BREAKING NEWS ಉಡುಪಿಯಲ್ಲಿ ಇಂದು 62 ಮಂದಿಗೆ ಕೊರೋನ ದೃಢ
ಉಡುಪಿ, ಜೂ.3: ಜಿಲ್ಲೆಯಲ್ಲಿ ಇಂದು ಮತ್ತೆ 62 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 472ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಿಂದ ಬಂದು ಜಿಲ್ಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ ಮಂದಿಗೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಭಾರಿ ಏರಿಕೆ ಕಂಡುಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಅನ್ಯ ರಾಜ್ಯಗಳಿಂದ ಬಂದು ಕ್ವಾರಂಟೈನ್‌ನಲ್ಲಿದ್ದ ಜನರನ್ನು ಕೋವಿಡ್ ವರದಿ ಬರದೆಯೂ ಮನೆಗೆ ಕಳುಹಿಸಲಾಗಿತ್ತು. ಅಂತವರಲ್ಲಿ ಈಗ ಕೋವಿಡ್ ಪಾಸಿಟಿವ್ ಕಂಡುಬರುತ್ತಿದೆ. ಇದು ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿದೆ. […]
BREAKING NEWS ಉಡುಪಿಯಲ್ಲಿ ಇಂದು 62 ಮಂದಿಗೆ ಕೊರೋನ ದೃಢ Read More »
ಕರಾವಳಿ
