ಮಂಗಳೂರು

ಬಂಟ್ವಾಳ: ವಿವಾಹಿತ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ   ಯುವತಿಯಿಂದ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com. ಬಂಟ್ವಾಳ, ಜು.24. ವಿವಾಹಿತ ವ್ಯಕ್ತಿಯೋರ್ವ ಸಂಬಂಧಿ ಯುವತಿಯನ್ನು ಅಕ್ರಮವಾಗಿ, ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಗರ್ಭವತಿ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಗುರುಪ್ರಸಾದ್ ಎಂಬಾತ ಸಂಬಂಧಿ ಯುವತಿಗೆ ಕಳೆದ ಒಂದು ವರ್ಷಗಳಿಂದ ಎರಡು ಬಾರಿ ಇಚ್ಚೆಗೆ ವಿರುದ್ದವಾಗಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ಸಂತ್ರಸ್ತ ಯುವತಿ ಠಾಣೆಗೆ ದೂರು‌ ನೀಡಿದ್ದಾರೆ. ಆರೋಪಿಗೆ ಈಗಾಗಲೇ ‌ಮದುವೆಯಾಗಿದ್ದು, ಸಂತ್ರಸ್ತ ಯುವತಿಗೆ ಅನ್ಯಾಯ ಎಸಗಿರುವ ಬಗ್ಗೆ ದೂರಿನಲ್ಲಿ ತಿಳಿಸಿದ್ದಲ್ಲದೆ […]

ಬಂಟ್ವಾಳ: ವಿವಾಹಿತ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ   ಯುವತಿಯಿಂದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಸ್ಕೂಟರ್‌ ಗೆ ಲಾರಿ ಢಿಕ್ಕಿ   ವಿಕಲಚೇತನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಲಾರಿಯೊಂದು ಸ್ಕೂಟರ್‌ ಗೆ ಢಿಕ್ಕಿಯಾಗಿ ಸ್ಕೂಟರ್ ಚಲಾಯಿಸುತ್ತಿದ್ದ ವಿಕಲಚೇತನ ವ್ಯಕ್ತಿ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಜಲ್ಪಡ್ಪು ಎಂಬಲ್ಲಿ ಸಂಭವಿಸಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಮಿತ್ತೂರು ಏಮಾಜೆ ಶಿವರಾಮ ನಾಯ್ಕ (50) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯು ಮೂರು ಚಕ್ರದ ಸ್ಕೂಟರ್ ಗೆ ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ಶಿವರಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ಸಂಚಾರ ಠಾಣೆಯ

ಪುತ್ತೂರು: ಸ್ಕೂಟರ್‌ ಗೆ ಲಾರಿ ಢಿಕ್ಕಿ   ವಿಕಲಚೇತನ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.24. ದ್ವಿತೀಯ ಪಿಯುಸಿ ಓದುತ್ತಿದ್ದ ಯುವತಿಯೋರ್ವಳು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ಸಂಭವಿಸಿದೆ.  ಮೃತ ಯುವತಿಯನ್ನು ನಯನಾ (17) ಎಂದು ಗುರುತಿಸಲಾಗಿದೆ. ನಯನಾ ವೈಯಕ್ತಿಕ ಸಮಸ್ಯೆಗಳಿಂದ ಮಾನಸಿಕವಾಗಿ ನೊಂದು ಫ್ಯಾನ್‌ ಗೆ ಚೂಡಿದಾರ್ ಕಟ್ಟಿಕೊಂಡು ಮನೆಯ ಮಹಡಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.  

