ಮಂಗಳೂರು

ಕುಂದಾಪುರ : ಸುಳ್ಳು ದಾಖಲೆ ಕೊಟ್ಟು ಬ್ಯಾಂಕ್‌ನಿಂದ ಸಾಲ ಪಡೆದ ದಂಪತಿ.!

(ನ್ಯೂಸ್ ಕಡಬ) newskadaba.com ಕುಂದಾಪುರ  ಅ. 19: ಸುಳ್ಳು ದಾಖಲೆಗಳು ಮತ್ತು ಲೆಕ್ಕಪರಿಶೋಧನಾ ವರದಿ ನೀಡಿ ಬ್ಯಾಂಕಿಗೆ ಮೋಸ ಮಾಡಿದ ಆರೋಪದ ಮೇಲೆ ದಂಪತಿಗಳ ವಿರುದ್ಧ ಕರ್ನಾಟಕ ಬ್ಯಾಂಕ್ ಸಿದ್ಧಾಪುರ ಶಾಖೆಯ ವ್ಯವಸ್ಥಾಪಕರು ಪ್ರಕರಣ ದಾಖಲಿಸಿದ್ದಾರೆ.ರಾಘವೇಂದ್ರ ಹೆಮ್ಮಣ್ಣ, ಮತ್ತು ಅವರ ಪತ್ನಿ ಆಶಾಕಿರಣ್ ಹೆಮ್ಮಣ್ಣ ಈ ಪ್ರಕರಣದ ಪ್ರಮುಖ ಆರೋಪಿಗಳು. 2015 ರ ಜೂನ್ 13 ರಂದು ಕುಂದಾಪುರದ ಶಂಕರನಾರಾಯಣದಲ್ಲಿ ಹೆಮ್ಸ್ ಫುಡ್ಸ್ ಖಾಸಗಿ ಲಿಮಿಟೆಡ್ ಅನ್ನು ತೆರೆದಿದ್ದು ಬ್ಯಾಂಕಿನಿಂದ ಸಾಲ ಪಡೆದಿದ್ದಾರೆ. ಬ್ಯಾಂಕಿಗೆ ಸಲ್ಲಿಸಿದ ಲೆಕ್ಕಪರಿಶೋಧನಾ […]

ಕುಂದಾಪುರ : ಸುಳ್ಳು ದಾಖಲೆ ಕೊಟ್ಟು ಬ್ಯಾಂಕ್‌ನಿಂದ ಸಾಲ ಪಡೆದ ದಂಪತಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಬರಿಮಲೆ: ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಗಮಿಸಿದ ಭಕ್ತನಿಗೆ ಕೊರೊನಾ ಸೋಂಕು ದೃಢ

(ನ್ಯೂಸ್ ಕಡಬ) newskadaba.com ತಿರುವನಂತಪುರಂ , ಅ.19: ಕೋವಿಡ್ ಮಾರ್ಗಸೂಚಿ ಪ್ರಕಾರ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಕೋವಿಡ್ 19 ಮಾರ್ಗಸೂಚಿಯ ಪ್ರಕಾರ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವವರು 48 ಗಂಟೆಗಳ ಹಿಂದೆ ಕೊರೊನಾ ಪರೀಕ್ಷೆ ಮಾಡಿಸಿರಬೇಕು. ಹಾಗೂ ವರದಿ ನೆಗೆಟಿವ್ ಇರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ನಿಯಮ ಜಾರಿಗೆ ತಂದಿತ್ತು. ಆದರೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ತಮಿಳುನಾಡಿನ ಭಕ್ತನಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.    

