗಮನ ಸೆಳೆದ ಶಾಸಕ ಖಾದರ್

(ನ್ಯೂಸ್ ಕಡಬ) newskadaba,ಮಂಗಳೂರು ಜೂ.27: ಹಡೀಲು ಭೂಮಿಯಲ್ಲಿ ಕೃಷಿ ಕಾರ್ಯ ನಡೆಯುತ್ತಿರುವಲ್ಲಿಗೆ ಹೋಗಿದ್ದ ಶಾಸಕ ಯು.ಟಿ.ಖಾದರ್ ಅವರು ಸ್ವತಃ ಗದ್ದೆಗಿಳಿದು ನಾಟಿ ಮಾಡಿ ಕೃಷಿಕರಿಗೆ ಸಾಥ್ ನೀಡಿದ್ದು, ಇದೀಗ ಇದರ ಫೋಟೋಗಳು ವೈರಲ್ ಆಗುತ್ತಿದ್ದು, ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಶುಕ್ರವಾರ ನಗರದ ಕೊಣಾಜೆಯ ಕೆಳಗಿನ ಮನೆಯ ಹಡೀಲು ಬಿದ್ದ ಗದ್ದೆಯಲ್ಲಿ ನಾಗಬ್ರಹ್ಮ ಪ್ರಗತಿಪರ ಸಂಘ ಹಾಗೂ ಊರಿನ ಪ್ರಮುಖರು ಸೇರಿ ಭತ್ತದ ಕೃಷಿ ಮಾಡುವ ಸಂಕಲ್ಪ ಮಾಡಿದ್ದರು. ಇಲ್ಲಿಗೆ ಭತ್ತದ ಪೈರು ನಾಟಿ ಮಾಡಲು ಇಬ್ಬರು ಮಹಿಳೆಯರು ತೆರಳುತ್ತಿದ್ದರು.

ಹಡೀಲು ಭೂಮಿಯಲ್ಲಿ ಸ್ವತಃ ನಾಟಿ ಮಾಡಿ ಗಮನ ಸೆಳೆದ ಶಾಸಕ ಖಾದರ್ Read More »

ಕರಾವಳಿ, ಕರ್ನಾಟಕ

ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಚಾಲಕ

(ನ್ಯೂಸ್ ಕಡಬ) newskadaba,ಕಾರ್ಕಳ ಜೂ.27: ನಗರದ ಮಂಜುನಾಥ ಪೈ ಸಭಾಂಗಣ ಬಳಿಯ ದೇವರಗದ್ದೆ ರಸ್ತೆಯಲ್ಲಿ ಚಾಲಕನೊಬ್ಬ ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಘಟನೆ  ನಡೆದಿದೆ. ಚಿಕ್ಕಮಗಳೂರು ಮೂಲದವನಾಗಿದ್ದು, ಹಿರಿಯಂಗಡಿ ನಿವಾಸಿಯಾಗಿರುವ ಮಂಜುನಾಥ (34) ಎಂಬಾತ ವಿಷ ಸೇವನೆಗೈದವರು. ಇದೀಗ ಮಂಜುನಾಥನನ್ನು ಸ್ಥಳೀಯ ನಾಗರಿಕರು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಚಾಲಕ Read More »

ಕರಾವಳಿ

ಸಲಿಂಗಕಾಮಕ್ಕೆ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸುತಿದ್ದ ಮುಖ್ಯ ಶಿಕ್ಷಕ ಬಂಧನ

(ನ್ಯೂಸ್ ಕಡಬ) newskadaba,ನೆಲಮಂಗಲ ಜೂ.26: ವಿಶೇಷ ಮಕ್ಕಳ ವಸತಿ ಶಾಲೆಯಲ್ಲಿ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿಯ ಜೊತೆ ವಿಕೃತಿ ಮೆರೆದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದ ಘಟನೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ವಿಶೇಷ ಮಕ್ಕಳ ವಸತಿ ಶಾಲೆಯಲ್ಲಿ ನಡೆದಿದೆ. ಮುಖ್ಯ ಶಿಕ್ಷಕ ಎಸ್.ರಂಗನಾಥ್ ಬಂಧಿತ ಆರೋಪಿ. ಈತ ಸಲಿಂಗಕಾಮಕ್ಕೆ ವಿದ್ಯಾರ್ಥಿ ಬಟ್ಟೆ ಬಿಚ್ಚಿಸುತ್ತಿದ್ದ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಬಗ್ಗೆ ವಸತಿ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಶಿಕ್ಷಕ ರಂಗನಾಥ್, ಒತ್ತಾಯದ ಸಲಿಂಗಕಾಮ

