ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿಯೇ ಬಿರು ಬೇಸಿಗೆಯ ಅನುಭವ: 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು!
(ನ್ಯೂಸ್ ಕಡಬ) newskadaba.com ಫೆ. 24. ಬೆಂಗಳೂರು: ಸಾಮಾನ್ಯವಾಗಿ ಮಾರ್ಚ್ ತಿಂಗಳ ಆರಂಭದಲ್ಲಿ ಉದ್ಯಾನಗರಿಯಲ್ಲಿ ಅಧಿಕೃತವಾಗಿ ಬೇಸಿಗೆ ಆರಂಭವಾಗುತಿತ್ತು. ಆದರೆ ಈ ಬಾರಿ ಫೆಬ್ರವರಿ ತಿಂಗಳಲ್ಲಿಯೇ ಬಿರು ಬೇಸಿಗೆಯ ಅನುಭವವಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಬೆಂಗಳೂರು ನಗರದಲ್ಲಿ ಭಾನುವಾರ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಕನಿಷ್ಠ ತಾಪಮಾನ 19.7 ಡಿಗ್ರಿ ಇತ್ತು. ಬೆಂಗಳೂರಿನಲ್ಲಿ ಒಣ ಹವೆ ಇರುತ್ತದೆ ಎಂದು IMD ಮುನ್ಸೂಚನೆ ನೀಡಿದ್ದು, ಜನರು ಬೇಸಿಗೆಯ ಉಷ್ಣಾಂಶದಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸಾಮಾನ್ಯವಾಗಿ ಶಿವರಾತ್ರಿಯ ನಂತರ ಚಳಿಗಾಲ […]
