ಆರೋಗ್ಯದಲ್ಲಿ ಏರುಪೇರು: ಗಾಳಿ ಸುದ್ದಿಗಳಿಗೆ ಕಿವಿಕೊಡದಂತೆ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು, ಡಿ.11:   ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಬೆಳಗ್ಗೆ  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಯಾವುದೇ ಗಾಳಿ ಸುದ್ದಿಗೆ ಕಿವಿಕೊಡಬೇಡಿ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಈ  ವದಂತಿಯ ಕುರಿತು ಟ್ವೀಟ್‌ ಮಾಡಿರುವ ಅವರು, “ನಾನು ಆರೋಗ್ಯವಾಗಿದ್ದೇನೆ, ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿಸುದ್ದಿಗಳನ್ನು ನಂಬಿ ಆತಂಕ ಪಡುವ ಅಗತ್ಯ ಇಲ್ಲ” ಎಂದು ಹೇಳಿದ್ದಾರೆ. ಸಿದ್ಧರಾಮಯ್ಯ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದ್ದು ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದೊತ್ತಡ ಏರಿಕೆಯಾಗಿ, ಎದೆನೋವು ಕಾಣಿಸಿಕೊಂಡಿದೆ ಎಂದು ಸುದ್ದಿಯಾಗಿತ್ತು.

ಆರೋಗ್ಯದಲ್ಲಿ ಏರುಪೇರು: ಗಾಳಿ ಸುದ್ದಿಗಳಿಗೆ ಕಿವಿಕೊಡದಂತೆ ಸಿದ್ದರಾಮಯ್ಯ ಟ್ವೀಟ್ Read More »

ಕರ್ನಾಟಕ