‘ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯನ್ನ ಮುಂದಿಟ್ಟು ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ’- ಸಂಸದ ಕ್ಯಾ. ಚೌಟ ಆಕ್ರೋಶ
(ನ್ಯೂಸ್ ಕಡಬ) newskadaba.com, ಆ.20 ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಮನಸೋ-ಇಚ್ಛೆ ನಿಯಮಗಳನ್ನು ಹೇರಿ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಸೇರಿದಂತೆ ಹಲವು ಹಬ್ಬದ ಆಚರಣೆ ಸಂದರ್ಭ ಧ್ವನಿವರ್ಧಕ ಬಳಸುವುದಕ್ಕೆ ಪೊಲೀಸರು ಅವಕಾಶ ನೀಡದೆ ಷರತ್ತುಗಳನ್ನು ವಿಧಿಸಿ ತೊಂದರೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದರು, ತುಳುನಾಡು ದೈವಾರಾಧನೆ, ಧಾರ್ಮಿಕ ಆಚರಣೆಗಳು, […]

