ಉಳ್ಳಾಲದಲ್ಲಿ ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟಿದ್ದು ದೇಶದ್ರೋಹದ ಕೃತ್ಯ- ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಒತ್ತಾಯ
(ನ್ಯೂಸ್ ಕಡಬ) newskadaba.com ಅ. 22. ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೇ ಓವರ್ ಬ್ರಿಡ್ಜ್ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ. ಚೌಟ, ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ನಾನು […]

