ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ಮುಂದಿನ 6 ತಿಂಗಳಲ್ಲಿ 72,186 ಸರ್ಕಾರಿ ಹುದ್ದೆಗಳ ಬೃಹತ್ ನೇಮಕಾತಿ!
(ನ್ಯೂಸ್ ಕಡಬ) newskadaba.com, ಜು.16 : ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಒಳಮೀಸಲಾತಿ ಜಾರಿ ಹಿನ್ನೆಲೆಯಲ್ಲಿ ನನೆಗುದಿಗೆ ಬಿದ್ದಿದ್ದ ನೇಮಕಾತಿ ಪ್ರಕ್ರಿಯೆಗಳಿಗೆ ಕೊನೆಗೂ ಚಾಲನೆ ಸಿಕ್ಕಿದ್ದು, ಮುಂದಿನ ಆರು ತಿಂಗಳೊಳಗೆ ಒಟ್ಟು 72,186 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ. 2 ತಿಂಗಳಲ್ಲಿ ಅಧಿಸೂಚನೆ, 4 ತಿಂಗಳಲ್ಲಿ ಆಯ್ಕೆ ಪ್ರಕ್ರಿಯೆ ಪೂರ್ಣ ಹಾಗೂ 6 ತಿಂಗಳೊಳಗೆ ನೇಮಕಾತಿ ಪತ್ರ ವಿತರಿಸಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸುಮಾರು 40,000 ಹುದ್ದೆಗಳ ನೇಮಕಾತಿ ಉಸ್ತುವಾರಿ ಹೊತ್ತಿದೆ. […]