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ವಾರಿಸುದಾರರಿಲ್ಲದ ಶವ ಸಂಸ್ಕಾರ 

(ನ್ಯೂಸ್ ಕಡಬ)newskadaba.com ಉಡುಪಿ, ಜು.24. 4 ವರ್ಷಗಳಿಂದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಪಡೆದ ವೃದ್ಧರು ನಿಧನ ಹೊಂದಿದ್ದು, ಸಂಬಂಧಿಕರ ಪತ್ತೆಯಾಗದೆ ಇರುವುದರಿಂದ ವಿಶು ಶೆಟ್ಟಿಯವರು ವೃದ್ಧರ ಶವ ಸಂಸ್ಕಾರವನ್ನು ಬೀಡಿನ ಗುಡ್ಡೆ ರುದ್ರ ಭೂಮಿಯಲ್ಲಿ ನೆರವೇರಿಸಿದರು ಎನ್ನಲಾಗಿದೆ. ಮೃತರನ್ನು ವೃದ್ಧ ನಾಗಪ್ಪ ನಾಡಾರ್(85) ಎಂದು ಗುರುತಿಸಲಾಗಿದೆ. ಸಂಬಂಧಿಕರ ಪತ್ತೆಗೆ ಮಾಧ್ಯಮ ಪ್ರಕಟಣೆ ನೀಡಿದರೂ ಸಂಬಂಧಿಕರು ಪತ್ತೆ ಆಗಲಿಲ್ಲ. ಶವ ಸಂಸ್ಕಾರದಲ್ಲಿ ಆಶ್ರಮದ ಮುಖ್ಯಸ್ಥರಾದ ಶ್ರೀಮತಿ ತನುಲ ಹಾಗೂ ಆಶ್ರಮ ವಾಸಿಗಳು ಸಹಕರಿಸಿದರು. ಅಂಬಲಪಾಡಿ ಕೃಷ್ಣ ರವರು ಜೆ

ಉಡುಪಿ: ವಾರಿಸುದಾರರಿಲ್ಲದ ಶವ ಸಂಸ್ಕಾರ  Read More »

ಕರಾವಳಿ

ಕೇರಳದಲ್ಲಿ ನಿಫಾ ಕೇಸ್ ಪತ್ತೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ. ನಿಫಾ ವೈರಸ್‌ ಸೋಂಕಿಗೆ ತುತ್ತಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಮೃತಪಟ್ಟಿದ್ದು, ಹೀಗಾಗಿ ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ.  ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಗಳಿಗಾಗಿ ಕೇರಳದಿಂದ ಅನೇಕ ಮಂದಿ ಆಗಮಿಸುತ್ತಾರೆ. ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ

ಕೇರಳದಲ್ಲಿ ನಿಫಾ ಕೇಸ್ ಪತ್ತೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ Read More »

ಕರಾವಳಿ

ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು.!     ಶಾಸಕ ಹರೀಶ್ ಪೂಂಜಾ ಆಗ್ರಹ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.23. ಈ ಬಾರಿ ಸುರಿದ ಭಾರಿ ಮಳೆಗೆ ಕರಾವಳಿ ಭಾಗಗಳ ಹಲವೆಡೆ ಭಾರೀ ಹಾನಿ ಸಂಭವಿಸಿದ್ದು, ಸರ್ಕಾರ ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಶಾಸಕ ಹರೀಶ್ ಪೂಂಜಾ ಸೇರಿ ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಾಗಿ ಮಾತನಾಡಿದ ಹರೀಶ್‌ ಪೂಂಜ ಅವರು, ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು

ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು.!     ಶಾಸಕ ಹರೀಶ್ ಪೂಂಜಾ ಆಗ್ರಹ Read More »

ಕರಾವಳಿ

ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ

(ನ್ಯೂಸ್‌ ಕಡಬ) newskadaba ಬಂಟ್ವಾಳ, ಮಾ.09: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಟ್ರಕ್ ಚಾಲಕ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಸ್ಥಳೀಯರು ರಕ್ಷಿಸಿ ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ

ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ Read More »

ಕರಾವಳಿ

ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪಣಂಬೂರು, ಆ.15. ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪಣಂಬೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಾಲಕಿ ಸಹಿತ ಆರೋಪಿಯನ್ನು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಮುಹಮ್ಮದ್‌ ಸರ್ಫರಾಝ್‌ ಯಾನೆ ಚಪ್ಪು (22) ಎಂದು ಗುರುತಿಸಲಾಗಿದೆ. ಆರೋಪಿಯು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಅಪಹರಣ ಮಾಡಿರುವುದಾಗಿ ಬಾಲಕಿಯ ಪೋಷಕರು ಪಣಂಬೂರು ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ

ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ – ಆರೋಪಿ ಅರೆಸ್ಟ್ Read More »

