ಕಾಪು: ಸೇತುವೆಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು
(ನ್ಯೂಸ್ ಕಡಬ) newskadaba.com,ಜ.02 ಕಾಪು: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ಸಂಭವಿಸಿದೆ. ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ತೆರಳುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ರಸ್ತೆಗೆ ಬಿದ್ದ ಸವಾರ ಯುವರಾಜ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. […]
ಕಾಪು: ಸೇತುವೆಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
