ಮಂಗಳೂರು

ಅಡೆಕ್ಕಲ್ ಅಬ್ಬಾಸ್ ಹಾಜಿ ನಿಧನ ➤ ಎಸ್.ಡಿ.ಪಿ.ಐ ಸಂತಾಪ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ ಆ,17:  ಧಾರ್ಮಿಕ ಪಂಡಿತ ,ಸರಳ ಸಜ್ಜನ ವ್ಯಕ್ತಿತ್ವ ಹೊಂದಿದ್ದ ಶತಾಯುಷಿ ಅಡೆಕ್ಕಲ್ ಅಬ್ಬಾಸ್ ಹಾಜಿ (103 ವರ್ಷ) ಯವರು ಇಂದು ಬೆಳಗ್ಗೆ ಅಲ್ಲಾಹನ ಕರೆಗೆ ಓಗೊಟ್ಟು ನಮ್ಮನ್ನು ಅಗಲಿರುತ್ತಾರೆ. ಅಡೆಕ್ಕಲ್  ಮಸೀದಿಯ ಸ್ಥಾಪಕ ಸದಸ್ಯರು. ಅಲ್ಲಿ ಬಹಳಷ್ಟು ಸಮಯದಿಂದ ಸೇವೆ ನೀಡಿದ ಅವರು ಎಲ್ಲರಿಗೂ ಚಿರಪರಿಚಿತರು ಮತ್ತು ಬಹುಮಾನ್ಯರಾಗಿದ್ದರು. ಕಾಸರಗೋಡಿನ ತಳಂಗರೆ ಹಾಗೂ ಹಾಸನ, ಚಿಕ್ಕಮಂಗಳೂರು ಜಿಲ್ಲೆಯ ಹಲವು ಸಮಸ್ತದ ಮಸೀದಿಗಳಲ್ಲಿ ಖತೀಬಾಗಿ,ಇಮಾಮಾಗಿ, ಮುದರ್ರಿಸ್ ಆಗಿ ಸೇವೆ ಸಲ್ಲಿಸಿರುತ್ತಾರೆ. ಅವರು ಆರು ಗಂಡು […]

ಅಡೆಕ್ಕಲ್ ಅಬ್ಬಾಸ್ ಹಾಜಿ ನಿಧನ ➤ ಎಸ್.ಡಿ.ಪಿ.ಐ ಸಂತಾಪ Read More »

ಕರಾವಳಿ

ಮಂಗಳೂರು : ಸಫರ್ ಕ್ಲಬ್ ಮತ್ತು ಬ್ಲಡ್ ಹೆಲ್ಪ್ ಕೇರ್ ವತಿಯಿಂದ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,17: ಮಂಚಿಲ ಸಫರ್ ಸ್ಪೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಶನ್ ಹಾಗೂ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ) ಜಂಟಿ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ 74ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ  ಬೃಹತ್ ರಕ್ತದಾನ ಶಿಬಿರ ಸಫರ್ ಸ್ಪೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಶನ್ ನಲ್ಲಿ ನಡೆಯಿತು ಸಫರ್ ಸ್ಪೋಟ್ಸ್ ಮತ್ತು ಕಲ್ಚರಲ್ ಅಸೋಸಿಯೇಶನ್ ಗೌರವಾಧ್ಯಕ್ಷ ಯು.ಎಚ್ ಫಾರೂಕ್ ಮಾತನಾಡಿ ಪ್ರತೀ ವರ್ಷವು ನಾವು ಸ್ವಾತಂತ್ರ್ಯೋತ್ಸವದ ದಿನದಂದು ಈ ಕಾರ್ಯಕ್ರಮವನ್ನು ಆಯೋಜಿಸುತ್ತೇವೆ, ಈ ಬಾರಿ

ಮಂಗಳೂರು : ಸಫರ್ ಕ್ಲಬ್ ಮತ್ತು ಬ್ಲಡ್ ಹೆಲ್ಪ್ ಕೇರ್ ವತಿಯಿಂದ ರಕ್ತದಾನ ಶಿಬಿರ Read More »

