ಪುತ್ತೂರು: ವಿಹಿಂಪ ಕಾರ್ಯಾಲಯ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪುತ್ತಿಲ ಬಳಗ-ಸಂಘ ಪರಿವಾರಗಳ ನಡುವೆ ಜಟಾಪಟಿ
(ನ್ಯೂಸ್ ಕಡಬ) newskadaba.com ಅ.23, ಪುತ್ತೂರು: ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ ವೇಳೆ ಸಂಘ ಪರಿವಾರದ ಕಾರ್ಯಕರ್ತರು ಆಕ್ಷೇಪಿಸಿ ತಡೆದ ಘಟನೆ ಇಂದು ನಡೆದಿದೆ. ಪುತ್ತೂರಿನ ಎಸ್ ಡಿಸಿಸಿ ಬ್ಯಾಂಕ್ ಮುಂಭಾಗದ ಈ ಹಿಂದಿನ ವಿಶ್ವ ಹಿಂದೂ ಪರಿಷತ್ ಕಾರ್ಯಾಲಯವಿದ್ದ ಸ್ಥಳದಲ್ಲಿ ಇಂದು ಶಿಲಾನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಆರಂಭಗೊಳ್ಳುತ್ತಿದ್ದಂತೆ ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಪುತ್ತಿಲ ಪರಿವಾರದ ಹೆಸರಿನಲ್ಲಿ ಪಕ್ಷೇತರನಾಗಿ […]

