ತೀರ್ಪು ವಿಳಂಬಕ್ಕೆ ಸುಪ್ರೀಂ ಮಹತ್ವದ ಆದೇಶ – ಹೈಕೋರ್ಟ್ಗಳಿಗೆ 3 ತಿಂಗಳ ಗಡುವು, ಜಾಮೀನು ಸಿಕ್ಕ ದಿನವೇ ಬಿಡುಗಡೆ
(ನ್ಯೂಸ್ ಕಡಬ) newskadaba.com, ಮೇ.29: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ತೀರ್ಪುಗಳು ಮತ್ತು ಜಾಮೀನು ಆದೇಶಗಳ ವಿಳಂಬಕ್ಕೆ ಮುಕ್ತಿ ಹಾಡಲು ಸುಪ್ರೀಂಕೋರ್ಟ್ ಶುಕ್ರವಾರ ಒಂದು ಮಹತ್ವದ ನಿರ್ದೇಶನ ನೀಡಿದೆ. ತೀರ್ಪು ನೀಡಲು ವಿಳಂಬ ಮಾಡುವುದರಿಂದ ದಾವೆದಾರರಿಗೆ ತುಂಬಲಾರದ ನಷ್ಟವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಎಲ್ಲಾ ಹೈಕೋರ್ಟ್ಗಳಿಗೆ ಕಟ್ಟುನಿಟ್ಟಾದ ಗಡುವನ್ನು ವಿಧಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಸಂವಿಧಾನದ 142 ನೇ ವಿಧಿಯಡಿ ತಮಗಿರುವ ವಿಶೇಷ ಅಧಿಕಾರವನ್ನು ಬಳಸಿ […]

