ಬೆಂಗಳೂರಿನಲ್ಲಿ ರಸ್ತೆ ಅಪಘಾತ

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com, ಡಿ.10 ಬೆಂಗಳೂರು: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರು ಸಮೀಪದ ಅಲ್ಲಿಪಾದೆ ಎಂಬಲ್ಲಿನ ಯುವಕ ಮುಹಮ್ಮದ್ ಹಾರಿಸ್ (34) ಮೃತಪಟ್ಟ ಯುವಕ. ಮುಹಮ್ಮದ್ ಹಾರಿಸ್ ಬೆಂಗಳೂರಿನ ಏಸಿ ಕಂಪನಿಯೊಂದರಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದು, ಕೆಲಸದ ನಿಮಿತ್ತ ಇಂದು ತನ್ನ ಸಹೋದ್ಯೋಗಿಯೋರ್ವನೊಡನೆ ಬೈಕಿನಲ್ಲಿ ತೆರಳುತ್ತಿದ್ದಾಗ ಗೂಡ್ಸ್ ವಾಹನವು ಹಿಂಬದಿಯಿಂದ ಢಿಕ್ಕಿಯಾಗಿದೆ […]

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ರಸ್ತೆ ಅಪಘಾತ, ಬೈಕ್‌ಗಳು ಗುದ್ದಿಕೊಂಡು ಸವಾರರಿಬ್ಬರ ಸಾವು

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಬೆಂಗಳೂರಿನ ಹೃದಯ ಭಾಗದಲ್ಲಿ ಒಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಪ್ಲೈಓವರ್‌ನಲ್ಲಿ ಎರಡು ಬೈಕುಗಳ ನಡುವೆ ಡಿಕ್ಕಿಯಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಕಾಶ್ ಹಾಗೂ ಅಫ್ಜಲ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿ ವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಬೆಂಗಳೂರಿನಲ್ಲಿ ರಸ್ತೆ ಅಪಘಾತ, ಬೈಕ್‌ಗಳು ಗುದ್ದಿಕೊಂಡು ಸವಾರರಿಬ್ಬರ ಸಾವು Read More »

ಕರ್ನಾಟಕ
Scroll to Top