ಕರಾವಳಿ

ಕಡಬ: ಕೊಯಿಲ ಸಂತ್ರಸ್ತರ ಪುನರ್ವಸತಿ ಕೇಂದ್ರ ಪರಿಶೀಲನೆ

(ನ್ಯೂಸ್ ಕಡಬ)newskadaba.com ಕಡಬ, ಆ.11. ಕಡಬ ತಾಲೂಕು ಕೊಯಿಲ ಎಂಡೋ ಸಂತ್ರಸ್ತರ ಪುನರ್ವಸತಿ ಕೇಂದ್ರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ವಿಶೇಷ ಮೇಲ್ವಿಚಾರಕರಾದ ಡಾ. ಯೋಗೇಶ್ ದುಬೆ ಅವರು ಭೇಟಿ ನೀಡಿ ಪರಿಶೀಲಿಸಿದರು ಎನ್ನಲಾಗಿದೆ. ಎಂಡೋ ಬಾಧಿತರ ಅಂಕಿ ಅಂಶ, ಸಂತ್ರಸ್ಥರಿಗೆ ನೀಡಲಾಗುವ ಸೌಲಭ್ಯದ ಬಗ್ಗೆ ಪುತ್ತೂರು ತಾಲೂಕು ಅರೋಗ್ಯಾಧಿಕಾರಿ ಡಾ. ದೀಪಕ್ ರೈ ಮಾಹಿತಿ ನೀಡಿದರು. ಪುನರ್ವಸತಿ ಕೇಂದ್ರವನ್ನು ಮುನ್ನಡೆಸುತ್ತಿರುವ ಬೆಳ್ತಂಗಡಿ ನರಿಯ ಸಿಯೋನ್ ಆಶ್ರಮ ಟ್ರಸ್ಟ್ ನ ವ್ಯವಸ್ಥಾಪಕ ಜಾಕ್ಸನ್ ಪುನರ್ವಸತಿ ಕೇಂದ್ರದ ಕಾರ್ಯವೈಖರಿ ಬಗ್ಗೆ

ಕಡಬ: ಕೊಯಿಲ ಸಂತ್ರಸ್ತರ ಪುನರ್ವಸತಿ ಕೇಂದ್ರ ಪರಿಶೀಲನೆ Read More »

ಕರಾವಳಿ

ತಲಪಾಡಿ ಗ್ರಾ.ಪಂ ಅಧ್ಯಕ್ಷರಾಗಿ ಟಿ.ಇಸ್ಮಾಯಿಲ್‌ ಆಯ್ಕೆ..!

(ನ್ಯೂಸ್ ಕಡಬ)newskadaba.com ಉಳ್ಳಾಲ, ಆ.11. ತಲಪಾಡಿ ಗ್ರಾ.ಪಂಗೆ ನೂತ‌ನ ಅಧ್ಯಕ್ಷರಾಗಿ ಎಸ್‌ ಡಿಪಿಐ ಬೆಂಬಲಿತ ಅಧ್ಯಕ್ಷ ಟಿ.ಇಸ್ಮಾಯಿಲ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತರು ಎಸ್‌ ಡಿಪಿಐ ಬೆಂಬಲಿತರಿಗೆ ಬೆಂಬಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ನಿರೀಕ್ಷೆಯಲ್ಲಿದ್ದ ಸತ್ಯರಾಜ್‌ ಗೆ ಸೋಲು ಉಂಟಾಗಿದೆ. ಒಟ್ಟು 24 ವಾರ್ಡುಗಳ ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, 1 ಕಾಂಗ್ರೆಸ್‌ ಹಾಗೂ 10 ಎಸ್‌ ಡಿಪಿಐ ಬೆಂಬಲಿತರು ಸದಸ್ಯರಾಗಿದ್ದರು. ನಡೆದ ಚುನಾವಣೆಗೆ

ತಲಪಾಡಿ ಗ್ರಾ.ಪಂ ಅಧ್ಯಕ್ಷರಾಗಿ ಟಿ.ಇಸ್ಮಾಯಿಲ್‌ ಆಯ್ಕೆ..! Read More »

ಕರಾವಳಿ
Scroll to Top