ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಆಟೋ – ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್‌ ಕಡಬ) newskadaba.com ,ಜ.10  ಬಂಟ್ವಾಳ: ತಾಲೂಕಿನ ಅಲ್ಲಿಪಾದೆ ಸಮೀಪದ ಉಜಿರಾಡಿಯಲ್ಲಿ ರಿಕ್ಷಾವೊಂದು ಚಾಲಕ‌ನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಉರುಳಿದ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ, ಪೆರಿಯಪಾದೆ ನಿವಾಸಿ ಸಂಶುದ್ದೀನ್ ಹಾಗೂ ಇತರ ನಾಲ್ಕೈದು ಮಂದಿ ವಿದ್ಯಾರ್ಥಿಗಳು ಗಾಯಗೊಂಡು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ತೆರಳಿದ್ದಾರೆ. ಅವರು ಶಾಲೆಯಿಂದ ವಿದ್ಯಾರ್ಥಿಗಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದ್ದು, ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಆಟೋ – ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್