ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ಭಟ್ಕಳ ತಾಲೂಕಿಗೆ ಸತತ 2ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ
(ನ್ಯೂಸ್ ಕಡಬ)newskadaba.com ಭಟ್ಕಳ, ಅ.04. ಶಿರ್ಸಿ ತಾಲೂಕಿನ ಮಾರಿಕಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳ ತಾಲೂಕು ಸತತ 2 ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗಳಿಸಿದ್ದು, ಭಟ್ಕಳದ ದಿ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ 36 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ದೀಕ್ಷಾ ದೇವಾಡಿಗ 800 ಮೀ., 1,500 ಮೀ., 3,000 ಮೀ,, 4×400 ಮೀ. ರಿಲೆ ಮತ್ತು ಗುಡ್ಡಗಾಡು ಓಟದಲ್ಲಿ ಪ್ರಥಮ ಸ್ಥಾನ […]

