ನೀಟ್ ಪರೀಕ್ಷೆ ಹಿನ್ನೆಲೆ ಟೆಲಿಗ್ರಾಂ ತಾತ್ಕಾಲಿಕ ನಿಷೇಧ: ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ
(ನ್ಯೂಸ್ ಕಡಬ) newskadaba.com ಜೂ.19: ಜೂನ್ 21 ರಂದು ನಡೆಯಲಿರುವ ನೀಟ್ ಮರುಪರೀಕ್ಷೆಯ ಹಿನ್ನೆಲೆಯಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟುವ ಉದ್ದೇಶದಿಂದ ಟೆಲಿಗ್ರಾಂ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದೆ. “ಕೇವಲ ಒಂದು ಪರೀಕ್ಷೆಯ ಕಾರಣಕ್ಕಾಗಿ ದೇಶದ ಸುಮಾರು 15 ಕೋಟಿ (150 ಮಿಲಿಯನ್) ಸಾಮಾನ್ಯ ಬಳಕೆದಾರರ ಡಿಜಿಟಲ್ ಹಕ್ಕುಗಳನ್ನು ನಿರ್ಬಂಧಿಸುವುದು ಎಷ್ಟು ಸರಿ?” ಎಂದು ನ್ಯಾಯಮೂರ್ತಿ ತೇಜಸ್ ಕರಿಯಾ ಅವರು ಕೇಂದ್ರ ಸರ್ಕಾರವನ್ನು ನೇರವಾಗಿ […]