ಕರಾವಳಿ, ಕರ್ನಾಟಕ

 ಬೆಂಗಳೂರಿನಲ್ಲಿ ನಡೆಯುವ *ಹೀರೊ ಹೈ ಲೀಗ್* ತಂಡಕ್ಕೆ ಆರಂತೋಡಿನ ಯುವಕ ಅದ್ನಾನ್ ಪಟೇಲ್ ಆಯ್ಕೆ

(ನ್ಯೂಸ್ ಕಡಬ) newskadaba.com ಅರಂತೋಡು, ಆ,17:  ಇತ್ತೀಚೆಗೆ ಮಂಗಳೂರು ಎಫ್ ಸಿ ಮಂಗಳೂರು ಅಕಾಡೆಮಿಗೆ ನಡೆದ ಅಂಡರ್18 ಆಯ್ಕೆ ಟ್ರಯಲ್ ನಲ್ಲಿ ಉತ್ತಮ ಪ್ರದರ್ಶನ ತೋರಿದ ಕಾರಣ ಡಿಸೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಹೀರೊ ಹೈ ಲೀಗ್ ಪಂದ್ಯಾಟದಲ್ಲಿ ಎಫ್ ಸಿ ಮಂಗಳೂರು ಫುಟ್ಬಾಲ್ ಅಸ್ಸೋಸಿಯೇಷನ್ ತಂಡದ ಪರವಾಗಿ ಅದ್ನಾನ್ ಪಟೇಲ್ ಪಾಲ್ಗೊಳ್ಳಲಿದ್ದಾರೆ.   ಆಲ್ ಇಂಡಿಯಾ ಫುಟ್ಬಾಲ್ ಅಸ್ಸೋಸಿಯೇಷನ್ ಗೆ ತನ್ನನ್ನು ನೋಂದಾಯಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಹಲವಾರು ಜಿಲ್ಲಾ  ಮತ್ತು ತಾಲೂಕು ಮಟ್ಟದ ಪಂದ್ಯಾವಳಿಯನ್ನು ಪ್ರತಿನಿಧಿಸಿ

 ಬೆಂಗಳೂರಿನಲ್ಲಿ ನಡೆಯುವ *ಹೀರೊ ಹೈ ಲೀಗ್* ತಂಡಕ್ಕೆ ಆರಂತೋಡಿನ ಯುವಕ ಅದ್ನಾನ್ ಪಟೇಲ್ ಆಯ್ಕೆ Read More »

ಕರಾವಳಿ, ಕರ್ನಾಟಕ

ಕೋಡೆರಿ ದೋಣಿ ದುರಂತ ➤ ಓರ್ವ ಮೀನುಗಾರನ ಮೃತ ದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ,17:  ಕುಂದಾಪುರ ಕಿರಿಮಂಜೇಶ್ವರ ಬಳಿ ಕೊಡೇರಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿ, 7 ಮೀನುಗಾರರನ್ನು ರಕ್ಷಿಸಿದ ಘಟನೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ರವಿವಾರ ಮಧ್ಯಾಹ್ನ ನಡೆದಿತ್ತು.     ಈ ಪೈಕಿ ಓರ್ವ ವ್ಯಕ್ತಿಯ ಮೃತ ದೇಹ ಸೋಮವಾರ ಪತ್ತೆಯಾಗಿದೆ.ಪತ್ತೆಯಾದ ಮೃತದೇಹವನ್ನು ಮೀನುಗಾರ  ನಾಗರಾಜ್ ಖಾರ್ವಿಯದ್ದು ಎಂದು ಗುರುತಿಸಲಾಗಿದ್ದು ಇತರೆ ಮೂವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.  

ಕೋಡೆರಿ ದೋಣಿ ದುರಂತ ➤ ಓರ್ವ ಮೀನುಗಾರನ ಮೃತ ದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ಗುಂಡ್ಯ : ಸಿಮೆಂಟ್ ಸಾಗಾಟದ ಲಾರಿಗೆ ಬೆಂಕಿ ➤ ಚಾಲಕ, ಕ್ಲೀನರ್ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಗುಂಡ್ಯ, ಆ,17:  ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಗುಂಡ್ಯ ಸಮೀಪ ಸಿಮೆಂಟ್ ಸಾಗಾಟದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.       ಪರಿಣಾಮ ಲಾರಿ ಭಾಗಶ: ಸುಟ್ಟು ಹೋಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಗುಂಡ್ಯ ಗಡಿ ಸಮೀಪ ಬೆಂಕಿ ಕಾಣಿಸಿಕೊಂಡಿದೆ. ಇದರ ಅರಿವು ಆಗುತ್ತಿದ್ದಂತೆ ಚಾಲಕ ಲಾರಿ ನಿಲ್ಲಿಸಿದ್ದು ಬಳಿಕ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲಾಗಿದೆ. ಬೆಂಕಿಯಿಂದಾಗಿ

