ಬಂಟ್ವಾಳ ತಾಲೂಕಿನಲ್ಲಿ ವರುಣನ ಆರ್ಭಟ: ಮರ ಬಿದ್ದು ಮನೆಗಳು ಜಖಂ, ನಿರಾಶ್ರಿತರಾದ ನಿವಾಸಿಗಳು
(ನ್ಯೂಸ್ ಕಡಬ) newskadaba.com, ಜು.02: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮೂರು ಮನೆಗಳಿಗೆ ಭಾರಿ ಹಾನಿ ಸಂಭವಿಸಿದೆ. ಅಜೆಕಲ ನಿವಾಸಿ ಚಂದ್ರಶೇಖರ ಅವರ ಮನೆ ಮೇಲೂ ಮರ ಬಿದ್ದಿದ್ದು, ನಿವಾಸವು ವಾಸಕ್ಕೆ ಸಂಪೂರ್ಣ ಅಯೋಗ್ಯಗೊಂಡಿದೆ. ಈ ಹಿನ್ನೆಲೆಯಲ್ಲಿ ಅವರು ಸದ್ಯ ಬಾಡಿಗೆ ಮನೆಯನ್ನು ಆಶ್ರಯಿಸಿದ್ದಾರೆ. ಅಲಂಗಾರು ನಿವಾಸಿ ವನಜಾ ಅವರ ಮನೆಯೂ ಭಾರಿ ಮಳೆಯ ಪರಿಣಾಮ ಹಾನಿಗೊಳಗಾಗಿದೆ ಎಂದು ವರದಿಯಾಗಿದೆ.
ಬಂಟ್ವಾಳ ತಾಲೂಕಿನಲ್ಲಿ ವರುಣನ ಆರ್ಭಟ: ಮರ ಬಿದ್ದು ಮನೆಗಳು ಜಖಂ, ನಿರಾಶ್ರಿತರಾದ ನಿವಾಸಿಗಳು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
