ದಕ್ಷಿಣ ಕನ್ನಡ: ಕೇಂದ್ರ ಸರ್ಕಾರದಿಂದ PMABHIM ಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ- ಸಂಸದ ಕ್ಯಾ. ಚೌಟ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್- PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ ಈ ಯೋಜನೆಯಡಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ ಕೇರ್ […]

