ಮಂಗಳೂರು

ಬಂಟ್ವಾಳ: ಜನಸೇವೆಗೆ ಶೃಂಗಾರಗೊಳ್ಳುತ್ತಿದೆ ಶಾಸಕರ ಕಚೇರಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.20. ಅತ್ತ ಬೆಂಗಳೂರಿನಲ್ಲಿ ಸಿಎಂ ಪ್ರಮಾಣ ವಚನಕ್ಕೆ ಇಡೀ ಬೆಂಗಳೂರು ಸಜ್ಜುಗೊಳ್ಳುತ್ತಿದ್ದರೆ, ಇತ್ತ ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಶಾಸಕರ ಕಚೇರಿ ಶೃಂಗಾರಗೊಳ್ಳುತ್ತಿದೆ. ಅವರು ಕಳೆದ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಾಸಕರ ಕಚೇರಿಯಲ್ಲಿಯೇ ಈ ಬಾರಿ ಕೂಡ ಶಾಸಕರ ಕಚೇರಿ ಕಾರ್ಯಚರಿಸಲಿದ್ದು ಜನಸೇವೆ ನೀಡಲು ಸಜ್ಜಾಗುತ್ತಿದೆ.  

ಬಂಟ್ವಾಳ: ಜನಸೇವೆಗೆ ಶೃಂಗಾರಗೊಳ್ಳುತ್ತಿದೆ ಶಾಸಕರ ಕಚೇರಿ Read More »

ಕರಾವಳಿ

ಉಡುಪಿ: ದ್ವಿಚಕ್ರ ವಾಹನ ಖರೀದಿಸಲು ಹೋಗಿ ವ್ಯಕ್ತಿಯೊಬ್ಬರಿಗೆ 69 ಸಾವಿರ ವಂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಮೇ.20. ಆನ್‌ಲೈನ್ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಸಲು ಹೋಗಿ ವ್ಯಕ್ತಿಯೊಬ್ಬರು ವಂಚನೆಗೆ ಒಳಗಾದ ಘಟನೆ ಉಡುಪಿಯ ನಡೆದಿದೆ. ರಾಜೇಶ್ ಅಮೀನ್ ಎನ್ನುವವರು ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀಸುವ ಉದ್ದೇಶದಿಂದ ಆನ್‌ಲೈನ್‌‌ನಲ್ಲಿ ಓಲಾ ಎಲೆಕ್ಟ್ರಿಕಲ್ ಮೊಬಿಲಿಟಿ ಪ್ರೈ.ಲಿಮಿಟೆಡ್(OLA Electrical Mobility Prv.ltd)ಎಂಬ ವೆಬ್‌ಸೈಟ್‌ನಲ್ಲಿ ಹುಡುಕಾಡಿದ್ದಾರೆ. ಈ ಸಂದರ್ಭ ವೆಬ್‌ಸೈಟ್‌ನಲ್ಲಿ ದೊರಕಿದ ದೂರವಾಣಿ ಸಂಖ್ಯೆಗೆ ಸಂಪರ್ಕಿಸಿದಾಗ ಅಪರಿಚಿತ ವ್ಯಕ್ತಿ ಬ್ಯಾಂಕಿನ ವಿವರ ಮುಂಗಡವಾಗಿ ಹಣ ಪಾವತಿಸುವಂತೆ ತಿಳಿಸಿದ್ದಾನೆ.  

ಉಡುಪಿ: ದ್ವಿಚಕ್ರ ವಾಹನ ಖರೀದಿಸಲು ಹೋಗಿ ವ್ಯಕ್ತಿಯೊಬ್ಬರಿಗೆ 69 ಸಾವಿರ ವಂಚನೆ Read More »