ಶಬರಿಮಲೆ: ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಗಮಿಸಿದ ಭಕ್ತನಿಗೆ ಕೊರೊನಾ ಸೋಂಕು ದೃಢ Read More »

ಕರಾವಳಿ

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಸ್ಥಳೀಯ ಈಜುಗಾರರು

(ನ್ಯೂಸ್ ಕಡಬ) newskadaba.com ಬಂಟ್ವಾಳ , ಅ.19: ಪಾಣೆಮಂಗಳೂರಿನ ಹಳೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಸ್ಥಳೀಯ ಯುವಕರ ತಂಡವೊಂದು ರಕ್ಷಿಸಿದ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಹಾಸನ ಜಿಲ್ಲೆಯ ಕುಮಾರ್ ಎಂದು ಗುರುತಿಸಲಾಗಿದೆ.   ಈತ ಮಂಗಳೂರು- ಬೆಂಗಳೂರು ಸಂಚರಿಸುವ ಖಾಸಗಿ ಬಸ್ಸಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕುಮಾರ್, ಇಂದು ಖಾಕಿ ಸಮವಸ್ತ್ರ ಧರಿಸಿಕೊಂಡೇ  ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಈಜುಗಾರ

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಸ್ಥಳೀಯ ಈಜುಗಾರರು Read More »

ಕರಾವಳಿ

ನವೆಂಬರ್’ನಲ್ಲಿ ಕಾಲೇಜು ಪುನರಾರಂಭಕ್ಕೆ ಸರ್ಕಾರ ಸಿದ್ಧತೆ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 19: ನವೆಂಬರ್ ತಿಂಗಳಿನಲ್ಲಿ ಕಾಲೇಜು ಪುನರಾರಂಭಕ್ಕೆ ಯುಜಿಸಿ ಗ್ರೀನ್ ಸಿಗ್ನಲ್ ನೀಡಿದ್ದು ಸರ್ಕಾರದಿಂದಲೂ ಕಾಲೇಜು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಂತಹಂತವಾಗಿ ಕಾಲೇಜು ಪುನರಾರಂಭಿಸಲು ಸರ್ಕಾರ ಅನುಮತಿ ನೀಡಿದ್ದು ಇದರ ಬೆನ್ನಲ್ಲೇ ಯುಜಿಸಿ ನವೆಂಬರ್ ನಲ್ಲಿ ಕಾಲೇಜು ಆರಂಭಕ್ಕೆ ಸೂಚಿಸಿದೆ. ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿಯಲ್ಲಿ ಹಂತ ಹಂತವಾಗಿ ಶಾಲಾ-ಕಾಲೇಜುಗಳನ್ನು ಅಕ್ಟೋಬರ್ 15ರ ನಂತರ ಆರಂಭಿಸುವಂತೆ ಸೂಚಿಸಲಾಗಿತ್ತು. ಈ ಬಳಿಕ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ) ಕೂಡ ಹಂತ ಹಂತವಾಗಿ ಶಾಲಾ-ಕಾಲೇಜು

ನವೆಂಬರ್’ನಲ್ಲಿ ಕಾಲೇಜು ಪುನರಾರಂಭಕ್ಕೆ ಸರ್ಕಾರ ಸಿದ್ಧತೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಅ.19: ನಂಜನಗೂಡು-ಊಟಿ ಹೆದ್ದಾರಿಯ ಎಲಚಗೆರೆ ಗೇಟ್ ಬಳಿ ಬೆಳ್ಳಂಬೆಳಗ್ಗೆ ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.     ಮೃತರನ್ನು ನಂಜನಗೂಡಿನ ಕೂಡ್ಲಾಪುರ ಗ್ರಾಮದ ನಾಗರಾಜು(38), ಪುಟ್ಟಸ್ವಾಮಿ (56) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಬೊಲೆರೊ ವಾಹನದ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.  

ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ರೆಸ್ಟೋರೆಂಟ್‌ ನಲ್ಲಿ ಕಳವು ➤ ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಸುಳ್ಯ , ಅ.19: ಇತ್ತೀಚಿನ ದಿನಗಳಲ್ಲಿ ಸುಳ್ಯ ಪರಿಸರದಲ್ಲಿ ಸರಣಿ ಕಳ್ಳತನ ಪ್ರಕರಣಗಳು  ಹೆಚ್ಚುತ್ತಿದ್ದು, ಕಳೆದ ವಾರ ಸುಳ್ಯ ಜೂನಿಯರ್‌ ಕಾಲೇಜು ರಸ್ತೆಯಲ್ಲಿರುವ ಅಂಗಡಿ ಹಾಗೂ ಚೆನ್ನಕೇಶವ ದೇವಾಲಯದ ಬಳಿ ಇರುವ ಅಂಗಡಿಯಿಂದ ಕಳ್ಳತನವಾಗಿದ್ದು, ಸುಳ್ಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದೀಗ ಸುಳ್ಯ ಗಾಂಧಿನಗರ ಅಲ್‌ ಪಹಾಲ್‌ ಹಟ್‌ ರೆಸ್ಟೋರೆಂಟ್‌ ನಲ್ಲಿ ಅ.17 ರಂದು ಬೆಳಗಿನ ಜಾವ 3 ಗಂಟೆ ಸುಮಯದಲ್ಲಿ ಕಳ್ಳತನ ನಡೆದಿದ್ದು, ಕಳ್ಳತನ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  

ಸುಳ್ಯ: ರೆಸ್ಟೋರೆಂಟ್‌ ನಲ್ಲಿ ಕಳವು ➤ ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸವಾರನ ಅಜಾಗರೂಕತೆಯಿಂದ ಸ್ಕೂಟರ್ ಪಲ್ಟಿ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು  ಅ. 19: ಸ್ಕೂಟರ್ ಸವಾರನ ಅಜಾಗರೂಕತೆಯಿಂದ ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಸ್ಕೂಟರ್  ಹತೋಟಿ ತಪ್ಪಿ ಸ್ಕಿಡ್ ಆಗಿ ಸ್ಕೂಟರ್ ಸವಾರರಿಬ್ಬರಿಗೂ ಗಾಯಗಳಾದ ಘಟನೆ ಶವಿವಾರದಂದು ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಹಿತೇಶ್ ಎಂಬಾತ ತನ್ನ ಸ್ಕೂಟರ್ ನಲ್ಲಿ ಶ್ರೀ ಚೇತನ್ ಎಂಬಾತನನ್ನು ಕುಳ್ಳಿರಿಸಿಕೊಂಡು ಮಾಡತ್ತಾರು-ಕಲ್ಲೇಗ ಸಾರ್ವಜನಿಕ ರಸ್ತೆಯಲ್ಲಿ ಶೇವಿರೆ ಕಡೆಯಿಂದ ನೆಹರೂನಗರ ಕಡೆಗೆ ಚಲಾಯಿಸಿಕೊಂಡು ಹೋಗಿದ್ದಾರೆ, ಬಳಿಕ ಕಬಕ ಗ್ರಾಮದ ಕಲ್ಲೇಗ ಎಂಬಲ್ಲಿ ತಿರುವು ರಸ್ತೆಯಲ್ಲಿ ಅಜಾಗರೂಕತೆ ಮತ್ತು

ಸವಾರನ ಅಜಾಗರೂಕತೆಯಿಂದ ಸ್ಕೂಟರ್ ಪಲ್ಟಿ ➤ ಸವಾರರಿಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ

