ಕಾಸರಗೋಡು ಜಿಲ್ಲಾಧಿಕಾರಿಗೆ ಕ್ವಾರಂಟೈನ್
ಕಾಸರಗೋಡು, ಎ.29: ಜಿಲ್ಲೆಯಲ್ಲಿ ಬುಧವಾರದಂದು ಪತ್ರಕರ್ತರೊಬ್ಬರಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರಿಗೆ ಕ್ವಾರಂಟೈನ್ ವಿಧಿಸಲಾಗಿದೆ. ಕಾಸರಗೋಡು ಜಿಲ್ಲಾಧಿಕಾರಿ ಮಾತ್ರವಲ್ಲದೆ, ಅವರ ಚಾಲಕ ಹಾಗೂ ಗನ್‌ಮ್ಯಾನ್ ಕೂಡ ನಿಗಾದಲ್ಲಿದ್ದಾರೆ. ಸೋಂಕು ಪತ್ತೆಯಾದ ಪತ್ರಕರ್ತ ಕೆಲ ದಿನಗಳ ಹಿಂದೆ ಜಿಲ್ಲಾಧಿಕಾರಿಯ ಸಂದರ್ಶನ ನಡೆಸಿದ್ದರು. ಇದೀಗ ಪತ್ರಕರ್ತನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ನಿಗಾದಲ್ಲಿರಲು ತೀರ್ಮಾನಿಸಿದ್ದಾರೆ.
ಕಾಸರಗೋಡು ಜಿಲ್ಲಾಧಿಕಾರಿಗೆ ಕ್ವಾರಂಟೈನ್ Read More »
ಕರಾವಳಿ