ಕರಾವಳಿ

ಮಂಗಳೂರು: ನರ್ಸಿಂಗ್‌ ವಿದ್ಯಾರ್ಥಿನಿ ನಾಪತ್ತೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.20. ಪ್ರಥಮ ವರ್ಷದ ನರ್ಸಿಂಗ್‌ ವ್ಯಾಸಂಗ ಮಾಡುತ್ತಿದ್ದ ಆಸ್ಮಾ ಬಾನೊ ಮೇ.15ರಂದು ಕಾಣೆಯಾದ ಬಗ್ಗೆ ದೂರು ದಾಖಲಾಗಿದೆ. ಮನೆಯಿಂದ ವ್ಯಾಸಂಗ ಮಾಡುತ್ತಿದ್ದ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ತೆರಳಿದ್ದರು. ಅನಂತರ ಮನೆಗೆ ಬರಲಿಲ್ಲ. 18 ವರ್ಷದ ಅವರು ಕನ್ನಡ, ಇಂಗ್ಲಿಷ್‌, ಹಿಂದಿ ಭಾಷೆ ಬಲ್ಲರು. ಈ ಬಗ್ಗೆ ಕಾಣೆಯಾದವರ ತಂದೆ ಮಹಮ್ಮದ್‌ ಖಾಲಿಕ್‌ ಅವರು ಮಂಗಳೂರು ಪೂರ್ವ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಮಂಗಳೂರು ಪೂರ್ವ ಪೊಲೀಸ್‌

ಮಂಗಳೂರು: ನರ್ಸಿಂಗ್‌ ವಿದ್ಯಾರ್ಥಿನಿ ನಾಪತ್ತೆ..! Read More »

ಕರಾವಳಿ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌ ➤ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಎಚ್ಚರಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.18. ಕರ್ನಾಟಕ ವಿಧಾನಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿರುವುದು ಕಂಡು ಬರುತ್ತಿದ್ದು, ಇಂತಹ ಪೋಸ್ಟ್‌ಗಳನ್ನು ಹಾಕುವ ಅಥವಾ ಫಾರ್ವರ್ಡ್‌ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಜಾತಿ, ಧರ್ಮ ಮತ್ತು ಪ್ರದೇಶ ಆಧಾರಿತವಾಗಿ ಶಾಂತಿ ಮತ್ತು ಸೌಹಾರ್ದತೆಗೆ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌ ➤ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಎಚ್ಚರಿಕೆ Read More »

ಕರಾವಳಿ

ಕರಾವಳಿಯಾದ್ಯಂತ ಗುಡುಗು ಸಹಿತ ಸಾಧರಣ ಮಳೆಯಾಗುವ ಸಾಧ್ಯತೆ     ➤ ಹವಾಮಾನ ‌ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.21. ಮಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಅಥವಾ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ‌ಇಲಾಖೆ ನೀಡಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ವಾಡಿಕೆಗಿಂತ 2ರಿಂದ 3 ಡಿಗ್ರಿ

ಕರಾವಳಿಯಾದ್ಯಂತ ಗುಡುಗು ಸಹಿತ ಸಾಧರಣ ಮಳೆಯಾಗುವ ಸಾಧ್ಯತೆ     ➤ ಹವಾಮಾನ ‌ಇಲಾಖೆ ಮುನ್ಸೂಚನೆ Read More »

ಕರಾವಳಿ

ಕಡಬ: ಮರ್ಧಾಳ ನಿವಾಸಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ)newskadaba.com  ಕಡಬ, ಏ.11. ಕಡಬ ತಾಲೂಕಿನ ಮರ್ಧಾಳ ನಿವಾಸಿ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು  ಕಡಬ ಮರ್ಧಾಳ ನಿವಾಸಿ ಶಫೀಕ್ (40) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಯಲಹಂಕದ ಸೂಪರ್ ಮಾರ್ಕೆಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು.  

ಕಡಬ: ಮರ್ಧಾಳ ನಿವಾಸಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ವಿವಿಧೆಡೆ ಪೋಲಿಸರಿಂದ ಪಥ ಸಂಚಲನ

(ನ್ಯೂಸ್ ಕಡಬ)newskadaba.com ಉಡುಪಿ, ಏ.07. ಉಡುಪಿ ಜಿಲ್ಲೆಯ ವಿವಿಧೆಡೆ ಚುನಾ ವಣೆ ಪೂರ್ವಭಾವಿಯಾಗಿ ಪ್ಯಾರಾ ಮಿಲಿಟರಿ ಪಡೆ, ಪೊಲೀಸ್ ಅಧಿಕಾರಿಗಳು ಹಾಗೂ ಸಿಬಂದಿ ಜಿಲ್ಲೆಯ ವಿವಿಧೆಡೆ ಪಥ ಸಂಚಲನ ನಡೆಸಿದರು ಎಂದು ವರದಿಯಾಗಿದೆ. ಉಡುಪಿ ವಿಧಾನಸಭಾ ಕ್ಷೇತ್ರಕ್ಕೊಳಪಡುವ ಮಲ್ಪೆ, ಕಾಪು ವಿಧಾನಸಭಾ ಕ್ಷೇತ್ರಕ್ಕೊಳಪಡುವ ಕಾಪು ಪ್ರದೇಶ, ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೊಳಪಡುವ ಬೈಲೂರು ಹಾಗೂ ಕಾರ್ಕಳ ಪೇಟೆ, ಬೈಂದೂರು ವಿಧಾನಸಭಾ ಕ್ಷೇತ್ರಕ್ಕೊಳಪಡುವ ಶಿರೂರು ಭಾಗ ಗಳಲ್ಲಿ ಪಥಸಂಚಲನ ಮಾಡಲಾಯಿತು.  

