ಕೇಂದ್ರ ಸರ್ಕಾರದ ‘ಪಿಎಂ ಶ್ರೀ‘ ಶಾಲೆಯಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯವನ್ನು ಅಧಿಕೃತವಾಗಿ ಘೋಷಿಸಿದ ಸಂಸದ ಕ್ಯಾ. ಚೌಟ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಕೇಂದ್ರ ಸರ್ಕಾರ ಘೋಷಿಸಿರುವ ಮಹತ್ವಾಕಾಂಕ್ಷಿ ‘ಪಿಎಂ ಶ್ರೀ’ ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಸದರು, ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ( ಪಿಎಂಶ್ರೀ) ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಶಾಲೆ ಆಯ್ಕೆಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಈ ಯೋಜನೆಯಡಿ ಶಾಲೆಯಲ್ಲಿ ತಂತ್ರಜ್ಞಾನ ಆಧಾರಿತ ನಾವೀನ್ಯ ಬೋಧನಾ […]

