ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಚುನಾವಣೆ- ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮನವಿ
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ಜಮ್ಮು-ಕಾಶ್ಮೀರದಲ್ಲಿ ದಶಕ ನಂತರ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಅಲ್ಲಿನ ನಾಗರಿಕರಿಗೆ ಮನವಿ ಮಾಡಿದ್ದಾರೆ. ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರಿಗೆ ವಿಶೇಷವಾಗಿ ಮನವಿ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮೊದಲ ಹಂತವು ಪ್ರಾರಂಭವಾಗುತ್ತಿದ್ದಂತೆ, ಇಂದು ಮತದಾನಕ್ಕೆ ಹೋಗುವ ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು […]