ಸಲಿಂಗಕಾಮಕ್ಕೆ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸುತಿದ್ದ ಮುಖ್ಯ ಶಿಕ್ಷಕ ಬಂಧನ Read More »

ಕರಾವಳಿ

ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.26: ಮುಂಗಾರು ಆಗಮನದ ಬಳಿಕ ಬಿರುಸಾಗಿದ್ದ ಮಳೆ, ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೊಂಚ ಕಡಿಮೆಯಾಗಿದೆ. ಆದರೆ, ಇಂದಿನಿಂದ ಮತ್ತೆ ಮಳೆಯ ಆರ್ಭಟ ಶುರುವಾಗಲಿದ್ದು, 3 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಜೂನ್ 27ರಿಂದ ರಾಜ್ಯಾದ್ಯಂತ ಬಹುತೇಕ ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಲಿದೆ. ಜೂನ್ 30ರವರೆಗೂ ದಕ್ಷಿಣ ಕನ್ನಡ,

ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ತೋಟದ ಮನೆಯಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪ

(ನ್ಯೂಸ್ ಕಡಬ) newskadaba,ಬೆಳ್ತಂಗಡಿ ಜೂ.26:ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅತ್ಯಾರಂಡ ನಿವಾಸಿ ಜೋಸೆಫ್ ಬರ್ಬೋಜ ಎಂಬುವವರ ಮನೆಯ ತೋಟದಲ್ಲಿ ಹುಲ್ಲು ಕೊಯ್ಯುವಾಗ ಸುಮಾರು 11 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ತಕ್ಷಣ ಮನೆಯವರು ಲಾಯಿಲ ಸ್ನೇಕ್ ಅಶೋಕ್ ಎಂಬುವವರಿಗೆ ಕರೆ ಮಾಡಿ ಕರೆಸಿ ಸುರಕ್ಷಿತವಾಗಿ ಹಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ಬೆಳ್ತಂಗಡಿ : ತೋಟದ ಮನೆಯಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪ Read More »

ಕರಾವಳಿ

ಮಂಗಳೂರು: ವಾರಾಂತ್ಯ ಕರ್ಫ್ಯೂ ಬಿಗಿ, ಅನಗತ್ಯ ಸಂಚಾರಕ್ಕೆ ಕಡಿವಾಣ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.26:ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ಬಿಗಿ ಗೊಳಿಸಲಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಿಂದ ಹೊರಭಾಗದಲ್ಲಿ ಜನ ಓಡಾಟ ಕಂಡು ಬರುತ್ತಿದ್ದು, ಶೀಘ್ರದಲ್ಲಿ ಕಡಿವಾಣ ಹಾಕಲಾಗುತ್ತದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಹೇಳಿದರು ಲಾಕ್ ಡೌನ್ ಗೆ 99.9%. ಜನ ಉತ್ತಮವಾಗಿ ಸ್ಪಂದಿಸುತ್ತಿದ್ದರೂ, 1% ಜನರಿಂದ ಲಾಕ್ ಡೌನ್ ನಿಯಮಾವಳಿಗಳು ಮುಂದುವರಿಯುತ್ತಿದೆ. ಪರಿಣಾಮ ಎಲ್ಲರಿಗೂ ತೊಂದರೆಯಾಗುತ್ತಿದೆ.ಕಾನೂನಿಂದ ಮಾತ್ರ ಕೊರೊನಾ ಸೋಂಕು ನಿಯಂತ್ರಣವಾಗಿ ನಾವು ಯಥಾ ಸ್ಥಿತಿಗೆ ಬರಲು

ಮಂಗಳೂರು: ವಾರಾಂತ್ಯ ಕರ್ಫ್ಯೂ ಬಿಗಿ, ಅನಗತ್ಯ ಸಂಚಾರಕ್ಕೆ ಕಡಿವಾಣ Read More »

