ಮಂಗಳೂರು

ಹಿರಿಯ ಪತ್ರಕರ್ತ, ರಂಗಕರ್ಮಿ ಕೆ.ಆರ್. ಪ್ರಕಾಶ್ ನಿಧನ

(ನ್ಯೂಸ್ ಕಡಬ) newskadaba.com ಶಿರಸಿ ನ. 19: ಹಿರಿಯ ಪತ್ರಕರ್ತ, ನಾಟಕಕಾರ ಹಾಗೂ ನಾಟಕ ಅಕಾಡೆಮಿ ಸದಸ್ಯರಾಗಿದ್ದ ಕೆ.ಆರ್. ಪ್ರಕಾಶ್ (50) ಅನಾರೋಗ್ಯದಿಂದ ಬುಧವಾರ ತಡ ರಾತ್ರಿ ನಿಧನ ಹೊಂದಿದರು. ಯಲ್ಲಾಪುರ ತಾಲೂಕಿನ ಹೆಮ್ಮಾಡಿ ಸಮೀಪದ ಕಾನಕೊಡ್ಲು ಮೂಲದವರಾದ ಅವರು ಶಿರಸಿಯಲ್ಲಿ ಬಹುಕಾಲ ವರದಿಗಾರರಾಗಿದ್ದರು. ನಾಟಕಗಳಲ್ಲಿ ನಟನೆ, ರಚನೆ ಹಾಗೂ ನಿರ್ದೇಶನದಲ್ಲಿ ಪ್ರಸಿದ್ಧರಾಗಿದ್ದರು. ಪ್ರಪಾತ, ಕೆರೆ ಸೇರಿದಂತೆ ನಿಸರ್ಗ ಮಧ್ಯದಲ್ಲಿ ನಾಟಕದಂಥ ಹೊಸ ಪ್ರಯೋಗ ಮಾಡಿ ಯಶಸ್ಸು ಕಂಡಿದ್ದರು. ಕಳೆದ ಒಂದು ವರ್ಷದಿಂದ ನಾಟಕ ಅಕಾಡೆಮಿ ಸದಸ್ಯರಾಗಿ ಕಾರ್ಯ […]

ಹಿರಿಯ ಪತ್ರಕರ್ತ, ರಂಗಕರ್ಮಿ ಕೆ.ಆರ್. ಪ್ರಕಾಶ್ ನಿಧನ Read More »

ಕರಾವಳಿ

ಕೌಟುಂಬಿಕ ಕಲಹದಲ್ಲಿ ಪತ್ನಿ ಕೊಂದ ಪತಿಯ ಬಂಧನ

(ನ್ಯೂಸ್ ಕಡಬ) newskadaba.com ತುಮಕೂರು ನ. 19: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಅಮಾನುಷವಾಗೆ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಇಂದು ಮುಂಜಾನೆ ನಡೆದಿದೆ. ಚಾಂದುಪಾಷ ಎಂಬ ವ್ಯಕ್ತಿ ತನ್ನ ಪತ್ನಿ ಜಬೀನ (40)ಳನ್ನು ಕೊಲೆಗೈದಿದ್ದಾರೆ. ಜಬೀನ ಮತ್ತು ಮಗ ಮಹಮ್ಮದ್ ಅಲಿ(12) ಮನೆಯಲ್ಲಿ ಮಲಗಿದ್ದ ಸಮಯದಲ್ಲಿ ಚಾಂದ್ ಪಾಷ ದೊಣ್ಣೆಯಿಂದ ಇಬ್ಬರ ತಲೆಗೆ ಹೊಡೆದು ಸಾಯಿಸುವ ಪ್ರಯತ್ನ ಮಾಡಿದ್ದಾನೆ ಎಂದು ಪೋಲೀಸರು ತಿಳಿಸಿದ್ದಾರೆ.   ದೊಣ್ಣೆಯಿಂದ ಹೊಡೆದ ರಭಸಕ್ಕೆ ಪತ್ನಿ ಜಬೀನ ಸ್ಥಳದಲ್ಲಿಯೇ

ಕೌಟುಂಬಿಕ ಕಲಹದಲ್ಲಿ ಪತ್ನಿ ಕೊಂದ ಪತಿಯ ಬಂಧನ Read More »

ಕರಾವಳಿ

ಶ್ರೀನಗರ: ಎನ್‌ಕೌಂಟರ್‌ ➤ ನಾಲ್ವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಶ್ರೀನಗರ: , ನ. 19. ಇಂದು ಜಮ್ಮುನಿನ ನಾಗ್ರೋಟಾದ ಬಾನ್ ಟೋಲ್ ಪ್ಲಾಜಾದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿ ನಾಲ್ವರು ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ.     ಜಮ್ಮು -ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಸಂಚಾರ ತಡೆದು ನಾಕಾ ಬಂದಿ ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರ ಗುಂಪು, ನಂತರ ಅರಣ್ಯ ಪ್ರದೇಶದ ಕಡೆಗೆ ಓಡಿಹೋದರು. ಕೂಡಲೇ ಭದ್ರತಾ ಪಡೆ ಎನ್

