ಕಾಸರಗೋಡಿನಲ್ಲಿ ಶನಿವಾರ ಆರು ಮಂದಿಗೆ ಕೊರೋನ ಪಾಸಿಟಿವ್: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 141 ಕ್ಕೇರಿಕೆ

ಕಾಸರಗೋಡು, ಎ.4: ಕೇರಳದ ಇತರ ಜಿಲ್ಲೆಗಳಲ್ಲಿ ಕೊರೋನ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದರೂ ಕಾಸರಗೋಡು ಜಿಲ್ಲೆಯಲ್ಲಿ ಏರಿಕೆಯಾಗುತ್ತಾ ಇದ್ದು, ಶನಿವಾರ ಆರು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ 11 ಪ್ರಕರಣ ಶನಿವಾರ ಪತ್ತೆಯಾಗಿದ್ದು , ಈ ಪೈಕಿ ಆರು ಪ್ರಕರಣ ಕಾಸರಗೋಡಿಗೆ ಸೇರಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 141 ಕ್ಕೇರಿದೆ. ಕಾಸರಗೋಡಿನ ಸೋಂಕಿತರ ಪೈಕಿ ಮೂವರು ದುಬೈಯಿಂದ ಬಂದವರಾಗಿದ್ದು, ಓರ್ವ ನಿಝಾಮುದ್ದೀನ್‌ನಿಂದ ಬಂದವರೆಂದು ಆರೋಗ್ಯ ಇಲಾಖೆ ತಿಳಿಸಿದೆ.

ಕಾಸರಗೋಡಿನಲ್ಲಿ ಶನಿವಾರ ಆರು ಮಂದಿಗೆ ಕೊರೋನ ಪಾಸಿಟಿವ್: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 141 ಕ್ಕೇರಿಕೆ Read More »

ಕರಾವಳಿ