ಗುಂಡ್ಯ : ಸಿಮೆಂಟ್ ಸಾಗಾಟದ ಲಾರಿಗೆ ಬೆಂಕಿ ➤ ಚಾಲಕ, ಕ್ಲೀನರ್ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ

ಕೊರೋನಾ ಸಂಕಷ್ಟ : ರೂ.200 ಕೋ. ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ

(ನ್ಯೂಸ್ ಕಡಬ) newskadaba.com ಉಡುಪಿ. ಆ,17:  ಕೊರೋನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಟ ರೂ.200 ಕೋಟಿ ನಿರ್ವಹಣಾ ನಿಧಿಯನ್ನು ನೀಡುವಂತೆ ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.   ಕಳೆದ 6-7 ತಿಂಗಳುಗಳಿಂದ ಕೊರೋನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳು ತೊಂದರೆಗೊಳಗಾಗಿವೆ. ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕವಾಗಿದೆ. ಉಡುಪಿಯಲ್ಲಿ ನೀಲಾವರ ಕೊಡವೂರು

ಕೊರೋನಾ ಸಂಕಷ್ಟ : ರೂ.200 ಕೋ. ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ Read More »

ಕರಾವಳಿ, ಕರ್ನಾಟಕ

ಹಿರಿಯ ಪತ್ರಕರ್ತ ಸೋಮಶೇಖರ ಯಡವಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,17:  ಕೊರೊನಾ ಸೋಂಕಿತರಾಗಿದ್ದ ಹಿರಿಯ ಪತ್ರಕರ್ತ ಸೋಮಶೇಖರ್ ಯಡವಟ್ಟಿ ನಿಧನ ಹೊಂದಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪತ್ರಕರ್ತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸೋಮಶೇಖರ್ ಯಡವಟ್ಟಿ (50) ಪ್ರಸ್ತುತ ಸಂಯುಕ್ತ ಕರ್ನಾಟಕ ದಿನ ಪತ್ರಿಕೆ ಮುಖ್ಯ ವರದಿಗಾರರಾಗಿದ್ದರು. ಕೊರೊನಾ ಸೋಂಕಿತರಾಗಿದ್ದ ಅವರು ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಧಾರವಾಡ ಮೂಲದ ಸೋಮಶೇಖರ್ ಯಡವಟ್ಟಿ ಈ ಟಿವಿ, ಕರುನಾಡ ಸಂಜೆ, ಉದಯವಾಣಿ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಣೆ

ಹಿರಿಯ ಪತ್ರಕರ್ತ ಸೋಮಶೇಖರ ಯಡವಟ್ಟಿ ನಿಧನ Read More »

ಕರಾವಳಿ, ಕರ್ನಾಟಕ

ವಿಪರೀತ ಮಳೆಗೆ ಕುಸಿದು ಬಿದ್ದ ಮನೆ ➤ ಮಳೆಹಾನಿ ಯೋಜನೆಯಡಿ ರೂ.5 ಲಕ್ಷ ಒದಗಿಸಿಕೊಡುವ ಭರವಸೆ

(ನ್ಯೂಸ್ ಕಡಬ) newskadaba.com ಬಾಂಜಿಕೋಡಿ, ಆ,17:  ಕರಾವಳಿಯಲ್ಲಿ ಇತ್ತೀಚಿಗೆ ಸುರಿದ ವಿಪರೀತ ಮಳೆಗೆ ಬಾಂಜಿಕೋಡಿಯ ಪ್ರಭಾಕರ ನಾಯಕ್ ಎಂಬವರ ಮನೆಯು ಸಂಪೂರ್ಣವಾಗಿ ಕುಸಿದು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ.ಘಟನ ಸ್ಥಳಕ್ಕೆ ಶಾಸಕ ಎಸ್.ಅಂಗಾರ ರವರು ಇಂದು ಭೇಟಿ ನೀಡಿದ್ದರು.     ಮಳೆಹಾನಿ ಯೋಜನೆಯಡಿಯಲ್ಲಿ ಹೊಸ ಮನೆಗೆ ರೂ.5 ಲಕ್ಷ ಅನುದಾನ ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ದ.ಕ. ಜೇನು ವ್ಯವಸಾಯಗಾರರ ಸೇವಾ ಸರಕಾರಿ ಸಂಘದ ಅಧ್ಯಕ್ಷ ಚಂದ್ರ

