ಗಣೇಶ ವಿಸರ್ಜನೆಯ ವೇಳೆ ಮೂವರಿಗೆ ಚಾಕು ಇರಿತ
(ನ್ಯೂಸ್ ಕಡಬ) newskadaba.com ಬೆಳಗಾವಿ, ಸೆ. 18. ಗಣೇಶ ವಿಸರ್ಜನೆಯ ವೇಳೆ ನಡೆದ ಚಾಕು ಇರಿತದಿಂದಾಗಿ ಮೂವರು ಗಾಯಗೊಂಡ ಘಟನೆ ಚೆನ್ನಮ್ಮ ವೃತ್ತದ ಬಳಿ ನಡೆದಿದೆ. ಗಾಯಾಳುಗಳನ್ನು ಸಮಾಜ ಕಲ್ಯಾಣ ವಸತಿ ನಿಲಯದ ವಿದ್ಯಾರ್ಥಿಗಳಾದ ಪ್ರವೀಣ್ ಗುಂಡ್ಯಾಗೋಳ್, ದರ್ಶನ್ ಪಾಟೀಲ್ ಮತ್ತು ಸತೀಶ್ ಪೂಜಾರಿ ಎಂದು ಗುರುತಿಸಲಾಗಿದೆ. ಪ್ರವೀಣ್ ಗುಂಡ್ಯಾಗೋಳ್ ಎಂಬವರ ಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಇಬ್ಬರಿಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿರುವುದಾಗಿ ಮೂಲಗಳು ತಿಳಿಸಿವೆ. ಡ್ಯಾನ್ಸ್ ಮಾಡುವಾಗ ಕಾಲು ತಾಕಿದ್ದಕ್ಕೆ ಹುಡುಗರು […]
ಗಣೇಶ ವಿಸರ್ಜನೆಯ ವೇಳೆ ಮೂವರಿಗೆ ಚಾಕು ಇರಿತ Read More »
ಕರ್ನಾಟಕ, ಕ್ರೈಮ್ ನ್ಯೂಸ್
