ಬೆಂಗಳೂರಿಂದ ಹೊರಟಿದ್ದ ಖಾಸಗಿ ಬಸ್ ಏಕಾಏಕಿ ಬೆಂಕಿಗಾಹುತಿ – ಮಹಿಳೆಯೊಬ್ಬರ ಸಮಯಪ್ರಜ್ಞೆಯಿಂದ 36 ಜೀವ ಸೇಫ್
(ನ್ಯೂಸ್ ಕಡಬ) newskadaba.com, ಅ.17 ಬೆಂಗಳೂರು: ನಗರದಿಂದ ಹೊರಟಿದ್ದ ಖಾಸಗಿ ಬಸ್‌ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಬಸ್ ಅನಂತಪುರದ ಬಳಿ ಚಲಿಸುತ್ತಿದ್ದಾಗ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರು ಸೇಫ್ ಆಗಿದ್ದಾರೆ. ಗ್ರೀನ್ ಲೈನ್ ಟ್ರಾವೆಲ್ಸ್‌ಗೆ ಸೇರಿದ ಈ ಬಸ್ ಬೆಂಗಳೂರು-ಅನಂತಪುರ ಹೈವೇನಲ್ಲಿ ಹೊರಟಿತ್ತು. ಈ ವೇಳೆ ಟಯರ್ ಬ್ಲಾಸ್ಟ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬ್ಲಾಸ್ಟ್ ಆಗುತ್ತಿದ್ದಂತೆ […]

