ಪೋಕ್ಸೋ ಪ್ರಕರಣ- ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್ ನೀಡಿದೆ. ಬಿಎಸ್ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಬಿಎಸ್ವೈ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನೂ ಮುಂದುವರಿಸಿದೆ. ಸಿಐಡಿ ಮನವಿ ಮೇರೆಗೆ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿತು ಎನ್ನಲಾಗಿದೆ.
ಪೋಕ್ಸೋ ಪ್ರಕರಣ- ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್ Read More »
ಕರ್ನಾಟಕ