ವಿಪರೀತ ಮಳೆಗೆ ಕುಸಿದು ಬಿದ್ದ ಮನೆ ➤ ಮಳೆಹಾನಿ ಯೋಜನೆಯಡಿ ರೂ.5 ಲಕ್ಷ ಒದಗಿಸಿಕೊಡುವ ಭರವಸೆ Read More »

ಕರಾವಳಿ, ಕರ್ನಾಟಕ

ಅಂತರರಾಜ್ಯ ಸಂಚಾರಕ್ಕೆ ದಕ್ಷಿಣ ಕನ್ನಡ – ಕೇರಳ ಗಡಿ ಓಪನ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ,17: ಅಂತರರಾಜ್ಯ ಸಂಚಾರಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕರ್ನಾಟಕ-ಕೇರಳ ನಡುವಿನ ಗಡಿಯನ್ನು ತೆರೆದಿದೆ. ಪ್ರತಿದಿನ ಸಂಚಾರ ನಡೆಸುವ ಜನರು ತಿಂಗಳ ಪಾಸ್ ಪಡೆಯಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ. ದಕ್ಷಿಣ ಕನ್ನಡ ಮತ್ತು ಕಾಸರಗೋಡು ನಡುವೆ ಸಂಪರ್ಕ ಕಲ್ಪಿಸುವ ಎಲ್ಲಾ ಗಡಿಗಳನ್ನು ಜನರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಕೋವಿಡ್ 19 ಸೋಂಕಿನ ಭೀತಿ ಹಿನ್ನಲೆಯಲ್ಲಿ ಗಡಿಯನ್ನು ಮುಚ್ಚಲಾಗಿತ್ತು.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಈ ಕುರಿತು ಮಾಹಿತಿ ನೀಡಿದ್ದಾರೆ. “ಎರಡೂ ರಾಜ್ಯಗಳ ನಡುವೆ

ಅಂತರರಾಜ್ಯ ಸಂಚಾರಕ್ಕೆ ದಕ್ಷಿಣ ಕನ್ನಡ – ಕೇರಳ ಗಡಿ ಓಪನ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೆಸುವಿನ ಎಲೆಯ ಖಾದ್ಯಕ್ಕೆ ಕಂಗಾನ ಬೌಲ್ಡ್ ➤ ಕರಾವಳಿಯ ಪತ್ರೋಡೆ ಸವಿದ ನಟಿ

(ನ್ಯೂಸ್ ಕಡಬ) newskadaba.com ಆ,16: ಕರಾವಳಿಯ ಖಾದ್ಯ ಪತ್ರೋಡೆಯನ್ನು ಬಾಲಿವುಡ್ ನಟಿ ಕಂಗನಾ ರಾಣಾವತ್ ಸವಿದಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.ಮಳೆಗಾಲದಲ್ಲಿ ತುಳುನಾಡಿನ ಗದ್ದೆ, ತೋಟಗಳಲ್ಲಿ ಯಥೇಚ್ಚವಾಗಿ ಬೆಳೆಯುವ ಕೆಸುವಿನ ಎಲೆಯ ಖಾದ್ಯಕ್ಕೆ ಕಂಗನಾ ರಾಣಾವತ್ ಬೌಲ್ಡ್ ಆಗಿದ್ದಾರೆ. ತುಳುನಾಡಿನ ಖಾದ್ಯ ಪತ್ರೊಡೆಯ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕಂಗನಾ ಬರೆದುಕೊಂಡಿದ್ದಾರೆ.       ಹಿಮಾಚಲ ಪ್ರದೇಶದ ಕಂಗನಾಳಿಗೂ ಕೆಸುವಿನ ಪತ್ರೊಡೆ ಅಂದರೆ ಇಷ್ಟ. ತಮ್ಮ ತಾಯಿ ಪತ್ರೊಡೆಯನ್ನು ತಯಾರು ಮಾಡಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ

ಕೆಸುವಿನ ಎಲೆಯ ಖಾದ್ಯಕ್ಕೆ ಕಂಗಾನ ಬೌಲ್ಡ್ ➤ ಕರಾವಳಿಯ ಪತ್ರೋಡೆ ಸವಿದ ನಟಿ Read More »

ಅಡುಗೆ, ರಾಷ್ಟ್ರೀಯ ನ್ಯೂಸ್
Scroll to Top