ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಾಲೆ ತಪ್ಪಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ; ಶಿಕ್ಷಕನಿಗೆ ನೋಟಿಸ್
(ನ್ಯೂಸ್ ಕಡಬ) newskadaba.com, ಅ..24 ಬೆಂಗಳೂರು: ಶಾಲೆಗೆ ಚಕ್ಕರ್ ಹಾಕಿದ್ದಾನೆ ಎಂಬ ಕಾರಣಕ್ಕೆ ವಿದ್ಯಾರ್ಥಿಯ ಮೈಯಲ್ಲಿ ಬಾಸುಂಡೆ ಬರುವಂತೆ ದಂಡಿಸಿದ್ದ ನಗರದ ಖಾಸಗಿ ಶಾಲೆಯ ಶಿಕ್ಷಕ ಮತ್ತು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ನೋಟಿಸ್ ಜಾರಿ ಮಾಡಿದೆ.ಸುಂಕದಕಟ್ಟೆ ಪೈಪ್ಲೈನ್ ರಸ್ತೆಯಲ್ಲಿರುವ ಖಾಸಗಿ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯನ್ನು ಶಾಲೆಯ ಶಿಕ್ಷಕರೊಬ್ಬರು ಕೊಠಡಿಯಲ್ಲಿ ಕೂಡಿಹಾಕಿ ಅಮಾನವೀಯವಾಗಿ ದಂಡಿಸಿದ್ದರು. ಇದಾದ ನಂತರ ಮಗು ವಿಚಿತ್ರವಾಗಿ ವರ್ತಿಸುತ್ತಿದೆ. ಶಾಲೆಗೆ ಹೋಗಲು ಹೆದರುತ್ತಿದೆ ಎಂದು ಮಗುವಿನ ಪೋಷಕರು ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದರು. […]