ಬೆಂಗಳೂರಿನಲ್ಲಿ ಮುಂಜಾನೆಯಿಂದ ಧಾರಾಕಾರ ಮಳೆ ➤ ಹಲವೆಡೆ ಮನೆಯೊಳಗೆ ನುಗ್ಗಿದ ನೀರು

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 19: ಮಳೆಯಿಂದಾಗಿ ಜನ ಮತ್ತು ವಾಹನಗಳ ಓಡಾಟ ಕಡಿಮೆಯಾಗಿದೆ. ಬೆಳಗಿನ ಜಾವ ಸುರಿದ ಧಾರಾಕಾರ ಮಳೆಯಿಂದಾಗಿ ಅಪಾರ್ಟ್​ಮೆಂಟ್ ಮತ್ತು ಮನೆಗಳಿಗೆ ನೀರು ನುಗ್ಗಿದೆ. ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು. ಇಂದು ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಮಳೆ ಆರಂಭವಾಗಿದ್ದು, ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದಾಗಿ ಆಫೀಸು, ಅಂಗಡಿಗಳಿಗೆ ಹೊರಟ ಬೈಕ್ ಸವಾರರು ಪರದಾಡುತ್ತಿದ್ದಾರೆ. ಬೆಳಗ್ಗೆಯಿಂದ ಮೂರನೇ ಬಾರಿ ಸುರಿಯುತ್ತಿರುವ ಮಳೆಯಿಂದ ನಗರದ ರಸ್ತೆ, ಸಿಗ್ನಲ್​ಗಳಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಮುಂಜಾನೆಯಿಂದ ಧಾರಾಕಾರ ಮಳೆ ➤ ಹಲವೆಡೆ ಮನೆಯೊಳಗೆ ನುಗ್ಗಿದ ನೀರು Read More »

ಕರ್ನಾಟಕ

ಸರಕಾರದಿಂದ ಈದ್ ಮಿಲಾದ್ ಕುರಿತು ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 19: ಕೋವಿಡ್ ಅಟ್ಟಹಾಸದ ಹಿನ್ನೆಲೆಯಲ್ಲಿ ಈದ್ ಮಿಲಾದ್ ಆಚರಣೆಗೆ ಸರಕಾರ ಮಾರ್ಗಸೂಚಿ ರಿಲೀಸ್ ಮಾಡಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಈ ಕುರಿತು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಈದ್ ಮಿಲಾದ್ ಹಬ್ಬವನ್ನು ಸರಳವಾಗಿ ಆಚರಿಸಬೇಕು ಎಂದು ತಿಳಿಸಿದ್ದಾರೆ.   ಈದ್ ಮಿಲಾದ್ ಸಾಮೂಹಿಕ ಮೆರವಣಿಗೆಗೆ ನಿಷೇಧ ಹೇರಲಾಗಿದೆ. ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ನಿಷೇಧ ವಿಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ. ಮಸೀದಿಗಳಲ್ಲಿ ಕೋವಿಡ್ ನಿಯಮ ಪಾಲನೆ ಕಡ್ಡಾಯ ಎಂಬುದಾಗಿ ಮಾರ್ಗಸೂಚಿಯಲ್ಲಿ ತಿಳಿಸಿದೆ. ನಿಮಯಗಳನ್ನು

ಸರಕಾರದಿಂದ ಈದ್ ಮಿಲಾದ್ ಕುರಿತು ಮಾರ್ಗಸೂಚಿ ಪ್ರಕಟ Read More »

ಕರಾವಳಿ

ಕಾರ್ಕಳ : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ವೃದ್ದೆ

(ನ್ಯೂಸ್ ಕಡಬ) newskadaba.com ಕಾರ್ಕಳ ಅ. 19: ಕಾರ್ಕಳ ಚಿಕ್ಕಲ್ ಬೆಟ್ಟು ಎಂಬಲ್ಲಿ ಇಂದು ಮುಂಜಾನೆ ಸುಮಾರು 78 ವರುಷದ ವೃದ್ದೆಯೋರ್ವರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.   ಘಟನೆ ಕಾರ್ಕಳದ ಹಿರ್ಗಾನ್ ಗ್ರಾಮದ ಚಿಕ್ಕಲ್ ಬೆಟ್ಟು ಎಂಬಲ್ಲಿ ನಡೆದಿದೆ.  ವೃದ್ದೆ ಸುಲೋಚನಾ ಎಂಬುವರು ಮನೆ ಸಮೀಪದ ತೋಟದಲ್ಲಿ ಮುಂಜಾನೆ ಸೀಮೆ ಎಣ್ಣೆ ಹಾಗೂ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಕಾರ್ಕಳ : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ವೃದ್ದೆ Read More »

ಕರಾವಳಿ, ಕರ್ನಾಟಕ
Scroll to Top