ಶ್ರೀನಗರ: ಎನ್‌ಕೌಂಟರ್‌ ➤ ನಾಲ್ವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ Read More »

ರಾಷ್ಟ್ರೀಯ ನ್ಯೂಸ್

ಭೀಕರ ರಸ್ತೆ ಅಪಘಾತ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 19. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಳಿ ಇಂದು ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿರುವ ಪರಿಣಾಮದಿಂದಾಗಿ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಢಿಕ್ಕಿ ಹೊಡೆದ ಪರಿಣಾಮದಿಂದಾಗಿ ಬೈಕ್ ನಲ್ಲಿದ್ದ ಸವಾರ ಹಾಗೂ ಓಮ್ನಿ ಕಾರಿನ ಚಾಲಕ ಸುನೀಲ್(28) ಸ್ಥಳದಲ್ಲೇ ಮೃತಪಟ್ಟಿದ್ದಾರೆ.   ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ ಹಿನ್ನಲೆಯಿಂದಾಗಿ ಓಮ್ನಿ ಕಾರಿನ ಹಿಂದೆ ಬರುತ್ತಿದ್ದ ಬೈಕ್ ಓಮ್ನಿಗೆ ಢಿಕ್ಕಿ ಹೊಡೆದಿದ್ದು, ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ

ಭೀಕರ ರಸ್ತೆ ಅಪಘಾತ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಸುಳ್ಯ: ಕೆ.ವಿ.ಜಿ. ಪಾಲಿಟೆಕ್ನಿಕ್ ಉದ್ಯೋಗಿ ಶ್ರೀನಿವಾಸ ಕೆ.ಎಸ್. ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ನ. 19. ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ಸುಳ್ಯ ಇಲ್ಲಿನ ಇಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಮೆಕ್ಯಾನಿಕ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀನಿವಾಸ ಕೆ.ಎಸ್(56) ರವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.     ಕಳೆದ ದಿನ ಸಂಜೆ ರಕ್ತದೊತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಶ್ರೀನಿವಾಸರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಕರಿಯಾಗದೇ ಇಂದು ಮುಂಜಾನೆ ನಿಧನರಾಗಿರುತ್ತಾರೆ. ಮೃತರು ಪತ್ನಿ, ಶ್ರೀಮತಿ ಶಾರದಾ ಇಬ್ಬರು ಪುತ್ರರು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.  

ಸುಳ್ಯ: ಕೆ.ವಿ.ಜಿ. ಪಾಲಿಟೆಕ್ನಿಕ್ ಉದ್ಯೋಗಿ ಶ್ರೀನಿವಾಸ ಕೆ.ಎಸ್. ನಿಧನ Read More »

ಕರಾವಳಿ

ಮಂಗಳೂರಿನ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆ ಇತಿಹಾಸದಲ್ಲೇ ದಾಖಲೆ ➤ ಒಂದೇ ತಿಂಗಳಲ್ಲಿ 800 ಶಿಶುಗಳ ಜನನ

(ನ್ಯೂಸ್ ಕಡಬ) newskadaba.com ಮಂಗಳೂರು ನ. 19: ಮಂಗಳೂರಿನ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆ ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ತಿಂಗಳೊಂದರಲ್ಲೇ ಸುಮಾರು 800 ಶಿಶುಗಳು ಜನನವಾಗಿದೆ. ಈ ಮೂಲಕ ದಾಖಲೆ ನಿರ್ಮಿಸಿದೆ. ಲೇಡಿಗೋಷನ್ ಹೆರಿಗೆ ಆಸ್ಪತ್ರೆಯಲ್ಲಿ ಸಾಮಾನ್ಯವಾಗಿ ಪ್ರತಿ ತಿಂಗಳು 400ರಿಂದ 450 ಮಕ್ಕಳ ಜನನವಾಗುತಿತ್ತು. ಕಳೆದ ಸೆಪ್ಟೆಂಬರ್‌ನಲ್ಲಿ ಸುಮಾರು 600 ಶಿಶುಗಳು ಜನಿಸಿದ್ದವು. ಆದರೆ ಅಕ್ಟೋಬರ್ ತಿಂಗಳಿನಲ್ಲಿ ಸುಮಾರು 800 ಶಿಶುಗಳು ಜನಿಸಿದ್ದು ವಿಶೇಷವಾಗಿದೆ. ಈ ಪೈಕಿ 379 ಸಿಸೇರಿಯನ್ ಹೆರಿಗೆಯಾಗಿದ್ರೆ, ಇನ್ನುಳಿದ ಎಲ್ಲವೂ ನಾರ್ಮಲ್ ಡೆಲಿವರಿ

ಮಂಗಳೂರಿನ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆ ಇತಿಹಾಸದಲ್ಲೇ ದಾಖಲೆ ➤ ಒಂದೇ ತಿಂಗಳಲ್ಲಿ 800 ಶಿಶುಗಳ ಜನನ Read More »

