ಮಂಗಳೂರು

ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್ ಕಡ್ಡಾಯ ➤ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.01.  ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್‍ಗಳನ್ನು ಕಡ್ಡಾಯಗೊಳಿಸುವ ನಿರ್ಣಯ ಕೈಗೊಂಡಿದ್ದು ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಂಗಳವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಕರಾವಳಿ ಮೀನುಗಾರಿಕೆ ಕುರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮೀನುಗಾರರ ರಕ್ಷಣೆ ಹಾಗೂ ಅವರ ಮಾಹಿತಿಯನ್ನು ಕಲೆ ಹಾಕುವ ದೃಷ್ಠಿಯಿಂದ ಕ್ಯೂ ಆರ್ ಕೋಡ್ ಆಧಾರಿತ ಬಯೋಮೆಟ್ರಿಕ್ ಕಾರ್ಡ್‍ಗಳನ್ನು […]

ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್ ಕಡ್ಡಾಯ ➤ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ

ಗಾಯಕಿ ಎಸ್‌. ಜಾನಕಿ ಆರೋಗ್ಯವಾಗಿದ್ದಾರೆ ➤ ಎಸ್ ಪಿ ಬಿ ಸ್ಪಷ್ಟನೆ 

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.01:ಗಾನಕೋಗಿಲೆ, ಬಹುಭಾಷಾ ಗಾಯಕಿ ಎಸ್‌. ಜಾನಕಿ ನಿಧನರಾಗಿದ್ದಾರೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಖ್ಯಾತ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರು ಸ್ಪಷ್ಟನೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಎಸ್‌ ಜಾನಕಿಯವರ ನಿಧನ ಸುದ್ದಿ ಸುಳ್ಳಾಗಿದ್ದು ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.     ಎಸ್.‌ ಜಾನಕಿಯವರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾನುವಾರ ರಾತ್ರಿಯಿಂದ ಸುಳ್ಳು ಸುದ್ದಿ ಹರಿದಾಡುತ್ತಿದ್ದು ಇದೀಗ ಈ ಬಗ್ಗೆ ಎಸ್‌ಪಿಬಿ ಸ್ಪಷ್ಟನೆ ನೀಡಿದ್ದಾರೆ. ಜಾನಕಿ ಅಮ್ಮನವರ ಬಗ್ಗೆ ಸುಳ್ಳು

ಗಾಯಕಿ ಎಸ್‌. ಜಾನಕಿ ಆರೋಗ್ಯವಾಗಿದ್ದಾರೆ ➤ ಎಸ್ ಪಿ ಬಿ ಸ್ಪಷ್ಟನೆ  Read More »

ಕರಾವಳಿ, ಕರ್ನಾಟಕ

ಟಿಕ್ ಟಾಕ್ ನಿಷೇಧದ ಬೆನ್ನಲ್ಲೇ ಭಾರತದ ಚಿಂಗಾರಿ ಆ್ಯಪ್ ಗೆ ಭಾರಿ ಬೇಡಿಕೆ ➤ ಗಂಟೆಗೆ 1 ಲಕ್ಷ ಡೌನ್ ಲೋಡ್

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.01: ಭಾರತದಲ್ಲಿ ಟಿಕ್ ಟಾಕ್ ನಿಷೇಧಗೊಂಡ ಬೆನ್ನಲ್ಲೇ, ಅದೇ ಮಾದರಿಯ ಭಾರತೀಯ ಆಪ್ ಗಳಿಗೆ ಬೇಡಿಕೆ ಹೆಚ್ಚಿದೆ. ಈ ಪೈಕಿ ಅತ್ಯಂತ ಲಾಭ ಪಡೆದಿರುವುದು ಬೆಂಗಳೂರು ಮೂಲದ ಯುವಕರು ಪ್ರಾರಂಭಿಸಿರುವ ಚಿಂಗಾರಿ ಆಪ್. ಟಿಕ್ ಟಾಕ್ ನಿಷೇಧದ ಬೆನ್ನಲ್ಲೇ ಚಿಂಗಾರಿ ಆಪ್ ಡೌನ್ ಲೋಡ್ ಗೆ ಜನರು ಮುಗಿಬಿದ್ದಿದ್ದು ಪ್ರತಿ ಗಂಟೆಗೆ 1 ಲಕ್ಷ ಡೌನ್ ಲೋಡ್ ಹಾಗೂ 2 ಮಿಲಿಯನ್ ವೀಕ್ಷಣೆಗಳನ್ನು ಹೊಂದಿದೆ. ಟಿಕ್ ಟಾಕ್ ನಿಷೇಧಕ್ಕೂ ಮುನ್ನವೇ ಚಿಂಗಾರಿ ಆಪ್

