ಪುತ್ತೂರು: KSRTC ಬಸ್-ಬೈಕ್ ಭೀಕರ ಅಪಘಾತ, ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com,  ಆ.15 : ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ KSRTC ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.ಅಪಘಾತದ ತೀವ್ರತೆಗೆ ಬೈಕ್ ಸವಾರ ಅಭಿಲಾಷ್ (24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಡವುಕಟ್ಟೆಯಿಂದ ಸವಣೂರು ಕಡೆಗೆ ಚಲಿಸುತ್ತಿದ್ದ KSRTC ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಮೃತ ಅಭಿಲಾಷ್ ಅವರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.

ಪುತ್ತೂರು: KSRTC ಬಸ್-ಬೈಕ್ ಭೀಕರ ಅಪಘಾತ, ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್