ನಮ್ಮ ಮೆಟ್ರೋ ಸರಣಿ ವ್ಯತ್ಯಯ: ಬಿಎಂಆರ್‌ಸಿಎಲ್‌ಗೆ ಸಮಗ್ರ ತನಿಖೆ ನಡೆಸಲು ರೈಲ್ವೆ ಸುರಕ್ಷತಾ ಆಯುಕ್ತರ ಆದೇಶ
(ನ್ಯೂಸ್ ಕಡಬ) newskadaba.com, ಜು.01: ಬೆಂಗಳೂರು ಮೆಟ್ರೋ ಜಾಲದಲ್ಲಿ ಇತ್ತೀಚೆಗೆ ಪದೇ ಪದೇ ಸಂಭವಿಸುತ್ತಿರುವ ತಾಂತ್ರಿಕ ದೋಷ ಹಾಗೂ ಸೇವಾ ವ್ಯತ್ಯಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು,ಈ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಬಿಎಂಆರ್‌ಸಿಎಲ್‌ಗೆ ಆದೇಶಿಸಿದ್ದಾರೆ. ಜೂನ್ 23 ರಂದು ಪರ್ಪಲ್ ಲೈನ್‌ನಲ್ಲಿ ಉಂಟಾಗಿದ್ದ ತಾಂತ್ರಿಕ ದೋಷದ ಕುರಿತು ತನಿಖೆ ನಡೆಸುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಜೂನ್ 25 ರಂದು ರೈಲ್ವೆ ಸುರಕ್ಷತಾ ಆಯುಕ್ತರಿಗೆ […]