ಟಿಕ್ ಟಾಕ್ ನಿಷೇಧದ ಬೆನ್ನಲ್ಲೇ ಭಾರತದ ಚಿಂಗಾರಿ ಆ್ಯಪ್ ಗೆ ಭಾರಿ ಬೇಡಿಕೆ ➤ ಗಂಟೆಗೆ 1 ಲಕ್ಷ ಡೌನ್ ಲೋಡ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನ ➤ ಹೆಣ್ಣು ಮರಿಗೆ ಜನ್ಮ ನೀಡಿದ ‘ಲಕ್ಷ್ಮೀ’

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜು.01: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಹೌದು ಮಂಜುನಾಥನ ಸನ್ನಿಧಿ ಗೆ ಇಂದು ಪುಟ್ಟ, ಪುಟ್ಟ ಹೆಜ್ಜೆಯನಿಟ್ಟು, ಮುದ್ದಾದ ಪುಟ್ಟ ಲಕ್ಷ್ಮೀ ಆಗಮಿಸಿದ್ದಾಳೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಹೆಸರಿನ ಆನೆ ಇಂದು ಮುಂಜಾನೆ ಹೆಣ್ಣು ಮರಿಗೆ ಜನ್ಮ ನೀಡಿದೆ.   ಮಾವುತರು ಆನೆ ಮರಿಗೆ ಉಪಚಾರ ನಡೆಸುತ್ತಿದ್ದು, ಆನೆ ಮರಿ ಆರೋಗ್ಯವಾಗಿದೆ ಎನ್ನಲಾಗಿದೆ. ಸಚಿವ ಆನಂದ್ ಸಿಂಗ್ ಅವರು ಧರ್ಮಸ್ಥಳಕ್ಕೆ ಈ ಆನೆಯನ್ನು ನೀಡಿದ್ದರು. ತುಂಟಾಟದಿಂದ ಧರ್ಮಸ್ಥಳದಲ್ಲಿ ಲಕ್ಷ್ಮೀ ಅಚ್ಚುಮೆಚ್ಚಾಗಿತ್ತು. ಧರ್ಮಸ್ಥಳದ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನ ➤ ಹೆಣ್ಣು ಮರಿಗೆ ಜನ್ಮ ನೀಡಿದ ‘ಲಕ್ಷ್ಮೀ’ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಕರಾವಳಿ ,ಜು.01: ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಏಳುತ್ತಿರುವುದರಿಂದ ಇನ್ನೂ 5 ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.    ದಕ್ಷಿಣ ಕನ್ನಡ,ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ತುಮಕೂರು, ಧಾರವಾಡ,ಶಿವಮೊಗ್ಗ, ಸೇರಿದಂತೆ 15 ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.  

ಕರಾವಳಿಯಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ತೆಂಕಿಲ : ಬೃಹತ್ ಗಾತ್ರದ ಮಾವಿನ ಮರ ಬಿದ್ದು ಅಪಾರ ಹಾನಿ

(ನ್ಯೂಸ್ ಕಡಬ) newskadaba.com ತೆಂಕಿಲ ,ಜೂ.30:  ತೆಂಕಿಲ ಕೊಟ್ಟಿಬೆಟ್ಟು ಎಂಬಲ್ಲಿ ಸೋಮವಾರ ಸಂಜೆ ವೇಳೆ ಭಾರಿ ಗಾತ್ರದ ಮಾವಿನ ಮರವೊಂದು  ಬುಡ ಸಹಿತ ಮುರಿದು ಬಿದ್ದು, ದೈವದ ಕಟ್ಟೆಯ ಕಾಂಪೌಂಡ್ ಹಾಗೂ ಮನೆಗೆ ಹಾನಿಯಾಗಿದ್ದು ಜೊತೆಗೆ ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಕಾರು ಸಂಪೂರ್ಣ ಜಖಂಗೊಂಡಿರುವ ಘಟನೆ ಸೋಮವಾರದಂದು ನಡೆದಿದೆ. ತೆಂಕಿಲ ಕೊಟ್ಟಿಬೆಟ್ಟು ಎಂಬಲ್ಲಿರುವ ಪುರುಷೋತ್ತಮ ನಾಯ್ಕ್ ಎಂಬುವರ ಮನೆಯ ಬಳಿ ಘಟನೆ ನಡೆದಿದೆ. ಇವರ ಮನೆ ಬಳಿ ಕೊಟ್ಟಿಬೆಟ್ಟು ಕುಟುಂಬದ ತರವಾಡಿನ ಗುಳಿಗ ಹಾಗೂ ಬೈರವ ದೈವದ

ತೆಂಕಿಲ : ಬೃಹತ್ ಗಾತ್ರದ ಮಾವಿನ ಮರ ಬಿದ್ದು ಅಪಾರ ಹಾನಿ Read More »

