breaking news ದ.ಕ. ಇಬ್ಬರಿಗೆ, ಉಡುಪಿ ಒಬ್ಬರಿಗೆ ಕೊರೋನ ಸೋಂಕು ದೃಢ
ಮಂಗಳೂರು, ಮೇ 18: ದ.ಕ. ಜಿಲ್ಲೆಯ ಇಬ್ಬರು ಹಾಗೂ ಉಡುಪಿಯ ಒಬ್ಬರಲ್ಲಿ ಸೋಮವಾರ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54ಕ್ಕೇರಿಕೆಯಾಗಿದೆ. ಮಹಾರಾಷ್ಟ್ರದ ರಾಯಗಡದಿಂದ ಆಗಮಿಸಿ ಕ್ವಾರೆಂಟೈನ್‌ನಲ್ಲಿದ್ದ 30 ವರ್ಷದ ವ್ಯಕ್ತಿ ಹಾಗೂ ನಗರದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಉಸಿರಾಟ ತೊಂದರೆಗೆ ಚಿಕಿತ್ಸೆ ಪಡೆಯುತ್ತಿದ್ದ 55 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಇನ್ನು ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿ ಕ್ವಾರಂಟೈನ್‌ನಲ್ಲಿದ್ದ ಉಡುಪಿಯ ಕೊಲ್ಲೂರಿನ 28 ವರ್ಷದ ಮಹಿಳೆಗೂ ಕೊರೋನ ದೃಢವಾಗಿದೆ.
breaking news ದ.ಕ. ಇಬ್ಬರಿಗೆ, ಉಡುಪಿ ಒಬ್ಬರಿಗೆ ಕೊರೋನ ಸೋಂಕು ದೃಢ Read More »
ಕರಾವಳಿ