ಕರಾವಳಿ, ಕರ್ನಾಟಕ

ಮಂಗಳೂರು : ಜಿಲ್ಲಾ ಪೊಲೀಸ್ ವತಿಯಿಂದ 50 ಲಕ್ಷಕ್ಕೂ ಮಿಕ್ಕಿ ಮಾದಕ ವಸ್ತುಗಳ ನಾಶ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.26: ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶಪಡಿಸುವ ಕಾರ್ಯಕ್ರಮ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಲ್ನಾಡು ಕೈಗಾರಿಕಾ ಪ್ರದೇಶದ ರಾಮ್ ಕಿ ಬಯೋ ಮೆಡಿಕಲ್ ವೆಸ್ಟ್ ಟ್ರೀಟ್ಮೆಂಟ್ ಕಂಪನಿಯಲ್ಲಿ ನಡೆಯಿತು. ಈ ಸಂದರ್ಭ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾತನಾಡಿ ಕರ್ನಾಟಕ ರಾಜ್ಯಾದ್ಯಂತ ಡಿಜಿ ಐಜಿಪಿ

ಮಂಗಳೂರು : ಜಿಲ್ಲಾ ಪೊಲೀಸ್ ವತಿಯಿಂದ 50 ಲಕ್ಷಕ್ಕೂ ಮಿಕ್ಕಿ ಮಾದಕ ವಸ್ತುಗಳ ನಾಶ Read More »

ಕರಾವಳಿ

ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದ ಮೊಗ್ರ ಗ್ರಾಮಸ್ಥರು ➤ ಗ್ರಾಮಸ್ಥರ ಹಣದಿಂದಲೇ ಸಿದ್ಧವಾಯ್ತು ಸೇತುವೆ

(ನ್ಯೂಸ್ ಕಡಬ) newskadaba,ಸುಬ್ರಹ್ಮಣ್ಯ ಜೂ.26: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಪುಟ್ಟ ಹಳ್ಳಿಯಲ್ಲಿ ಜನರೇ ಸುಮಾರು 1 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಕಾಲು ಸಂಕವನ್ನು ಗುರುವಾರದಿಂದ ಜನರ ಬಳಕೆಗೆ ಲಭ್ಯವಾಗಿದೆ. ಕಮಿಲ, ಏರಣಗುಡ್ಡೆ, ಮಲ್ಕಜೆ, ಬಳ್ಳಕ್ಕ ಗ್ರಾಮಸ್ಥರಿಗೆ ಸರಿಯಾದ ಸಂಪರ್ಕ ವ್ಯವಸ್ಥೆ ಇರಲಿಲ್ಲ. ಜನಪ್ರತಿನಿಧಿಗಳ ಮೂಲಕ ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹೀಗಾಗಿ, ‘ಜನರಿಂದ ಜನರಿಗಾಗಿ ಜನರೇ ಗ್ರಾಮ ಸೇತು’ ಎಂಬ ಹೆಸರಿನಲ್ಲಿ ಗ್ರಾಮಸ್ಥರೇ ಕಾಲು ಸಂಕ ನಿರ್ಮಿಸಿದ್ದಾರೆ. ತೂಗುಸೇತುವೆಗಳ ತಜ್ಞ ಸುಳ್ಯದ ಗಿರೀಶ್ ಭಾರದ್ವಾಜ್ ಅವರ

ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದ ಮೊಗ್ರ ಗ್ರಾಮಸ್ಥರು ➤ ಗ್ರಾಮಸ್ಥರ ಹಣದಿಂದಲೇ ಸಿದ್ಧವಾಯ್ತು ಸೇತುವೆ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ನಿಯಂತ್ರಣದಲ್ಲಿದೆ ➤ ಸಿಎಂ ಯಡಿಯೂರಪ್ಪ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.26: ರಾಜ್ಯದಲ್ಲಿ ಪ್ರಸ್ತುತ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿ ವೈರಸ್ ನಿಯಂತ್ರಣದಲ್ಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್-19 ರ ರೂಪಾಂತರಿ ಡೆಲ್ಟಾ ಬಗ್ಗೆ ರಾಜ್ಯದಲ್ಲಿರುವ ಪ್ರಸ್ತುತ ಇರುವ ಪರಿಸ್ಥಿತಿ ಯ ಬಗ್ಗೆ ಪರಾಮರ್ಶೆ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯದಲ್ಲಿ ಡೆಲ್ಟಾ ವೈರಸ್ ಸಧ್ಯಕ್ಕೆ ಹತೋಟಿಯಲ್ಲಿದ್ದು, ವೈರಸ್ ಬಗ್ಗೆ ತೀವ್ರ ನಿಗಾ ಇಡುವಂತೆಯೂ

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ನಿಯಂತ್ರಣದಲ್ಲಿದೆ ➤ ಸಿಎಂ ಯಡಿಯೂರಪ್ಪ Read More »

ಕರಾವಳಿ
Scroll to Top