ಕರಾವಳಿ, ಕರ್ನಾಟಕ

ಕೊಂಬಾರು :ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ,ಜೂ.30:  ಕೊಂಬಾರು ಗ್ರಾಮ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣಗೊಂಡ ಭಾರತ್ ನಿರ್ಮಾಣ್ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಆದಿತ್ಯವಾರದಂದು ನಡೆಯಿತು.   ಗ್ರಾಮ ಪಂಚಯತ್ ಅಧ್ಯಕ್ಷರಾದ ಅಜಿತ್ ಎಸ್.ರವರು ಕಟ್ಟಡ ಉದ್ಘಾಟಿಸಿದರು. ತಾ. ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಢಾರಿ, ಕಡಬ ಕ್ಷೇತ್ರದ ಜಿ. ಪಂ ಸದಸ್ಯ ಪಿ.ಪಿ ವರ್ಗೀಸ್, ಕೋ- ಆರ್ಡಿನೇಟರ್, ಕಟ್ಟಡ ನಿರ್ಮಾಣಕ್ಕೆ ಸಮಾಗ್ರಿ ಸರಬರಾಜುದಾರರು, ಗ್ರಾಮ

ಕೊಂಬಾರು :ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡದ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಇಂದು ಸಂಜೆ 4ಕ್ಕೆ ಮೋದಿ ಭಾಷಣ ➤ ಎಲ್ಲರ ಚಿತ್ತ ಪ್ರಧಾನಿಯತ್ತ

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.30:  ಮಂಗಳವಾರ ಪ್ರಧಾನ ನರೇಂದ್ರ ಮೋದಿ ಅವರು ಮತ್ತೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿ ಟ್ವಿಟರ್ ಖಾತೆ ಮಾಹಿತಿ ಹಂಚಿಕೊಂಡಿದ್ದು, ಸಂಜೆ 4 ಗಂಟೆಗೆ ಪ್ರಧಾನಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ. ಒಂದನೇ ಹಂತದ ಅನ್ಲಾಕ್ ಪ್ರಕ್ರಿಯೆಯ ದಿನ ಕೊನೆಗೊಳ್ಳುವ ದಿನದಂತೆ ಪ್ರಧಾನಿ ಮೋದಿ ಭಾಷಣ ಮಾಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇನ್ನು ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ಒಂದೇ ದಿನ 18584 ಪ್ರಕರಣಗಳು

ಇಂದು ಸಂಜೆ 4ಕ್ಕೆ ಮೋದಿ ಭಾಷಣ ➤ ಎಲ್ಲರ ಚಿತ್ತ ಪ್ರಧಾನಿಯತ್ತ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವೆನ್ಲಾಕ್ ಭರ್ತಿಯಾದರೆ ಖಾಸಗಿಗೆ ಶಿಫ್ಟ್ ➤ ಸಂಸದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.30: ಜಿಲ್ಲೆಯಲ್ಲಿ ಕರೊನಾ ರೋಗಿಗಳ ಸಂಖ್ಯೆ ಏರಿಕೆಯಲ್ಲಿರುವುದರಿಂದ ವೆನ್ಲಾಕ್ ಸಾಮರ್ಥ್ಯ ಮೀರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಹೆಚ್ಚುವರಿ ಬೆಡ್‌ಗಳನ್ನು ಕಾದಿರಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಆರೋಗ್ಯ ಇಲಾಖೆಗೆ ಸೂಚಿಸಿದರು.     ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೋವಿಡ್-19 ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ನಿವೃತ್ತಿ ಹೊಂದಿದ ಎಂಬಿಬಿಎಸ್ ಅಥವಾ ಆಯುಷ್ ವೈದ್ಯಾಧಿಕಾರಿಗಳನ್ನು ಸರ್ಕಾರದ ಮಾರ್ಗಸೂಚಿ ಅನುಸಾರ ಕರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಬಹುದು. ನರ್ಸಿಂಗ್ ಸಿಬ್ಬಂದಿ

ವೆನ್ಲಾಕ್ ಭರ್ತಿಯಾದರೆ ಖಾಸಗಿಗೆ ಶಿಫ್ಟ್ ➤ ಸಂಸದ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ, ಕರ್ನಾಟಕ

ಸುಳ್ಯ:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ,ಜೂ.30:  ಸುಳ್ಯದ ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿ ಕುಮಾರ್ ಬೆಳ್ವಪ್ಪಾಡ ಎಂಬುವರು ಇಂದು ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.   ಮೃತರಿಗೆ 62 ವರುಷ ವಯಸ್ಸಾಗಿತ್ತು. ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ.  

ಸುಳ್ಯ:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top