ಕರಾವಳಿ

ಮಲ್ಪೆ: ಮಹಿಳೆಯ ಚಿನ್ನದ ಸರ ಕದ್ದೊಯ್ದು ಪರಾರಿ

(ನ್ಯೂಸ್ ಕಡಬ) newskadaba.com ಮಲ್ಪೆ, ನ. 19:  ಮೀನು ಮಾರಾಟ ಮಾಡುವುದಕ್ಕಾಗಿ ಮನೆಯಿಂದ ಪಡುಕೆರೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಅಪರಿಚಿತನೋರ್ವ ಸ್ಕೂಟರ್ ನಲ್ಲಿ ಹಿಂದಿನಿಂದ ಬಂದು ಕುತ್ತಿಗೆಗೆ ಕೈ ಹಾಕಿ ಅವರನ್ನು ದೂಡಿ ಹಾಕಿ ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.   ಮಹಿಳೆಯನ್ನು ಪಡುಕೆರೆ ಕಿದಿಯೂರು ನಿವಾಸಿ ಯಮುನಾ(65) ಎಂದು ಗುರುತಿಸಲಾಗಿದೆ. ಸುಮಾರು 1.19 ಲಕ್ಷ ಮೌಲ್ಯದ ಐದೂವರೆ ಪವನ್ ತೂಕದ ಚಿನ್ನದ ಆಭರಣವೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ಮಹಿಳೆಯ ಚಿನ್ನದ ಸರ ಕದ್ದೊಯ್ದು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕೌಡಿಚಾರು: ರಸ್ತೆಯಲ್ಲಿ ಅಡ್ಡ ಬಂದ ದನಕ್ಕೆ ಬೈಕ್ ಢಿಕ್ಕಿ

(ನ್ಯೂಸ್ ಕಡಬ) newskadaba.com ಕೌಡಿಚಾರು, ನ. 19. ಕಳೆದ ದಿನ ಪುತ್ತೂರು ಕಡೆಯಿಂದ ಸುಳ್ಯದ ಕಡೆಗೆ ಬರುತ್ತಿದ್ದ ಬೈಕೊಂದು ರಸ್ತೆಯಲ್ಲಿ ಅಡ್ಡ ಬಂದ ದನಕ್ಕೆ ಢಿಕ್ಕಿ ಹೊಡೆದು ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.     ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಮರ್ಕಂಜ ಬಳಿಯ ಆರಂತೋಡು ಗ್ರಾಮದ ಪಿಂಡಿಮನೆ ಸಂತೋಷ್ ಮತ್ತು ಪ್ರವೀಣ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವಕರಿಬ್ಬರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.    

ಕೌಡಿಚಾರು: ರಸ್ತೆಯಲ್ಲಿ ಅಡ್ಡ ಬಂದ ದನಕ್ಕೆ ಬೈಕ್ ಢಿಕ್ಕಿ Read More »

ಕರಾವಳಿ

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್ ಕಡಿತ ಅಮಾನವೀಯ ➤ಎನ್‌ಎಸ್‌ಯುಐ ದ.ಕ. ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಖಂಡನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 19:  PHD ಮತ್ತು ಎಂಫಿಲ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್ ಮೊತ್ತವನ್ನು ರಾಜ್ಯ ಸರಕಾರ ಕಡಿತಗೊಳಿಸಿರುವುದನ್ನು ಎನ್‌ಎಸ್‌ಯುಐ ದ.ಕ. ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಖಂಡಿಸಿದ್ದಾರೆ.   PHD ಮಾಡುವವರಿಗೆ ಮೂರು ವರ್ಷ, ಎಂಫಿಲ್ ಮಾಡುವವರಿಗೆ ಎರಡು ವರ್ಷ ಮಾಸಿಕ 25,000 ರೂ. ನೀಡಲಾಗುತ್ತಿದ್ದು, ಕಳೆದ ಹತ್ತು ತಿಂಗಳಿನಿಂದ ಈ ಮೊತ್ತ ಪಾವತಿಸದೆ ಇದೀಗ ಕಡಿತಗೊಳಿಸಿರುವುದಾಗಿ ತಿಳಿಸಿರುವುದು ಅಮಾನವೀಯ. ಕೊರೊನಾ ಸಂದರ್ಭ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಹಲವಾರು ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟು

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್ ಕಡಿತ ಅಮಾನವೀಯ ➤ಎನ್‌ಎಸ್‌ಯುಐ ದ.ಕ. ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಖಂಡನೆ Read More »

ಕರಾವಳಿ

ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹಿಸಿ ಇಂದು ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 19: ಉಳ್ಳಾಲ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಳ್ಳಾಲ ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲಿದೆ.     ನವೆಂಬರ್ 1ರಂದು ಕಿನ್ಯದ ಕೇಶವ ಶಿಶು ಮಂದಿರ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್, ಉಳ್ಳಾಲವನ್ನು ಪಾಕಿಸ್ತಾನವೆಂದು ಕರೆದಿದ್ದರು. ಈ ಹೇಳಿಕೆಗೆ ಸಂಬಂಧಪಟ್ಟಂತೆ ಈಗಾಗಲೇ ಪ್ರಭಾಕರ್ ಭಟ್ ವಿರುದ್ಧ ಉಳ್ಳಾಲ

ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹಿಸಿ ಇಂದು ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ Read More »

ಕರಾವಳಿ
Scroll to Top