ಉಡುಪಿ: ವಿವಿಧೆಡೆ ಪೋಲಿಸರಿಂದ ಪಥ ಸಂಚಲನ Read More »

ಕರಾವಳಿ

ಉಜಿರೆ: ಯುವಕನ ಮೇಲೆ ಹಲ್ಲೆ ಪ್ರಕರಣ ➤ ನಾಲ್ವರ ವಿರುದ್ಧ ಕೇಸ್ ದಾಖಲು

 (ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.05. ಬಸ್ಸಿನಲ್ಲಿ ಪರಿಚಯಸ್ಥ ಸಹಪ್ರಯಾಣಿಕ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಸ್ ತಡೆದು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ನಾಲ್ವರ ಮೇಲೆ ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ನಿತೇಶ್, ಸಚಿನ್, ಅವಿನಾಸ್ ಮತ್ತು ದಿನೇಶ್ ಮೇಲೆ ಕೇಸ್ ದಾಖಲಿಸಲಾಗಿದೆ.  

ಉಜಿರೆ: ಯುವಕನ ಮೇಲೆ ಹಲ್ಲೆ ಪ್ರಕರಣ ➤ ನಾಲ್ವರ ವಿರುದ್ಧ ಕೇಸ್ ದಾಖಲು Read More »

ಕರಾವಳಿ

ಕಾಸರಗೋಡು: ಲಾರಿ-ಬೈಕ್ ಢಿಕ್ಕಿ..!     ➤ ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.29. ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ. ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟವನು ಎಂದು ತಿಳಿದುಬಂದಿದೆ. ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಆದಿಲ್ ಕುಂಬಳೆಯ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಪರೀಕ್ಷೆ ಬರೆದು ಮರಳುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಆದಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣವನ್ನುದಾಖಲಿಸಿಕೊಂಡಿದ್ದಾರೆ.  

ಕಾಸರಗೋಡು: ಲಾರಿ-ಬೈಕ್ ಢಿಕ್ಕಿ..!     ➤ ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ವಿದ್ಯಾರ್ಥಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ; ಮೈಸೂರಲ್ಲಿ ಎನ್‌ಐಎ ದಾಳಿ       ➤ ಅಪಾರ ಪ್ರಮಾಣದ ಡಿಜಿಟಲ್ ಸಾಮಗ್ರಿ ಜಪ್ತಿ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.16. ಕಳೆದ ವರ್ಷ ಅ.23ರಂದು ತಮಿಳುನಾಡಿನ ಕೊಯಮತ್ತೂರು ಮತ್ತು ನ.19ರಂದು ಕರ್ನಾಟಕದ ಮಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು 3 ರಾಜ್ಯಗಳ 40 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ದಾಳಿ ನಡೆದ ಸ್ಥಳಗಳಲ್ಲಿ ಕರ್ನಾಟಕದ ಮೈಸೂರು ಸೇರಿದೆ. ದಾಳಿ ವೇಳೆ ಅಪಾರ ಪ್ರಮಾಣದ ಡಿಜಿಟಲ್‌ ಸಾಮಗ್ರಿ, ಆಧಾರ್‌ ಕಾರ್ಡ್‌, ಸಿಮ್‌ ಕಾರ್ಡ್‌, ಮೊಬೈಲ್‌, ಲ್ಯಾಪ್‌ಟಾಪ್‌ ಮತ್ತು 4 ಲಕ್ಷ ರು. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ; ಮೈಸೂರಲ್ಲಿ ಎನ್‌ಐಎ ದಾಳಿ       ➤ ಅಪಾರ ಪ್ರಮಾಣದ ಡಿಜಿಟಲ್ ಸಾಮಗ್ರಿ ಜಪ್ತಿ Read More »

ಕರಾವಳಿ, ಕರ್ನಾಟಕ
Scroll to Top